ಬ್ರೇಕಿಂಗ್ ನ್ಯೂಸ್
20-02-25 04:45 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಫೆ.20: ಮುಜರಾಯಿ ಇಲಾಖೆ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಸರ್ಕಾರಿ ಅಧಿಕಾರಿಯೋರ್ವ ಹೆಂಡತಿ ಖಾತೆಗೆ ಹಾಕಿಸಿಕೊಂಡು ಮೋಜು ಮಸ್ತಿ ಮಾಡಿ, ಮನೆಯನ್ನೂ ಕಟ್ಟಿಸಿಕೊಂಡ ಪ್ರಸಂಗ ಬೆಳಕಿಗೆ ಬಂದಿದೆ.
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ರೆವೆನ್ಯೂ ಇನ್ಸ್ಪೆಕ್ಟರ್ ಆಗಿದ್ದ ಹೇಮಂತ್ ಕುಮಾರ್ ಸರ್ಕಾರಿ ಖಜಾನೆಯ ಹಣವನ್ನು ಲಪಟಾಯಿಸಿ ಸಿಕ್ಕಿಬಿದ್ದಿದ್ದಾನೆ. ಈ ಹಿಂದೆ ಮುಜರಾಯಿ ಇಲಾಖೆಯಲ್ಲಿ ಹೇಮಂತ್ ಕುಮಾರ್ ಕೇಸ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದ. ಹೀಗಾಗಿ ಇಲಾಖೆಯ ಬಗ್ಗೆ ಹೆಚ್ಚು ಮಾಹಿತಿ ಅರಿತುಕೊಂಡಿದ್ದ ಹೇಮಂತ್ ಕುಮಾರ್ ಮುಜರಾಯಿ ಇಲಾಖೆಯಿಂದ 2023- 24ರಲ್ಲಿ ಇಬ್ಬರು ತಹಶೀಲ್ದಾರ್ ಸಹಿ ಪಡೆದು ಮತ್ತು ಸೀಲ್ ನಕಲಿ ಮಾಡಿ ಸುಮಾರು 60 ಲಕ್ಷ ರೂ. ಹಣವನ್ನ ಸ್ವಂತ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾನೆ.
ಆನಂತರ, ರೆವಿನ್ಯೂ ಇನ್ಸ್ಪೆಕ್ಟರ್ ಆಗಿ ವರ್ಗಾವಣೆ ಮಾಡಿಕೊಂಡಿದ್ದರೂ ಮುಜರಾಯಿ ಇಲಾಖೆಯ ಚೆಕ್ ಬುಕ್‌ಗಳನ್ನು ಮರಳಿ ಇಲಾಖೆಗೆ ನೀಡದೇ ತನ್ನ ಬಳಿಯೇ ಉಳಿಸಿಕೊಂಡಿದ್ದ. ಅಧಿಕಾರಿಗಳು ಕೇಳಿದಾಗ ಅವರಿಗೆ ಕೊಟ್ಟಿದ್ದೇನೆ, ಇವರಿಗೆ ಕೊಟ್ಟಿದ್ದೇನೆ ಎಂದು ಮರೆಮಾಚಿ, ಹಣ ಡ್ರಾ ಮಾಡಿದ್ದಾನೆ. ಎರಡು ಮೂರು ವರ್ಷದಲ್ಲಿ ಬರೋಬ್ಬರಿ 60 ಲಕ್ಷಕ್ಕೂ ಹೆಚ್ಚು ಹಣವನ್ನು ಹಂತ ಹಂತವಾಗಿ ಹೆಂಡತಿ ಸೇರಿ ಇತರರ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದ.
ತಹಶೀಲ್ದಾರ್ ಮುಜರಾಯಿ ಇಲಾಖೆ ಖಾತೆಯ ಹಣದ ಬಗ್ಗೆ ಪರಿಶೀಲನೆ ಮಾಡಿದಾಗ ಅನುಮಾನ ಬಂದಿದ್ದು, ದೊಡ್ಡಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಖಚಿತ ಮಾಹಿತಿಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆ ವೇಳೆ ಆರೋಪಿ ಮುಜರಾಯಿ ಖಜಾನೆಯಿಂದ ಪಡೆದ ಹಣದಲ್ಲಿ ಮನೆಯನ್ನ ಕಟ್ಟಿಕೊಂಡಿದ್ದೇನೆ ಎಂದು ಬಾಯ್ಬಿಟ್ಟಿದ್ದಾನೆ.
ಪ್ರಕರಣ ಬೆಳಕಿಗೆ ಬಂದು ಪೊಲೀಸರು ತನಿಖೆ ಕೈಗೆತ್ತಿಕೊಂಡ ಬಳಿಕ ಗಂಡ ಲೂಟಿ ಮಾಡಿದ್ದ 60 ಲಕ್ಷ ರೂ. ಹಣವನ್ನ ಹೆಂಡತಿ ಮರಳಿ ಮುಜರಾಯಿ ಇಲಾಖೆಯ ಖಾತೆಗಳಿಗೆ ವಾಪಸ್ ಹಾಕಿದ್ದಾಳೆ. ಇದೇ ವೇಳೆ, ರೆವಿನ್ಯು ಇನ್ಸ್ ಪೆಕ್ಟರ್ ಆಗಿದ್ದ ಹೇಮಂತ್ ಕುಮಾರ್‌ನನ್ನ ಸೇವೆಯಿಂದ ಅಮಾನತು ಮಾಡಿದ್ದು, ತಹಸೀಲ್ದಾರ್ ಇಲಾಖಾ ವಿಚಾರಣೆಗೆ ಒಳಪಡಿಸಿದ್ದಾರೆ.
Chikkaballapur 60 lakhs transferred from muzrai account to wife's account by revenue inspector , Tahsildar exposes scam, Revenue Inspector Hemanth Kumar has been arrested and sent to jail
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm