ಬ್ರೇಕಿಂಗ್ ನ್ಯೂಸ್
01-03-25 11:01 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ರಾಜ್ಯ ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಆಡಳಿತ ನಡೆಸಲಿದೆ. ಮಹಾರಾಷ್ಟ್ರದ ರೀತಿ ಇಲ್ಲಿ ಯಾವುದೇ ಬೆಳವಣಿಗೆ ನಡೆಯಲ್ಲ. ಏಕನಾಥ ಶಿಂಧೆ ರೀತಿ ಶಾಸಕರನ್ನು ಸೆಳೆದುಕೊಂಡು ಯಾರೂ ಬಿಜೆಪಿಗೆ ಹೋಗುವ ಸ್ಥತಿ ಬರೋದಿಲ್ಲ. ಅದೆಲ್ಲ ವದಂತಿ ಅಷ್ಟೇ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಬಿ.ವೈ.ವಿಜಯೇಂದ್ರ ಹೇಳಿದಂತೆ ಕಾಂಗ್ರೆಸ್‌ನಲ್ಲಿ ಯಾವ ಕ್ಷಿಪ್ರ ಕ್ರಾಂತಿಯೂ ನಡೆಯುವುದಿಲ್ಲ. ಬಿಜೆಪಿಯಲ್ಲೇ ಹಲವು ಬಣಗಳ ಒಳ ಜಗಳವಿದೆ. ಅವರಲ್ಲೇ ಕ್ರಾಂತಿ ಆದರೂ ಆಗಬಹುದು. ಏಕನಾಥ ಶಿಂಧೆ ರೀತಿ ಕಾಂಗ್ರೆಸ್ ನಾಯಕರೊಬ್ಬರು ಶಾಸಕರ ಪಡೆಯೊಂದಿಗೆ ಬಿಜೆಪಿ ಸೇರುತ್ತಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿರುವುದು ಹಾಸ್ಯಾಸ್ಪದ ಎಂದರು ಜಾರಕಿಹೊಳಿ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈಶ ಫೌಂಡೇಷನ್‌ನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಜೊತೆ ಕಾಣಿಸಿಕೊಂಡ ಮಾತ್ರಕ್ಕೆ ಸರ್ಕಾರ ಬಿದ್ದು ಹೋಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಮುಖಂಡರು ವ್ಯಂಗ್ಯ ಮಾಡುತ್ತಿದ್ದರು. ರಾಜ್ಯಕ್ಕೆ ಆರ್ಥಿಕ ದುಸ್ಥಿತಿ ಬರುತ್ತದೆ ಎನ್ನುತ್ತಿದ್ದರು. ದೆಹಲಿ, ಮಹಾರಾಷ್ಟ್ರದಲ್ಲಿ ಅವರೂ ಗ್ಯಾರಂಟಿ ಕೊಟ್ಟಿದ್ದಾರೆ. ಅದನ್ನು ಹೇಗೆ ಜಾರಿ ಮಾಡುತ್ತಾರೋ ನೋಡೋಣ ಎಂದು ತಿಳಿಸಿದರು.
ಇದೇ ವೇಳೆ, ಡಿಕೆಶಿ ಬಗ್ಗೆ ವಿರೋಧಿ ಹೇಳಿಕೆ ನೀಡುತ್ತಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಡಿ.ಕೆ.ಶಿವಕುಮಾರ್ ಸೋದರ ಡಿ.ಕೆ.ಸುರೇಶ್ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದು ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಖುದ್ದು ಭೇಟಿ ನೀಡಿದ ಡಿ.ಕೆ.ಸುರೇಶ್ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದ್ದಾರೆ. ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ’ ಸಂಬಂಧ ಇತ್ತೀಚೆಗೆ ಬಹಿರಂಗ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದರು.
Reports of a possible coup attempt to dismantle the Congress government, Public Works Minister Satish Jarkiholi said on Friday there won’t be any Maharashtra-like development and that no leader would take the splinter group (of MLAs)
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm