ಬ್ರೇಕಿಂಗ್ ನ್ಯೂಸ್
06-03-25 02:31 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 06: ಸಿಲಿಕಾನ್ ಸಿಟಿಯಲ್ಲಿ ಮತ್ತೊಬ್ಬ ಟೆಕ್ಕಿ 12ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಯುವತಿ ಜೊತೆ ಲಿವಿಂಗ್ ಟುಗೆದರ್ ನಲ್ಲಿದ್ದ ಎಂದು ತಿಳಿದುಬಂದಿದೆ.
ಈ ಘಟನೆ ಮಾರ್ಚ್ 4 ರಂದು ಮುಂಜಾನೆ 5 ಗಂಟೆಗೆ ಹರಳೂರು ಕೂಡ್ಲೂ ರಸ್ತೆಯಲ್ಲಿರುವ ಎಸ್‌ಎನ್‌ಎನ್ ರಾಜ್ ಎಟರ್ನಿಯಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತ ಯುವಕನನ್ನು ಮಾಯಾಂಕ್ ರಜನಿ ಎಂದು ಗುರುತಿಸಲಾಗಿದ್ದು, ಈತ ಉತ್ತರ ಪ್ರದೇಶ ಮೂಲದವರಾಗಿದ್ದಾನೆ.
ಮಾಯಾಂಕ್ ರಜನಿ ಕಳೆದ ನಾಲ್ಕು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದನು. ಅಪಾರ್ಟ್‌ಮೆಂಟ್‌ನಲ್ಲಿ ಫ್ಲಾಟ್ ಬಾಡಿಗೆಗೆ ಪಡೆದು ವಾಸಿಸುತ್ತಿದ್ದನು. ಕಳೆದ ಎರಡು ವರ್ಷಗಳಿಂದ ಯುವತಿಯೊಂದಿಗೆ ಲಿವಿಂಗ್ ರಿಲೇಶನ್‌ಶಿಪ್‌ನಲ್ಲಿದ್ದನು. ಮುಂಜಾನೆ 5 ಗಂಟೆ ಸುಮಾರಿಗೆ ಮಾಯಾಂಕ್ 12ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ.
ಅವನ ಮೃತದೇಹ ನೋಡಿದ ಸೆಕ್ಯೂರಿಟಿ ಗಾರ್ಡ್ 12ನೇ ಮಹಡಿಗೆ ಓಡಿಹೋಗಿ ಬಾಗಿಲು ಬಡಿದು ಯುವತಿಯನ್ನು ಎಚ್ಚರಿಸಿದ್ದಾನೆ. ಘಟನೆಯಿಂದ ಯುವತಿಯೂ ತೀವ್ರ ಆಘಾತಕ್ಕೊಳಗಾಗಿದ್ದಾಳೆ. ಮಾಯಾಂಕ್ ರಜನಿ ಬೆಂಗಳೂರಿನಲ್ಲಿ ಸ್ಟಾರ್ಟ್‌ಅಪ್ ಕಂಪನಿಯೊಂದನ್ನು ಪ್ರಾರಂಭಿಸಿದ್ದರು. ಆದರೆ ಅದು ನಷ್ಟದಲ್ಲಿತ್ತು ಎನ್ನಲಾಗಿದೆ. ಹೀಗಾಗಿ ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪರಪ್ಪನ ಅಗ್ರಹಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
The tech community is in shock following the tragic death of Mayank Rajani, a promising entrepreneur and founder of a local smart app company, who reportedly took his own life by jumping from the 12th floor of his residence. Authorities confirmed that Rajani was found by first responders at the scene.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm