ಬ್ರೇಕಿಂಗ್ ನ್ಯೂಸ್
11-02-25 12:37 pm HK News Desk ಕರ್ನಾಟಕ
ಮೈಸೂರು, ಫೆ.11: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಏಕಾಏಕಿ ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸಿದ ಘಟನೆ ನಿನ್ನೆ ರಾತ್ರಿ ನಡೆದಿದ್ದು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ದೆಹಲಿ ಚುನಾವಣೆ ಫಲಿತಾಂಶದ ಬಗ್ಗೆ ಅಣಕಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದನ್ನು ವಿರೋಧಿಸಿ ಮುಸ್ಲಿಂ ಯುವಕರು ಉದ್ರಿಕ್ತರಾಗಿದ್ದರು.
ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಾನೆಂದು ಆರೋಪಿಸಿ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ಸಂಬಂಧಿಸಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಸುರೇಶ್ ಎಂಬ ಯುವಕನನ್ನು (32) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಬಂಧಿಸಲು ಒತ್ತಾಯಿಸಿ ಸೋಮವಾರ ರಾತ್ರಿ ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ಸಾವಿರಾರು ಮುಸ್ಲಿಮರು ಏಕಾಏಕಿ ಜಮಾವಣೆಗೊಂಡು ಕಲ್ಲು ತೂರಾಟ ನಡೆಸಿದ್ದರು.
ಪೋಸ್ಟ್ ವೈರಲ್ ಬೆನ್ನಲ್ಲೇ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಅಷ್ಟರಲ್ಲೇ ಯುವಕರು ಜಮಾಯಿಸಿ ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸರು, ಕೆಲ ಧಾರ್ಮಿಕ ಮುಖಂಡರು ಶಾಂತಿ ಕಾಪಾಡುವಂತೆ ಮನವರಿಕೆ ಮಾಡಿದರೂ ಏಕಾಏಕಿ ಘೋಷಣೆ ಕೂಗುತ್ತಾ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದರು. ಪೊಲೀಸರು ಬಳಿಕ ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ಘಟನೆಯಲ್ಲಿ ಕೆಲವರಿಗೆ ಕಲ್ಲೇಟಿನಿಂದ ಗಾಯವಾಗಿದೆ. ಶಾಂತಿನಗರ ಮುಖ್ಯರಸ್ತೆ, ಮಹದೇವಪುರ ರಸ್ತೆ ಬಂದ್ ಮಾಡಿ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ದೆಹಲಿ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಕೇಜ್ರಿವಾಲ್, ಅಖಿಲೇಶ್ ಯಾದವ್ ಅವರ ಅರೆನಗ್ನ ಫೋಟೊ ಸೃಷ್ಟಿಸಿ, ಅವರ ತೊಡೆಯಲ್ಲಿ ವ್ಯಕ್ತಿಯೊಬ್ಬರು ನಮಾಜ್ ಮಾಡುತ್ತಿರುವಂತೆ ಬುರ್ಖಾ ಧರಿಸಿದ ಮಹಿಳೆಯಂತೆ ಚಿತ್ರಿಸಲಾಗಿತ್ತು. ಮೈ ತುಂಬಾ ಅರೇಬಿಕ್ ಬರಹಗಳನ್ನು ಹಾಕಿದ್ದು, ಅದಕ್ಕೆ ತ್ರೀ ಈಡಿಯೆಟ್ಸ್ ಎಂದು ಶೀರ್ಷಿಕೆ ನೀಡಲಾಗಿತ್ತು. ಈ ಪೋಸ್ಟ್ ಮಾಡಿದ್ದನ್ನೇ ಮುಸ್ಲಿಂ ಯುವಕರು ಧಾರ್ಮಿಕ ಭಾವನೆಗೆ ಘಾಸಿಗೊಳಿಸಿದ್ದಾಗಿ ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಠಾಣೆ ಮುಂಭಾಗದಲ್ಲಿ ಕಲ್ಲು ರಾಶಿ ಬಿದ್ದಿದ್ದು ಇಷ್ಟೊಂದು ಕಲ್ಲುಗಳು ಹೇಗೆ ಬಿದ್ದವು, ಮೊದಲೇ ಯೋಜನೆ ಹಾಕಿದ್ದರೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
Tensions rose in Karnataka's Mysuru district after a social media post surfaced which had derogatory remarks written in Arabic script along with edited images of Arvind Kejriwal, Rahul Gandhi and Akhilesh in an offensive manner. The post also contained rude remarks against Muslim religious leaders, meant to hurt religious sentiments.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm