ಬ್ರೇಕಿಂಗ್ ನ್ಯೂಸ್
19-02-25 07:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣದಲ್ಲಿ ಪ್ರಮುಖ ಆರೋಪಿಯೆಂದು ಗುರುತಿಸಲ್ಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ತಿಗೊಳಿಸಿರುವ ಲೋಕಾಯುಕ್ತ ಪೊಲೀಸರು ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಅಂತಿಮ ವರದಿ ಸಲ್ಲಿಕೆಗೆ ಹೆಚ್ಚುವರಿ ಕಾಲಾವಕಾಶ ಕೇಳಿರುವ ಲೋಕಾಯುಕ್ತ ಇದರ ನಡುವೆಯೇ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ರೆಡಿ ಮಾಡಿಕೊಂಡಿದೆ.
ಇದಕ್ಕೆ ಪೂರಕವಾಗಿ ಲೋಕಾಯುಕ್ತ ಅಧಿಕಾರಿಗಳು ದೂರುದಾರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ನೋಟಿಸ್ ನೀಡಿದ್ದು, ಅದರಲ್ಲಿ ಸಾಕ್ಷ್ಯಾಧಾರ ಕೊರತೆ ಬಗ್ಗೆ ಉಲ್ಲೇಖಿಸಿದ್ದಾರೆ. ನೀವು ಮಾಡಿರುವ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ ಎಂದು ನೋಟೀಸಿನಲ್ಲಿ ತಿಳಿಸಿದೆ.
ತನಿಖೆ ಪೂರ್ತಿಗೊಳಿಸಿ ಎಡಿಜಿಪಿಗೆ ವರದಿ ಸಲ್ಲಿಸಿದ್ದ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್, ಇದೀಗ ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿದ್ದಾರೆ. ನೀವು ನೀಡಿದ ದೂರಿನಂತೆ, ಆರೋಪಿಗಳನ್ನು ವಿಚಾರಣೆ ನಡೆಸಲಾಗಿದೆ. ಇದು ಸಿವಿಲ್ ಸ್ವರೂಪ್ಪದ್ದಾಗಿದ್ದು, ತನಿಖೆ ನಡೆಸಲು ತಕ್ಕುದಾಗಿಲ್ಲ. ಕಾನೂನಿನ ತಪ್ಪು ತಿಳುವಳಿಕೆಯಿಂದ ದೂರು ನೀಡಿರುವಂತಿದೆ. ಅಲ್ಲದೆ, ದೂರಿನಲ್ಲಿ ಈ ಹಿಂದೆ ವಜಾ ಮಾಡಿದ ಪ್ರಕರಣಗಳನ್ನೂ ಉಲ್ಲೇಖಿಸಿದ್ದೀರಿ. ಇದಕ್ಕೆಲ್ಲ ಸಾಕಷ್ಟು ಸಾಕ್ಷ್ಯಾಧಾರಗಳು ಇಲ್ಲ ಎಂದು ನೋಟಿಸ್ ಮಾಡಿದ್ದಾರೆ.
ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸುತ್ತಿದ್ದು ನಿಮ್ಮ ವಿರೋಧವಿದ್ದರೆ ನೋಟಿಸ್ ತಲುಪಿದ ವಾರದೊಳಗೆ ನ್ಯಾಯಾಧೀಶರಿಗೆ ತಿಳಿಸುವಂತೆ ನೋಟಿಸ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಸ್ನೇಹಮಯಿ ಕೃಷ್ಣ ದೂರಿನ ಮೇರೆಗೆ, ಬೆಂಗಳೂರಿನ ವಿಶೇಷ ನ್ಯಾಯಾಲಯವು ಮುಡಾ ಹಗರಣದ ಬಗ್ಗೆ ಕಳೆದ ಸೆಪ್ಟೆಂಬರ್ 25 ರಂದು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸಲು ನಿರ್ದೇಶಿಸಿತ್ತು.
ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದರಲ್ಲಿ ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಕೊಟ್ಟಿರುವುದು ವಿವಾದಕ್ಕೆ ಕಾರಣವಾಗಿತ್ತು.
"Since the above allegations against accused-1 to accused-4 in the case have not been proven due to lack of evidence, the final report is being submitted to the High Court," the Lokayukta police said in a letter to activist Snehamayi Krishna who is a complainant in the MUDA case.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm