ಬ್ರೇಕಿಂಗ್ ನ್ಯೂಸ್
11-02-25 03:40 pm HK News Desk ಕರ್ನಾಟಕ
ಮೈಸೂರು, ಫೆ.11: ಜಾಲತಾಣದಲ್ಲಿ ಪೋಸ್ಟ್ ಹಾಕಿದ ನೆಪದಲ್ಲಿ ಕಲ್ಲು ತೂರಾಟ, ಹಿಂಸಾಚಾರ ನಡೆಸಿದ ಪ್ರಕರಣ ಹಿನ್ನೆಲೆಯಲ್ಲಿ ಉದಯಗಿರಿ ಪೊಲೀಸ್ ಠಾಣೆ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಆರಕ್ಕೂ ಹೆಚ್ಚು ಕೆಎಸ್ಆರ್ ಪಿ ತುಕಡಿಗಳನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದ್ದು ಎಂಟಕ್ಕೂ ಹೆಚ್ಚು ಪೊಲೀಸ್ ಇನ್ಸ್ ಪೆಕ್ಟರ್ ಗಳು ಭದ್ರತಾ ವ್ಯವಸ್ಥೆ ಪರಿಶೀಲಿಸುತ್ತಿದ್ದಾರೆ. ಇದೇ ವೇಳೆ, ಎಡಿಜಿಪಿ ಹಿತೇಂದ್ರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಲ್ಲು ತೂರಾಟ ಘಟನೆಯಲ್ಲಿ ಇನ್ಸ್ ಪೆಕ್ಟರ್ ಸೇರಿ 14 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಎಸಿಪಿ ಶಾಂತಾ ಮಲ್ಲಪ್ಪ, ನಜರಬಾದ್ ಇನ್ಸ್ಪೆಕ್ಟರ್ ಮಹದೇವಸ್ವಾಮಿ ಸೇರಿ 14 ಮಂದಿಗೆ ಕಲ್ಲೇಟು ಬಿದ್ದಿದೆ. ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು 10 ಕ್ಕೂ ಪೊಲೀಸ್ ವಾಹನಗಳ ಮೇಲೆ ಕಲ್ಲೂ ತೂರಾಟ ಮಾಡಲಾಗಿದೆ.
ಇದೇ ವೇಳೆ, ಉದಯಗಿರಿ ಠಾಣೆ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನ ಪೊಲೀಸರು ಪರಿಶೀಲನೆ ನಡೆಸಿದ್ದು ಸಿಸಿಟಿವಿ ದೃಶ್ಯ ಆಧಾರಿಸಿ ಪುಂಡರ ಪತ್ತೆಗೆ ಮುಂದಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಎಡಿಜಿಪಿ ಹಿತೇಂದ್ರ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ಉದಯಗಿರಿ ಗಲಾಟೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ. ಗಲಾಟೆ ಮಾಡಿದವರ ಬಂಧನಕ್ಕೆ ಸ್ಥಳೀಯ ಪೊಲೀಸರನ್ನು ಒಳಗೊಂಡ ತಂಡ ರಚನೆ ಮಾಡಲಾಗಿದೆ. ಪೋಸ್ಟ್ ಹಾಕಿದ ವಿಚಾರದಲ್ಲಿ ಆರೋಪಿಯನ್ನ ಬೇಗ ಬಿಟ್ಟು ಬಿಡ್ತಾರೆ ಅಂತ ಕೆಲವರು ಗಲಾಟೆ ಮಾಡಿದ್ದಾರೆ. ಪೋಸ್ಟರ್ ವಿಚಾರದಲ್ಲಿ ಕೆಲವು ವಂದತಿ ಹಬ್ಬಿದ್ದಕ್ಕೆ ಗಲಾಟೆ ಉಂಟಾಗಿದೆ. ಗಲಾಟೆಯ ಹಿಂದೆ ಯಾರಿದ್ದಾರೆ, ಯಾವುದಾದರೂ ಸಂಘಟನೆ ಇದ್ಯಾ ಎಂಬುದರ ಬಗ್ಗೆ ತನಿಖೆ ಬಳಿಕ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.
ಈ ನಡುವೆ, ಗಲಭೆ ಘಟನೆಗೆ ಸಿದ್ದರಾಮಯ್ಯ ಅವರು ಮುಸ್ಲಿಮರ ಬಗ್ಗೆ ಇಟ್ಟಿರುವ ಮೃದು ಧೋರಣೆಯೇ ಕಾರಣ. ಪೊಲೀಸರನ್ನೇ ಗುರಿಯಾಗಿಸಿ ಯಾವಾಗಲೂ ದಾಳಿ ಆಗುತ್ತದೆ. ಗಲಾಟೆ ಮಾಡಿದವರು ಟಿಪ್ಪು ಸಂತತಿಯವರು. ಸಿದ್ದರಾಮಯ್ಯ ಅವರದು ತಾಲಿಬಾನಿ ಸರಕಾರ. ಪುಂಡ ಮುಸ್ಲಿಮರಿಗೆ ಸಿದ್ದರಾಮಯ್ಯ ಫ್ರೀ ಬಿಟ್ಟಿದ್ದಾರೆ. ಅದಕ್ಕೆ ಈ ರೀತಿ ಗಲಾಟೆ. ಅರವಿಂದ್ ಕೇಜ್ರಿವಾಲ್ ಸೋತರೆ ಉದಯಗಿರಿ ಮುಸ್ಲಿಮರಿಗೆ ಯಾಕೆ ರೋಷ ಬರುತ್ತೆ? ಅವರ ಮನೆಯಲ್ಲಿ ಯಾಕೆ ಸೂತಕ ಬರುತ್ತೆ? ಪುಂಡಾ ಮುಸ್ಲಿಮರಿಗೆ ಬುದ್ದಿ ಕಲಿಸಲು ಉದಯಗಿರಿ ವ್ಯಾಪ್ತಿಯಲ್ಲಿ ಪೊಲೀಸರು ಕೂಬಿಂಗ್ ಮಾಡಬೇಕು. ಕಲ್ಲು ಹೊಡೆಯುವುದು ಮುಸ್ಲಿಂ ಧರ್ಮದಲ್ಲೇ ಇದೆ, ಆ ಕೆಲಸ ಅವರು ಮಾಡ್ತಿದ್ದಾರೆ ಅಷ್ಟೆ ಎಂದು ವಾಗ್ದಾಳಿ ಮಾಡಿದ್ದಾರೆ.
ಸಂಸದ ಪ್ರತಾಪಸಿಂಹ ಪ್ರಚೋದನಕಾರಿ ಹೇಳಿಕೆ ನೀಡುತ್ತಾರೆಂದು ಉದಯಗಿರಿ ಪ್ರದೇಶಕ್ಕೆ ಬರಲು ಪೊಲೀಸರು ಅವಕಾಶ ನೀಡಿಲ್ಲ. ಕ್ಯಾತಮಾರನಹಳ್ಳಿಗೆ ಬಂದಾಗಲೂ ಮಾಜಿ ಪ್ರತಾಪ್ ಸಿಂಹರನ್ನು ಪೊಲೀಸರು ಅಲ್ಲಿಂದ ಹಿಂದಕ್ಕೆ ಕಳುಹಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಗೆ ಆಗಮಿಸಿದಾಗಲೂ ಬಿಡದೆ ಹೊರಗೆ ಕಳುಹಿಸಿದರು. ಕ್ಯಾತಮಾರನಹಳ್ಳಿ ಹುಲಿಯಮ್ಮ ದೇವಸ್ಥಾನದ ಬಳಿ ಬಂದಿದ್ದ ಪ್ರತಾಪ್‌ಸಿಂಹ, ನಗರಾಧ್ಯಕ್ಷ ಎಲ್.ನಾಗೇಂದ್ರ, ಬಿಜೆಪಿಯ ಗಿರಿಧರ್, ಸಂದೇಶ್ ಸ್ವಾಮಿ ಅವರು ಸ್ಥಳೀಯರ ಜೊತೆ ಮಾತುಕತೆ ನಡೆಸುತ್ತಿದ್ದಾಗಲೇ ಎಸಿಪಿ ಹಾಗೂ ಇನ್ಸ್‌ಪೆಕ್ಟರ್‌ಗಳು ಬಂದು ತಕ್ಷಣ ಇಲ್ಲಿಂದ ತೆರಳುವಂತೆ ಮನವಿ ಮಾಡಿ ಪೊಲೀಸ್ ಭದ್ರತೆಯಲ್ಲಿ ಹೊರಗೆ ಕಳುಹಿಸಿದರು.
At least 14 Karnataka Police personnel, including an ACP and an inspector, were injured in stone pelting by youths in a Muslim-dominated area in Mysuru’s Udaygiri following protests over a morphed picture of social media showing opposition leaders wearing skull caps.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm