ಬ್ರೇಕಿಂಗ್ ನ್ಯೂಸ್
11-02-25 11:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.11: ನಗರದ ಅರಮನೆ ಆವರಣದಲ್ಲಿ ಆಯೋಜಿಸಲಾಗಿರುವ "Invest Karnataka 2025" ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಚಾಲನೆ ನೀಡಿದರು. ಮೂರು ದಿನಗಳ ಸಮಾವೇಶ ಪ್ರತಿಷ್ಠಿತ ಕಂಪನಿಗಳೊಂದಿಗೆ ಹೂಡಿಕೆ ಒಪ್ಪಂದ, ವಿಚಾರ ಸಂಕಿರಣ, ನೀತಿ ಘೋಷಣೆಗೆ ಸಾಕ್ಷಿಯಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ್, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಮಹೀಂದ್ರ ಸಮೂಹದ ಮುಖ್ಯಸ್ಥ ಆನಂದ್ ಮಹೀಂದ್ರ, ಜೆಎಸ್ ಡಬ್ಲ್ಯೂ ಗ್ರೂಪ್ ಮುಖ್ಯಸ್ಥ ಸಜ್ಜನ್ ಜಿಂದಾಲ್, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ, ಕಿರ್ಲೋಸ್ಕರ್ ಸಿಸ್ಟಮ್ ಮುಖ್ಯಸ್ಥ ಗೀತಾಂಜಲಿ ಕಿರ್ಲೋಸ್ಕರ್, ಹಿರೋ ಪ್ಯೂಚರ್ ಎನರ್ಜಿ ಮುಖ್ಯಸ್ಥ ರಾಹುಲ್ ಮುಂಜಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ನಾವೀನ್ಯತೆ, ಕೈಗಾರಿಕಾ ಅಭಿವೃದ್ಧಿ ಮತ್ತು ಜಾಗತಿಕ ಪಾಲುದಾರಿಕೆ ಉತ್ತೇಜಿಸುವಲ್ಲಿ ಕರ್ನಾಟಕದಲ್ಲಿನ ಕಾರ್ಯತಂತ್ರದ ಅನುಕೂಲಗಳನ್ನು ಎತ್ತಿ ತೋರಿಸುವ ಗುರಿಯನ್ನು ಹೊಂದಿರುವ ಮೂರು ದಿನಗಳ ಜಾಗತಿಕ ಹೂಡಿಕೆದಾರರ ಸಭೆಯು ಫೆಬ್ರವರಿ 14ರ ವರೆಗೆ ನಡೆಯಲಿದೆ. 75 ಕ್ಕೂ ಹೆಚ್ಚು ಮಳಿಗೆಗಳು, 25 ಕ್ಕೂ ಹೆಚ್ಚು ತಾಂತ್ರಿಕ ಸೆಷನ್‌ಗಳು, 10 ಕ್ಕೂ ಹೆಚ್ಚು ದೇಶದ ಸೆಷನ್ಸ್ ಮತ್ತು SME ಸಂಬಂಧಿತ ಚರ್ಚೆಗಳನ್ನು ಒಳಗೊಂಡಿರುವ ಸಮಾವೇಶವು ಜಾಗತಿಕ ಆರ್ಥಿಕ ಪ್ರವೃತ್ತಿಗಳು, ಹೊಸ ತಂತ್ರಜ್ಞಾನಗಳ ಬಗ್ಗೆ ಮಹತ್ವದ ಮಾಹಿತಿ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ
ಇನ್ನು ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇಂದು ವ್ಹೀಲ್ ಚೇರ್ನಲ್ಲಿ ಆಗಮಿಸಿದರು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಸಮಾವೇಶ ಉದ್ಘಾಟನೆಗೊಂಡ ಬಳಿಕವೂ ರಾಜನಾಥ್ ಸಿಂಗ್ ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯ ಅವರ ಮೊಣಕಾಲಿನ ನೋವಿನ ಬಗ್ಗೆ ಪ್ರಸ್ತಾಪಿಸಿ ಶೀಘ್ರ ಗುಣಮುಖರಾಗಿ ಎಂದಿನಂತೆ ತಮ್ಮ ಕೆಲಸದಲ್ಲಿ ಸಕ್ರಿಯರಾಗುವಂತೆ ಹಾರೈಸಿದರು. ನಂತರ ಸಿಂಗ್ ತಮ್ಮ ಭಾಷಣ ಮುಂದುವರೆಸಿದರು.
ಹೂಡಿಕೆದಾರರಿಗೆ ಉದ್ಯಮ ಸ್ನೇಹಿ ವಾತಾವರಣ
ಹೂಡಿಕೆದಾರರಿಗೆ ಕಾನೂನು ಸುವ್ಯವಸ್ಥೆ ಪಾಲನೆಯನ್ನೂ ಒಳಗೊಂಡು ಸುಭದ್ರವಾದ ಉದ್ಯಮ ಸ್ನೇಹಿ ವಾತಾವರಣ ಕಲ್ಪಿಸಲು ರಾಜ್ಯ ಸರ್ಕಾರವು ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ಭಾರತದ ಆರ್ಥಿಕತೆಯ ಪರಿವರ್ತನೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ಇಂದು ದೇಶದಲ್ಲಿಯೇ ಕರ್ನಾಟಕ ಅತ್ಯಂತ ಹೂಡಿಕೆದಾರ ಸ್ನೇಹಿ ರಾಜ್ಯವೆಂಬ ನಮ್ಮ ಬದ್ಧತೆಯನ್ನು ಮತ್ತೊಮ್ಮೆ ಧೃಢೀಕರಿಸುತ್ತಿದ್ದೇವೆ ಎಂದರು.
ಕೃತಕ ಬುದ್ಧಿಮತ್ತೆ, ರೋಬೋಟಿಕ್ಸ್ ಸ್ಪೇಸ್ ಮತ್ತು ಬಯೋಟೆಕ್ ನಲ್ಲಿ 400 ಕ್ಕೂ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ಹೊಂದಿರುವ ರಾಜ್ಯವು ಭಾರತದ ಬೌದ್ಧಿಕ ಕೇಂದ್ರವಾಗಿ ತಲೆಎತ್ತಿದೆ. ಪ್ರವರ್ಧಮಾನಕ್ಕೆ ಬರುತ್ತಿರುವ ವಲಯಗಳಲ್ಲಿ ಶೈಕ್ಷಣಿಕ ಸಂಸ್ಥೆ ಹಾಗೂ ಉದ್ಯಮಗಳ ಸಹಭಾಗಿತ್ವದಲ್ಲಿ ಯುವಕರಿಗೆ ತರಬೇತಿಯನ್ನು ಸಕ್ರಿಯವಾಗಿ ನೀಡಲಾಗುತ್ತಿದೆ.
ಜವಾಬ್ದಾರಿಯುತ, ಸುಸ್ಥಿರ ಬೆಳವಣಿಗೆಗೆ ಆದ್ಯತೆ ನೀಡುವ ಕರ್ನಾಟಕ, ಹಸಿರು ಆರ್ಥಿಕತೆ, ಪರಿಸರ ಸ್ನೇಹಿ ಕೈಗಾರಿಕಾ ಸಮುಚ್ಚಯಗಳು ಹಾಗೂ ಸುಸ್ಥಿರ ನಗರಾಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ. ಭಾರತದ ಸೌರ ಶಕ್ತಿ ಉತ್ಪಾದನೆಯಲ್ಲಿ ಕರ್ನಾಟಕ ಮಂಚೂಣಿಯಲ್ಲಿದ್ದು, ಪವನ ಶಕ್ತಿ, ಎಲೆಕ್ಟ್ರಿಕ್ ಮೊಬಿಲಿಟಿ ಮತ್ತು ಸುಸ್ಥಿರ ನಗರಾಭಿವೃದ್ದಿಯಲ್ಲಿಯೂ ನಾಯಕತ್ವ ವಹಿಸಿದೆ ಎಂದು ವಿವರಿಸಿದರು.
Defence Minister Rajnath Singh inaugurated the Global Investors' Meet titled Invest Karnataka-2025 here on Tuesday. Singh sowed the seed of innovation and prosperity in Karnataka, marking the beginning of the three-day event, which will witness agreements, a series of seminars, policy announcements and challenges for startups.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm