Siddaramaiah, MUDA case, Vijayendra: ಮುಡಾ ಹಗರಣದಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ; ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಅದನ್ನು ಹಿಂತಿರುಗಿಸಿದ್ದೇಕೆ ? ಬಿ ರಿಪೋರ್ಟ್ ಅಚ್ಚರಿ ಏನಿಲ್ಲ ; ವಿಜಯೇಂದ್ರ 

20-02-25 10:06 pm       Bangalore Correspondent   ಕರ್ನಾಟಕ

ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯ ಉಂಟು ಮಾಡಿಲ್ಲ. ಮುಖ್ಯಮಂತ್ರಿ ಅಧೀನದಲ್ಲಿ ಇರುವ ಅಧಿಕಾರಿಗಳು ತನಿಖೆ ಮಾಡಿದ ಮೇಲೆ ಇನ್ನೇನು ನಿರೀಕ್ಷೆ ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದರು.

ಬೆಂಗಳೂರು, ಫೆ.20: ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯ ಉಂಟು ಮಾಡಿಲ್ಲ. ಮುಖ್ಯಮಂತ್ರಿ ಅಧೀನದಲ್ಲಿ ಇರುವ ಅಧಿಕಾರಿಗಳು ತನಿಖೆ ಮಾಡಿದ ಮೇಲೆ ಇನ್ನೇನು ನಿರೀಕ್ಷೆ ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ನಿರೀಕ್ಷೆ ಮಾಡಿದ್ದು ನಿಜವಾಗಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ಸಂದರ್ಭದಲ್ಲಿ ರಾತ್ರಿ 8-9 ಗಂಟೆಗೆ ಮುಖ್ಯಮಂತ್ರಿಗಳ ಕುಟುಂಬಸ್ಥರು ಮಾವನ ಮನೆಗೆ ಹೋದ ರೀತಿ ಲೋಕಾಯುಕ್ತ ಕಚೇರಿಗೆ ಭೇಟಿ ಕೊಡುತ್ತಿದ್ದರು. ಮೈಸೂರಿನ ಮುಡಾ ಹಗರಣದಲ್ಲಿ ಸುಮಾರು 5,000 ಕೋಟಿಯ ಅಕ್ರಮ ನಡೆದಿದೆ. ಮುಡಾದಲ್ಲಿ ಯಾವುದೇ ರೀತಿಯ ಹಗರಣ ಆಗಿಲ್ಲ ಎಂದಿದ್ದ ಸಿದ್ದರಾಮಯ್ಯ ತಮ್ಮ ಕುಟುಂಬಕ್ಕೆ ಕಾನೂನುಬಾಹಿರವಾಗಿ 14 ನಿವೇಶನಗಳು ಬಂದಿಲ್ಲ ಎಂದೂ ತಿಳಿಸಿದ್ದರು. ಬಿಜೆಪಿ- ಜೆಡಿಎಸ್ ಈ ವಿಷಯ ಮುಂದಿಟ್ಟು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿತ್ತು. ಸಿದ್ದರಾಮಯ್ಯನವರು ನಮ್ಮ ಹೋರಾಟದ ಒತ್ತಡಕ್ಕೆ ಮಣಿದು 14 ನಿವೇಶನಗಳನ್ನು ರಾತ್ರೋರಾತ್ರಿ ಹಿಂದಿರುಗಿಸುವುದಾಗಿ ಮುಡಾಕ್ಕೆ ಪತ್ರ ಬರೆದಿದ್ದರು ಎಂದು ಟೀಕಿಸಿದರು. 

ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಅದನ್ನು ಹಿಂತಿರುಗಿಸಿದ್ದೇಕೆ? ಇವರದೇ ಅಧೀನದ ಲೋಕಾಯುಕ್ತ ಅಧಿಕಾರಿಗಳು ಕ್ಲೀನ್‌ಚಿಟ್ ಕೊಟ್ಟಿದ್ದಾರೆ. ಒಬ್ಬ ಅಪರಾಧಿ ತಪ್ಪು ಮಾಡಿದ ಮೇಲೆ ಆ ಮಾತನ್ನು ಹಿಂತಿರುಗಿಸಿದರೆ ನಿರಪರಾಧಿ ಆಗುತ್ತಾನೆಯೇ.. ಅದೇ ಮಾದರಿಯಲ್ಲಿ ಕ್ಲೀನ್‌ಚಿಟ್ ಕೊಡಲಾಗಿದೆ ಎಂದರೆ, ಇದನ್ನು ಮಾಧ್ಯಮ ಸ್ನೇಹಿತರು ಮುಖ್ಯಮಂತ್ರಿಗಳಿಗೆ ಪ್ರಶ್ನಿಸಬೇಕು ಎಂದು ಸಲಹೆ ನೀಡಿದರು.

Reacting strongly to the clean chit given by Karnataka Lokayukta to Chief Minister Siddaramaiah in connection with the MUDA land scam case, Karnataka unit BJP president B.Y. Vijayendra alleged that the senior Congress leader has obtained a “fake clean chit”.