ಬ್ರೇಕಿಂಗ್ ನ್ಯೂಸ್
11-02-25 02:21 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.11: ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿ ತನಿಖೆ ಎದುರಿಸುತ್ತಿರುವ ವಿಶ್ವವಿದ್ಯಾಲಯಗಳಿಗೆ ಐದು ವರ್ಷಗಳ ನಿಷೇಧ ಮತ್ತು ಪ್ರಕರಣದಲ್ಲಿ ಭಾಗಿಯಾದ ಸಮಿತಿಯ ಸದಸ್ಯರಿಗೆ ಜೀವತಾವಧಿಗೆ ಸದಸ್ಯತ್ವ ನಿಷೇಧ ವಿಧಿಸಿರುವುದಾಗಿ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್) ಹೇಳಿಕೆ ಬಿಡುಗಡೆ ಮಾಡಿದೆ.
ಪತ್ರಿಕಾ ಹೇಳಿಕೆ ನೀಡಿರುವ ಮಂಡಳಿ, ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳ ಪ್ರಕಾರ ವಿಶ್ವವಿದ್ಯಾನಿಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ‘ನ್ಯಾಕ್’ ಮಾನ್ಯತೆ ನೀಡುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಬರುವ ಏಪ್ರಿಲ್‌ನಿಂದಲೇ ಜಾರಿಗೊಳಿಸಲಾಗುತ್ತಿದೆ. ನ್ಯಾಕ್ ಮಾನ್ಯತೆ ಪಡೆಯದ ಹೊಸ ಕಾಲೇಜುಗಳು ಬೈನರಿ ಮಾನ್ಯತೆ ಕೋರಿ ಅರ್ಜಿ ಸಲ್ಲಿಸಬಹುದು. ಹೊಸ ಮಾನ್ಯತಾ ಪರಿಕಲ್ಪನೆಗಳ ಜಾರಿಯ ನಂತರ ಹಿಂದಿನ ನ್ಯಾಕ್ ಶ್ರೇಣಿ ಪದ್ಧತಿಗಳು ಕ್ರಮೇಣ ರದ್ದಾಗಲಿವೆ ಎಂದು ಮಾಹಿತಿ ನೀಡಿದೆ.
ಆಂಧ್ರಪ್ರದೇಶದ ಗುಂಟೂರಿನ ಕೋನೇರು ಲಕ್ಷ್ಮಯ್ಯ ಎಜುಕೇಷನ್ ಫೌಂಡೇಷನ್ (ಕೆಎಲ್‌ಇಎಫ್) ನ್ಯಾಕ್‌ನಿಂದ ‘ಎ’ ಪ್ಲಸ್ ಗ್ರೇಡ್ ಪಡೆಯಲು ಲಂಚ ನೀಡಿದ ಆರೋಪ ಕೇಳಿಬಂದಿತ್ತು. ಸಮಿತಿಯ ಏಳು ಸದಸ್ಯರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದೆ. ಪ್ರಕರಣದಲ್ಲಿ ದಾವಣಗೆರೆ ವಿವಿ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ, ಬೆಂಗಳೂರು ವಿವಿಯ ಪ್ರಾಧ್ಯಾಪಕ ಮತ್ತು ಐಕ್ಯುಎಸಿ–ನ್ಯಾಕ್ ನಿರ್ದೇಶಕ ಎಂ.ಹನುಮಂತಪ್ಪ ಸಮಿತಿಯಲ್ಲಿದ್ದು ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದಾರೆ. ಸಮಿತಿ ಭೇಟಿ ನೀಡಿದ್ದ ಕಾಲೇಜುಗಳಿಗೆ ಪುನರ್ ಪರಿಶೀಲನೆಗಾಗಿ ಮತ್ತೊಂದು ಸಮಿತಿ ಕಳುಹಿಸಿಕೊಡಲು ಮಂಡಳಿ ಕಾರ್ಯಕಾರಿ ಸಮಿತಿ ಸಭೆ ತೀರ್ಮಾನ ತೆಗೆದುಕೊಂಡಿದೆ.
ಪ್ರಕರಣದಲ್ಲಿ ಭಾಗಿಯಾದ ವಿಶ್ವವಿದ್ಯಾಲಯಗಳು ಐದು ವರ್ಷ ಮಾನ್ಯತೆಗಾಗಿ ಅರ್ಜಿ ಸಲ್ಲಿಸುವಂತಿಲ್ಲ. ಆರೋಪಕ್ಕೀಡಾದ ಸಮಿತಿ ಸದಸ್ಯರನ್ನು ಮೌಲ್ಯಮಾಪನ ಕಾರ್ಯಗಳಿಂದಲೂ ಹೊರಗಿಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಂಡಳಿ ಹೇಳಿದೆ.
ವಿಶ್ವವಿದ್ಯಾಲಯದಲ್ಲಿ ಮೂಲಸೌಕರ್ಯಗಳು, ಸಂಶೋಧನೆ, ವೈಜ್ಞಾನಿಕ ಉಪಕರಣಗಳು, ಬೋಧನೆ, ಸಂಶೋಧನೆಗಳಿಗೆ ಪೇಟೆಂಟ್ ಬಂದಿರುವುದು, ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳ ಮಂಡನೆ, ಸಂಶೋಧನಾ ಚಟುವಟಿಕೆಗೆ ತಂತ್ರಜ್ಞಾನದ ಅಳವಡಿಕೆ ಮತ್ತಿತರ ಅಂಶಗಳನ್ನು ಆಧರಿಸಿ ನ್ಯಾಕ್ ಸಮಿತಿ ಕಾಲೇಜುಗಳಿಗೆ ಅಂಕ ಮತ್ತು ಗ್ರೇಡ್‌ಗಳನ್ನು ನೀಡುತ್ತದೆ.
The National Assessment and Accreditation Council (NAAC), the autonomous accreditation body for higher education institutes, has debarred Koneru Lakshmaiah Education Foundation (KLEF) in Guntur, Andhra Pradesh, for five years from applying for certification on Saturday.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm