ಬ್ರೇಕಿಂಗ್ ನ್ಯೂಸ್
28-02-25 11:51 am HK News Desk ಕರ್ನಾಟಕ
ಹಾಸನ, ಫೆ.28 : ನಿಧಾನಗತಿಯ ಕಾಮಗಾರಿಯಿಂದ ಜನರ ಆಕ್ರೋಶಕ್ಕೆ ತುತ್ತಾಗಿರುವ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿಯನ್ನು ಜೂ.30 ರೊಳಗೆ ಪೂರ್ಣಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಟಾಸ್ಕ್ ನೀಡಲಾಗಿದೆ. ಇದಕ್ಕಾಗಿ ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಬೇಕು ಎಂಬ ಪ್ರಸ್ತಾವನೆಯನ್ನು ಹಾಸನ ಜಿಲ್ಲಾಡಳಿತಕ್ಕೆ ಸಲ್ಲಿಸಿದೆ.
ಸಂಸದ ಶ್ರೇಯಸ್ ಪಟೇಲ್ ಸಕಲೇಶಪುರದಲ್ಲಿ ಕಾಮಗಾರಿ ವೀಕ್ಷಣೆ ಮಾಡಿದ ವೇಳೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಸೂಚಿಸಿದ್ದಾರೆ. ಈ ವೇಳೆ, ಘಾಟ್ ಹೆದ್ದಾರಿಯಲ್ಲಿ ಕನಿಷ್ಠ ಒಂದು ತಿಂಗಳು ವಾಹನ ಸಂಚಾರ ನಿರ್ಬಂಧಿಸುವಂತೆ ಜಿಲ್ಲಾಡಳಿತವನ್ನು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೋರಿದ್ದಾರೆ. ಇದಕ್ಕೆ ಸ್ಪಂದಿಸಿ ಹಾಸನ ಜಿಲ್ಲಾಡಳಿತ ಮಾ. 15ರಿಂದ ಎಪ್ರಿಲ್ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ.
ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಾಣ ಸಂದರ್ಭದಲ್ಲಿ ಒಂದು ಭಾಗಕ್ಕೆ ಕಾಂಕ್ರೀಟ್ ಹಾಕಿ, ಕ್ಯೂರಿಂಗ್ ಆಗಲು 25 ದಿನಗಳು ಬೇಕಾಗುತ್ತದೆ. ಹಾಗಾಗಿ ಈ ವೇಳೆ ವಾಹನ ಸಂಚಾರದಿಂದ ಸಮಸ್ಯೆಯಾಗುವುದರಿಂದ ಸಂಚಾರ ನಿಷೇಧ ಮಾಡಿದರೆ ಉತ್ತಮ ಎಂದು ಸಕಲೇಶಪುರ ಉಪ ವಿಭಾಗಾಧಿಕಾರಿ ಶ್ರುತಿ ಸಂಸದರಿಗೆ ತಿಳಿಸಿದರು.
ಶಿರಾಡಿ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಗುರುತಿಸಿ, ವಾಹನ ಸಂಚಾರ ನಿಷೇಧಿಸುವ ದಿನಾಂಕ ನಿಗದಿ ಪಡಿಸಲಾಗುವುದು ಎಂದು ವಿಭಾಗಾಧಿಕಾರಿ ತಿಳಿಸಿದ್ದಾರೆ.
ಸಕಲೇಶಪುರದ ದೋಣಿಗಲ್ ಕ್ರಾಸ್‌ನಿಂದ ಮಾರನಹಳ್ಳಿ ವರೆಗೆ 10 ಕಿ.ಮೀ. ಚತುಷ್ಪಥ ಕಾಂಕ್ರೀಟ್ ರಸ್ತೆಯಲ್ಲಿ ಈ ವರೆಗೆ 4.8 ಕಿ.ಮೀ. ರಸ್ತೆ ನಿರ್ಮಾಣ ಮಾತ್ರ ಆಗಿದೆ. ಭೂ ಕುಸಿತವಾಗುವ ಸಂಭಾವ್ಯ ಸ್ಥಳದಲ್ಲಿ ರಸ್ತೆ ಜತೆ ತಡೆಗೋಡೆ ನಿರ್ಮಿಸಲಾಗುವುದು ಎಂದು ಎನ್‌ಎಚ್‌ಎಐ ಅಧಿಕಾರಿಗಳು ತಿಳಿದ್ದಾರೆ.
The National Highways Authority of India (NHAI) has proposed suspending vehicular movement on Shiradi Ghat for at least a month to expedite the four-lane highway construction on the Bengaluru-Mangaluru National Highway-75.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm