ಬ್ರೇಕಿಂಗ್ ನ್ಯೂಸ್
04-03-25 12:14 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.4: ರಾಜ್ಯದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಬೆನ್ನಲ್ಲೇ ಕೋಳಿ ಮಾಂಸ ಅಥವಾ ಮೊಟ್ಟಗಳನ್ನು ಸೇವಿಸುವುದರಿಂದ ಈ ಕಾಯಿಲೆ ಮನುಷ್ಯನಿಗೆ ಬರುವುದಿಲ್ಲ ಎಂದು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸ್ಪಷ್ಟಪಡಿಸಿದೆ.
ಈ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿರುವ ಇಲಾಖೆ, ಸೋಂಕಿತ ಕೋಳಿ ಮಾಂಸವನ್ನು ಚೆನ್ನಾಗಿ ಬೇಯಿಸದೆ ಹಾಗೂ ಅವುಗಳ ಹಸಿ ಮೊಟ್ಟೆಯ ಸೇವನೆಯಿಂದ ರೋಗ ತಗಲುವ ಸಾಧ್ಯತೆಗಳಿವೆ. ಆದರೆ ಕೋಳಿ ಮಾಂಸ ಮತ್ತು ಮೊಟ್ಟೆಯನ್ನು 70 ಡಿಗ್ರಿ ಸೆಂಟಿಗ್ರೇಡ್ ಗೂ ಅಧಿಕ ಉಷ್ಣಾಂಶದಲ್ಲಿ ಬೇಯಿಸಿ ತಿಂದರೆ ರೋಗ ಸಾಧ್ಯತೆ ಇರುವುದಿಲ್ಲ. ಕೋಳಿ ಮಾಂಸಗಳನ್ನು ಸಿದ್ಧಪಡಿಸಿದ ನಂತರ ಕೈಗಳನ್ನು ನಂಜು ನಾಶಕದಿಂದ ತೊಳೆಯಬೇಕು. ಕೈಗಳಲ್ಲಿ ಗಾಯಗಳಿದ್ದರೆ ಕೋಳಿ ರಕ್ತ ತಾಗದಂತೆ ಜಾಗ್ರತೆ ವಹಿಸಬೇಕು ಎಂದು ತಿಳಿಸಿದೆ.
ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದು ಮುನ್ನೆಚ್ಚರಿಕೆಯಿಂದ ತಡೆಯಬಲ್ಲ ಕಾಯಿಲೆ. ಆದ್ದರಿಂದ ಕಾಯಿಲೆಯ ಲಕ್ಷಣಗಳು ಕೋಳಿಗಳಲ್ಲಿ ಕಾಣಿಸಿಕೊಂಡ ಕೂಡಲೇ ಹತ್ತಿರದ ಮಾಹಿತಿ ಕೇಂದ್ರ ಅಥವಾ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು ಎಂದು ಇಲಾಖೆ ಸಾರ್ವಜನಿಕರಿಗೆ ಸೂಚಿಸಿದೆ.
ಹಕ್ಕಿಜ್ವರದ ಲಕ್ಷಣಗಳೇನು ?
ಹಕ್ಕಿಜ್ವರದ ಲಕ್ಷಣಗಳು ಸಾಮಾನ್ಯವಾಗಿ ಎಚ್ 1ಎನ್ 1 ಜ್ವರದ ಲಕ್ಷಣಗಳಂತೆಯೇ ಇರುತ್ತದೆ. ಜ್ವರ, ಕೆಮ್ಮು, ಶೀತ, ತಲೆನೋವು, ಗಂಟಲು ಕೆರೆತ, ನೆಗಡಿ, ಸ್ನಾಯುಗಳಲ್ಲಿ ನೋವು, ಆಯಾಸ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ವಾಂತಿ ಮತ್ತು ಭೇದಿಯೂ ಆಗಬಹುದು. ಉಸಿರಾಟದಲ್ಲಿ ತೊಂದರೆಯೂ ಉಂಟಾಗಬಹುದು.
ಮುನ್ನೆಚ್ಚರಿಕೆ ಕ್ರಮಗಳು
ಶಂಕಿತ ಹಕ್ಕಿಜ್ವರ ಪೀಡಿತ ಕೋಳಿಗಳು, ಪಕ್ಕಿಗಳು ಹಾಗೂ ಬಾತುಕೋಳಿಗಳ ಸಂಪರ್ಕಕ್ಕೆ ಬರದಂತೆ ಎಚ್ಚರ ವಹಿಸಬೇಕು. ಹಕ್ಕಿಜ್ವರ ಪೀಡಿತ ಫಾರಂಗಳಿಗೆ ಭೇಟಿ ನೀಡಬಾರದು. ಹಕ್ಕಿಜ್ವರ ಹರಡಿರುವ ಫಾರಂನ ಸಂಪರ್ಕಕ್ಕೆ ಬಂದಲ್ಲಿ ತಕ್ಷಣ ಕೈಕಾಲು, ಮುಖ ತೊಳೆದುಕೊಂಡು ಬಟ್ಟೆ ಬದಲಾಯಿಸಿಕೊಳ್ಳಬೇಕು. ಒಂದು ವೇಳೆ ಜ್ವರದ ಲಕ್ಷಣ ಕಾಣಿಸಿದಲ್ಲಿ ತಕ್ಷಣ ವೈದ್ಯರನ್ನು ಕಾಣಬೇಕು. ಸೋಂಕಿತ ಸ್ಥಳದಲ್ಲಿ ಯಾವುದೇ ವಸ್ತು ಮುಟ್ಟಿದರೂ ಕೈಯನ್ನು ಸೋಪಿನಿಂದ ತೊಳೆಯಬೇಕು.
ಜ್ವರ ದೃಢಪಟ್ಟರೆ ನಿಯಮಗಳೇನು ?
ಹಕ್ಕಿಜ್ವರ ದೃಢಪಟ್ಟರೆ ಅಥವಾ ಶಂಕಿತ ಜ್ವರದ ಹಾವಳಿ ಜೋರಾದಲ್ಲಿ ಕೇಂದ್ರ ಸರಕಾರದ ನಿಯಮ ಪ್ರಕಾರ ರೋಗ ನಿಯಂತ್ರಣಕ್ಕೆ ಜಿಲ್ಲಾ ಮಟ್ಟದಲ್ಲಿ ಓರ್ವ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ತಾಲೂಕು ಮಟ್ಟದಲ್ಲಿ ಪಶು ವೈದ್ಯಾಧಿಕಾರಿ ಅಥವಾ ಪಶು ವೈದ್ಯಕೀಯ ಪರೀಕ್ಷಕರನ್ನು ಒಳಗೊಂಡ ಕ್ಷಿಪ್ರ ಕಾರ್ಯಾಚರಣೆ ಪಡೆ ರಚನೆ ಮಾಡಬೇಕು. ಜಿಲ್ಲೆಯಲ್ಲಿರುವ ಕೋಳಿ ಫಾರಂಗಳ ಸಂಖ್ಯೆ, ಮಾಲೀಕರ ವಿಳಾಸ, ಕೋಳಿಗಳ ಸಂಖ್ಯೆ ಮಾಹಿತಿ ಸಂಗ್ರಹಿಸಬೇಕು ಎಂದು ಸೂಚಿಸಲಾಗಿದೆ.
Warning against unnecessary panic over the detection of a bird flu case in neighbouring Chikkaballapura district, Bengaluru Urban District Administration Monday issued guidelines to be followed while consuming poultry meat and eggs.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm