ಬ್ರೇಕಿಂಗ್ ನ್ಯೂಸ್
03-03-25 02:07 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 03: ''ನಟ್ ಬೋಲ್ಟ್ ರಿಪೇರಿ ಮಾಡಲು ಬಹಳ ಜನ ಇದ್ದಾರೆ. ರಾಜ್ಯದ ಜನತೆ ಇವರಿಗೆ 135 ಸೀಟು ಕೊಟ್ಟಿರುವುದು ರಿಪೇರಿ ಮಾಡುವುದಕ್ಕಲ್ಲ, ರಾಜ್ಯದ ಜನರ ಸಮಸ್ಯೆ ಆಲಿಸುವುದಕ್ಕೆ'' ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ''ಡಿ. ಕೆ. ಶಿವಕುಮಾರ್ ಬಹುಶಃ ಭೂಮಿ ಮೇಲಿಲ್ಲ ಅನಿಸುತ್ತದೆ. ಅಧಿಕಾರ ಹಾಗೆ ಮಾತನಾಡಿಸುತ್ತಿದೆ. ಅವರ ಬಗ್ಗೆ ಮಾತನಾಡುವುದಕ್ಕಿಂತ ಮೌನವಾಗಿರುವುದೇ ಒಳ್ಳೆಯದು'' ಎಂದು ವ್ಯಂಗ್ಯವಾಡಿದರು.
ಡಿ.ಕೆ. ಶಿವಕುಮಾರ್ ಹಿಂದುತ್ವದ ಜಪ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ''ಅದು ಅವರವರ ಭಾವಕ್ಕೆ ಬಿಟ್ಟದ್ದು. ನಾನು ಟೀಕೆ ಮಾಡಲು ಹೋಗಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಅವರೇ ಅವರವರ ಭಾವನೆಗೆ ಅವಕಾಶ ನೀಡಿದ್ದಾರೆ. ಇದರಲ್ಲಿ ವಿಶ್ಲೇಷಣೆ ಮಾಡುವುದಕ್ಕೆ ಏನಿದೆ?'' ಎಂದರು.
ನಾನೇ ರಾಜಕೀಯಕ್ಕೆ ಬರುತ್ತೇನೆ ಅಂದುಕೊಂಡಿರಲಿಲ್ಲ :
'ರಾಜಕಾರಣಿಗಳ ಮಕ್ಕಳು ಚಲನಚಿತ್ರ ಕ್ಷೇತ್ರದಲ್ಲಿ ಪ್ಲಾಫ್ ಆಗಿ, ಈಗ ರಾಜಕಾರಣಕ್ಕೆ ಬಂದಿದ್ದಾರೆ' ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ''ಜೀವನದಲ್ಲಿ ಅನೇಕ ಬಾರಿ ಸೋಲು, ಗೆಲುವು ಇರುತ್ತದೆ. ಕೆಲವು ಬಾರಿ ಬದಲಾವಣೆ ಆಗುತ್ತದೆ. ನಾನೇ ಒಂದು ಕಾಲದಲ್ಲಿ ಸಿನಿಮಾ ಕ್ಷೇತ್ರದಲ್ಲಿ ಇದ್ದೆ. ಸಿನಿಮಾ ಹಂಚಿಕೆದಾರನಾಗಿದ್ದೆ. ಯಾವುದೇ ಸಂದರ್ಭದಲ್ಲಿಯೂ ರಾಜಕೀಯಕ್ಕೆ ಬರುತ್ತೇನೆ ಎಂದುಕೊಂಡಿರಲಿಲ್ಲ. ನಾನೇ ಅಚಾನಕ್ಕಾಗಿ ರಾಜಕೀಯಕ್ಕೆ ಬಂದೆ. ಏಳು ಬೀಳು ಎನ್ನುವುದು ಎಲ್ಲರಿಗೂ ಇರುತ್ತದೆ. ಅವರ ಹೇಳಿಕೆಗೆ ಅಷ್ಟೇನೂ ಪ್ರಾಮುಖ್ಯತೆ ಕೊಡಬೇಕಿಲ್ಲ'' ಎಂದು ತಿಳಿಸಿದರು.
HD Kumaraswamy slams DK Shivakumar over remarks on film industry. People haven't elected congress to repair but to rule the state he added.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am