ಬ್ರೇಕಿಂಗ್ ನ್ಯೂಸ್
13-02-25 07:28 pm HK News Desk ಕರ್ನಾಟಕ
ಗಂಗಾವತಿ, ಫೆ.13: ದೇಗುಲಗಳ ಕಟ್ಟಡ ವಿನ್ಯಾಸ ಮತ್ತು ನಿರ್ಮಾಣದಲ್ಲಿ ಹೆಸರು ಮಾಡಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಂ.ಕೆ.ಟೆಂಪಲ್ ಕನ್ಸ್ಟ್ರಕ್ಷನ್ ಮಾಲೀಕ, ಯುವ ಇಂಜಿನಿಯರ್ ಒಬ್ಬರು ನಗರದ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಬ್ರಹ್ಮಾವರದ ವಿನಯ್ ಕುಮಾರ್ (38) ಎಂದು ಗುರುತಿಸಲಾಗಿದೆ. ನಗರದ ಕನಕಗಿರಿ ರಸ್ತೆಯಲ್ಲಿರುವ ಕೃಷಿ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ ಸಮೀಪದಲ್ಲಿ ಬಾಡಿಗೆ ಮನೆಯಲ್ಲಿ ಇವರು ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿನಯ್ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಗಾವತಿಯ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಬ್ರಹ್ಮಾವರದಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಮೃತನ ಸಂಬಂಧಿಕರು ತಿಳಿಸಿದ್ದಾರೆ.
ಹತ್ತಾರು ದೇಗುಲಗಳ ನಿರ್ಮಾತೃ
ಗಂಗಾವತಿ ಜಿಲ್ಲೆಯಲ್ಲಿದ್ದುಕೊಂಡೇ ಆಕರ್ಷಕ ಶೈಲಿಯ ದೇಗುಲಗಳ ನಿರ್ಮಾಣದಲ್ಲಿ ವಿನಯ್ ಕೆಲಸ ಮಾಡಿದ್ದರು. ಗ್ರಾನೈಟ್, ಅಮೃತ ಶಿಲೆ ಸೇರಿದಂತೆ ಸ್ಥಳೀಯವಾಗಿ ಲಭ್ಯವಾಗುವ ಕಚ್ಚಾ ಸಾಮಗ್ರಿ, ಶಿಲೆಗಳನ್ನು ಬಳಸಿಕೊಂಡು ಅತ್ಯಾಕರ್ಷಕ ಶೈಲಿಯಲ್ಲಿ ದೇವಾಲಯಗಳನ್ನು ನಿರ್ಮಿಸುತ್ತಿದ್ದರು. ಗಂಗಾವತಿಯ ನ್ಯಾಯಾಲಯದ ಮುಂದಿರುವ ಕೊಟ್ಟೂರು ಬಸವೇಶ್ವರ ದೇವಸ್ಥಾನ, ಕನಕಗಿರಿ ರಸ್ತೆಯಲ್ಲಿರುವ ಹಾಲುಮತ ಸಮಾಜದ ಬೀರಲಿಂಗೇಶ್ವರ ದೇಗುಲ, ಕಿಂದಿಕ್ಯಾಂಪಿನಲ್ಲಿರುವ ರಾಮ ದೇಗುಲಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಂಡಿದ್ದರು.
ಗಂಗಾವತಿ ತಾಲೂಕಿನ ಕೋಟಯ್ಯ ಕ್ಯಾಂಪಿನಲ್ಲಿ ಕೋಟ್ಯಂತರ ರೂಪಾಯಿ ಮೊತ್ತದಲ್ಲಿ ಶ್ರೀರಾಮ ದೇವರ ದೇವಸ್ಥಾನ ನಿರ್ಮಾಣವನ್ನು ವಿನಯ್ ಕುಮಾರ್ ನೇತೃತ್ವದಲ್ಲಿ ಮಾಡಲಾಗಿತ್ತು.
A young engineer from Udupi, identified as Vinay Kumar, has tragically died by suicide in Gangavathi. He was known for his work building temples
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm