ಮೊಯ್ಲಿ ಮಾತು ಅಂತಿಮ ಅಲ್ಲ , ಹೈಕಮಾಂಡ್ ನೀಡುವ ಸೂಚನೆಯನ್ನ ಪಾಲಿಸ್ತೀನಿ ಅಷ್ಟೇ ; ಡಿಕೆಶಿ ಸಿಎಂ ಆಗ್ತಾರೆ ಹೇಳಿಕೆಗೆ ಸಿದ್ದು ರಿಯಾಕ್ಷನ್ 

03-03-25 10:35 pm       Bangalore Correspondent   ಕರ್ನಾಟಕ

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಬೆಂಗಳೂರು, ಮಾ 03: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಈ ಬಗ್ಗೆ ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ ಎಂದರು.

ಮೊಯ್ಲಿ ಅಥವಾ ಮತ್ಯಾರೋ ಹೇಳೋದ್ರಿಂದ ಯಾರೂ ಮುಖ್ಯಮಂತ್ರಿ ಅಗಲ್ಲ, ಅದು ಹೈಕಮಾಂಡ್ ವಿವೇಚನೆಗೆ ಬಿಟ್ಟಿರುವ ವಿಷಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ:

 ''ಉಭಯ ಸದನಗಳ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆ ನಡೆಸಲಾಗಿದೆ. ಸರ್ವಪಕ್ಷಗಳ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ನಾಳೆಯುಂದ ಮೂರು ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ನಂತರ, ನಾನು ಮುಂದಿನ ಸೋಮವಾರ ಉತ್ತರ ನೀಡಲಿದ್ದೇನೆ. ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಮಾರ್ಚ್ 19ರವರೆಗೆ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿದ್ದು, ಮಾರ್ಚ್ 19ರಂದು ವಿಧಾನಸಭೆಯಲ್ಲಿ ಹಾಗೂ ಮಾರ್ಚ್​​ 20ರಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತೇನೆ. ಸುಮಾರು 15 ಮಸೂದೆಗಳನ್ನು ಅಧಿವೇಶನದಲ್ಲಿ ಮಂಡನೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಸಿಎಂ ವಿವರಿಸಿದರು.

Karnataka Chief Minister Siddaramaiah on Monday made it clear that he will go by the directives of the Congress high command, whose decision is final on leadership change in the state.