ಬ್ರೇಕಿಂಗ್ ನ್ಯೂಸ್
03-03-25 09:22 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.3: ಹಿರಿಯ ಐಪಿಎಸ್ ಅಧಿಕಾರಿ ರೂಪಾ ಡಿ. ಮೌದ್ಗಿಲ್ ಅವರ ವಿರುದ್ಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಡಿಜಿಪಿ ಅಲೋಕ್ ಮೋಹನ್ ಅವರಿಗೆ ಲಿಖಿತ ದೂರು ನೀಡಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರನ್ನು ಸೋಮವಾರ ದಿಢೀರ್ ವರ್ಗಾವಣೆ ಮಾಡಲಾಗಿದೆ.
2010ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಕತಿಯಾರ್, ಆಂತರಿಕ ಭದ್ರತಾ ವಿಭಾಗದಲ್ಲಿ ಡಿಐಜಿ ಆಗಿದ್ದರು. ಅದೇ ವಿಭಾಗದಲ್ಲಿ ಹಿರಿಯ ಶ್ರೇಣಿಯ ಐಜಿಪಿ ಆಗಿರುವ ರೂಪಾ ಮೌದ್ಗಿಲ್ 2000ನೇ ಬ್ಯಾಚ್ ಐಪಿಎಸ್ ಅಧಿಕಾರಿ. ವಿಭಾಗದಲ್ಲಿ ಕತಿಯಾರ್ ಗೆ ರೂಪಾ ಅವರೇ ಬಾಸ್ ಆಗಿದ್ದರು. ಆದರೆ ಇವರ ವಿರುದ್ಧವೇ ದೂರು ಪತ್ರ ಬರೆದಿದ್ದು ಮತ್ತೆ ಜಡೆ ಜಗಳ ಚರ್ಚೆಯ ವಸ್ತುವಾಗಿತ್ತು. ಇದರ ಬೆನ್ನಲ್ಲೇ ಕಟಿಯಾರ್ ಅವರನ್ನು ಸಿವಿಲ್ ಡಿಫೆನ್ಸ್ ಮತ್ತು ಹೋಮ್ ಗಾರ್ಡ್ ವಿಭಾಗಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರೂಪಾ ಅವರ ವಿರುದ್ಧ ದೂರು ನೀಡಿದ ಬೆನ್ನಲ್ಲೇ ವರ್ತಿಕಾ ಅವರನ್ನು ಹಲವು ಸಮಯದಿಂದ ಖಾಲಿಯಿದ್ದ ಗೃಹ ರಕ್ಷಕ ದಳದ ಡಿಐಜಿ ಮತ್ತು ಹೆಚ್ಚುವರಿ ಕಮಾಂಡೆಂಟ್ ಆಗಿ ವರ್ಗಾವಣೆ ಮಾಡಲಾಗಿದೆ. ಆಂತರಿಕ ಭದ್ರತಾ ವಿಭಾಗದಿಂದ ಮಹತ್ವ ಇಲ್ಲದ ಹುದ್ದೆಗೆ ವರ್ಗಾಯಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಆದಾಗ್ಯೂ, ಸರ್ಕಾರ ಹೊರಡಿಸಿದ ಆದೇಶದಲ್ಲಿ ವರ್ಗಾವಣೆಗೆ ಯಾವುದೇ ಕಾರಣವನ್ನು ನೀಡಿಲ್ಲ.
ಕಳೆದ ತಿಂಗಳು, ಕಟಿಯಾರ್ ಅವರು 2000 ಬ್ಯಾಚ್‌ನ ಐಪಿಎಸ್ ಅಧಿಕಾರಿ ರೂಪಾ ಡಿ ಮೌದ್ಗಿಲ್ ವಿರುದ್ಧ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಿಖಿತ ದೂರು ನೀಡಿದ್ದರು. ರೂಪಾ ಅವರು ತಮ್ಮ ಅನುಪಸ್ಥಿತಿಯಲ್ಲಿ ಇಬ್ಬರು ಕಿರಿಯ ಪೊಲೀಸ್ ಅಧಿಕಾರಿಗಳನ್ನು ಕಳಿಸಿಕೊಟ್ಟು ನಿಯಂತ್ರಣ ಕೊಠಡಿಯಿಂದ ಕೀ ತೆಗೆದು ತನ್ನ ಕಚೇರಿಯಲ್ಲಿದ್ದ ದಾಖಲೆ ಪತ್ರಗಳನ್ನು ಪಡೆದಿದ್ದಾರೆ. ಅದರ ಪ್ರತಿಯನ್ನು ವಾಟ್ಸಪ್ ನಲ್ಲಿ ಹಂಚಲಾಗಿದೆ. ಇದು ಅತಿರೇಕದ ಘಟನೆಯಾಗಿದ್ದು ಇದರಿಂದ ಏನಾದರೂ ತೊಂದರೆಯಾದರೆ ರೂಪಾ ಅವರೇ ಕಾರಣ. ಅಲ್ಲದೆ, ತನ್ನ ಬಗ್ಗೆ ನೆಗೆಟಿವ್ ರಿಪೋರ್ಟ್ ಕೊಡುವುದಾಗಿ ಹೇಳಿದ್ದರು ಇತ್ಯಾದಿ ವಿಚಾರಗಳನ್ನು ಬರೆದಿದ್ದರು.
ರೂಪಾ ಮೌದ್ಗಿಲ್ ಅವರು 2025ರ ಜನವರಿ ವೇಳೆಗೆ ಎಡಿಜಿಪಿ ಹುದ್ದೆಗೆ ಭಡ್ತಿ ಪಡೆಯಬೇಕಿತ್ತು. ಎರಡು ವರ್ಷಗಳಿಂದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜೊತೆಗೆ ಕಾನೂನು ಸಮರ ನಡೆಸುತ್ತಿದ್ದು ಇದರ ಕಾರಣದಿಂದ ಸಾರ್ವಜನಿಕರ ಗಮನ ಸೆಳೆದಿದ್ದಾರೆ.
A day after IPS officer Vartika Katiyar accused her immediate boss and IGP D Roopa Moudgil of using police personnel to plant confidential documents related to other departments in her chamber, the Karnataka government Monday shunted Katiyar from the Internal Security Division, where she was posted as a DIG.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm