ಬ್ರೇಕಿಂಗ್ ನ್ಯೂಸ್
28-02-25 06:17 pm HK News Desk ಕರ್ನಾಟಕ
ಹಾಸನ, ಫೆ.28: ಯಾರು ಏನು ಹೇಳಿದ್ದಾರೆ ನನಗಂತು ಗೊತ್ತಿಲ್ಲ. ರಾಜ್ಯದ ಆಡಳಿತ ಪಕ್ಷದಲ್ಲಿ ದಿನೇ ದಿನೇ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗುತ್ತಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕು, ತಾವು ಮುಖ್ಯಮಂತ್ರಿ ಆಗಬೇಕು ಅಂತ ಅನೇಕರು ಕಾಯ್ತಾ ಇದ್ದಾರೆ. ಇದನ್ನು ನೋಡಿದರೆ ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ಆಗೋ ತರಾ ಇದೆ. ಆ ಮುನ್ಸೂಚನೆಗಳನ್ನು ನೀವು ನೋಡುತ್ತಿದ್ದೀರಿ. ಹೀಗೆಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಡಿಕೆಶಿ ಯಾವ ಅರ್ಥದಲ್ಲಿ ಹೇಳಿದ್ದಾರೋ ಅವರನ್ನು ಪ್ರಶ್ನೆ ಮಾಡಿ. ಸರ್ಕಾರ ಎಲ್ಲಿದೆ, ಕಾಂಗ್ರೆಸ್ ಒಂದು ರೀತಿ ತಾಲಿಬಾನ್ ಸರ್ಕಾರ ಮಾಡ್ತಿದೆ. ಹಿಂದೂತ್ವಕ್ಕೆ, ಹಿಂದೂಗಳಿಗೂ ಗೌರವವಿಲ್ಲ. ಈ ರೀತಿಯ ಪರಿಸ್ಥಿತಿ ಹಿಂದೆಂದೂ ನಿರ್ಮಾಣ ಆಗಿಲ್ಲ. ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳಕ್ಕೆ ಕಾಂಗ್ರೆಸ್‌ನವರು ತಕರಾರು ಎತ್ತಿದ್ರು. ಇದರ ಮಧ್ಯೆ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ಕುಂಭಮೇಳಕ್ಕೆ ಹೋಗಿ ಬಂದಿದ್ದಾರೆ. ನಮ್ಮ ಪ್ರಾಚೀನತೆ ಆಧಾರದ ಮೇಲೆ ಹೋಗಿ ಬಂದಿದ್ದಾರೆ. ಬಿಜೆಪಿಗೂ ಆ ಬೆಳವಣಿಗೆಗೂ ಯಾವುದೇ ಸಂಬಂಧವಿಲ್ಲ.
ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರ ಜೊತೆ ಅವರು ಭಾಗವಹಿಸಿದ್ರು. ಇದರಿಂದ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ಶಿವರಾತ್ರಿ ಸಂದರ್ಭದಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅದಕ್ಕೂ ರಾಜಕೀಯ ಧ್ರುವೀಕರಣದ ಕತೆ ಕಟ್ಟಿದಾರೆ. ಡಿ.ಕೆ.ಶಿವಕುಮಾರ್ ಬಿಜೆಪಿಗೆ ಬಂದು ಬಿಡ್ತಾರೆ ಈ ರೀತಿಯ ಗುಸು, ಗುಸು ಶುರುವಾಗಿದೆ. ಇದರಲ್ಲಿ ಯಾವುದರಲ್ಲಿ ಅರ್ಥವಿಲ್ಲ.
ನಾವು ಮುಖ್ಯಮಂತ್ರಿಗಳಿಗೆ ಬಹಿರಂಗವಾಗಿ ಪತ್ರ ಬರೆದಿದ್ದೇವೆ. ನಾಡಿನ ಜನರ ಅಪೇಕ್ಷೆಗೆ ತಕ್ಕಂತೆ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಬೇಕು. ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿರುವ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಹಾಗಾಗಿ ಜನರ ಅಪೇಕ್ಷೆನೂ ಕೂಡ ಸಾಕಷ್ಟಿದೆ. ಗ್ಯಾರೆಂಟಿಗಳೇ ಅಭಿವೃದ್ಧಿ ಆಗಿಬಿಟ್ಟರೆ ಶಾಸಕರುಗಳು ತಲೆ ಎತ್ತಿಕೊಂಡು ಓಡಾಡಲು ಸಾಧ್ಯವಿಲ್ಲ. ಜನರು ಕೂಡ ನಮ್ಮನ್ನು ಕ್ಷಮಿಸುವುದಿಲ್ಲ. ಇದನ್ನು ಅರ್ಥ ಮಾಡಿಕೊಂಡು ಮುಖ್ಯಮಂತ್ರಿಗಳು ಕ್ಷೇತ್ರಗಳಿಗೆ ಅನುದಾನ ನೀಡ್ತಾರೆಂಬ ವಿಶ್ವಾಸ ಇದೆ.
ಮೊದಲ ಬಾರಿ ಗೆದ್ದ ಶಾಸಕರಿಗೆ ಈವರೆಗೂ ಅನುದಾನ ನೀಡಿಲ್ಲ. ಇದರ ಬಗ್ಗೆಯೂ ಗಮನ ಹರಿಸಬೇಕಾಗಿದೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಬಜೆಟ್ ಮಂಡನೆ ಮಾಡ್ತಾರೆ ಎಂಬ ಆಶಾಭಾವನೆಯಲ್ಲಿ ನಾವು ಕೂಡ ಇದ್ದೇವೆ ಎಂದು ಹೇಳಿದರು.
B Y Vijayendra Reacts to DK's Strategic Maneuver, Insights into Rapid Political Developments in the State
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm