ಬ್ರೇಕಿಂಗ್ ನ್ಯೂಸ್
07-03-25 09:08 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.7: ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಭರ್ಜರಿ ಕೊಡುಗೆ ನೀಡಿದ್ದಾರೆ. ವಕ್ಫ್ ಸಂಸ್ಥೆಗಳ ದುರಸ್ತಿ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯಕ್ಕಾಗಿ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂ. ಒದಗಿಸಿರುವ ಬಗ್ಗೆ ಘೋಷಣೆ ಮಾಡಿದ್ದಾರೆ.
ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಔಪಚಾರಿಕ ಶಿಕ್ಷಣಕ್ಕಾಗಿ ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್ ಇತ್ಯಾದಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಈ ವಿದ್ಯಾರ್ಥಿಗಳು NIOS ಮೂಲಕ SSLC ಪರೀಕ್ಷೆ ಬರೆಯಲು ಅವಕಾಶವಾಗುವಂತೆ ಸಜ್ಜುಗೊಳಿಸಲಾಗುವುದು.
ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ಯುವಕ/ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡಲಾಗುವುದು.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವೃತ್ತಿ ಮಾರ್ಗದರ್ಶನಕ್ಕೆ ತರಬೇತಿ.
ಶಿಕ್ಷಣದಿಂದ ವಂಚಿತರಾಗುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಕೇಂದ್ರ ತೆರೆದು, ವಿವಿಧ ಪದವಿ/ಸ್ನಾತಕೋತ್ತರ ಪದವಿ ಶಿಕ್ಷಣ.
ಅಲ್ಪಸಂಖ್ಯಾತರ 169 ವಸತಿ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 25,000 ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ.
ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50,000 ರೂ. ನೀಡಲಾಗುವುದು.
ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಬೆಂಗಳೂರಿನ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡ ನಿರ್ಮಾಣ.
ಅಲ್ಪಸಂಖ್ಯಾತ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಪೂರಕವಾಗಿ 2024-25ನೇ ಸಾಲಿನಲ್ಲಿ ವಕ್ಸ್ ಸಂಸ್ಥೆಗಳ ಖಾಲಿ ನಿವೇಶನಗಳಲ್ಲಿ 15 ಮಹಿಳಾ ಕಾಲೇಜುಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. 2025-26ನೇ ಸಾಲಿನಲ್ಲಿ 16 ಹೊಸ ಮಹಿಳಾ ಕಾಲೇಜುಗಳ ಸ್ಥಾಪನೆ.
ರಾಜ್ಯದಲ್ಲಿರುವ ಗುರುದ್ವಾರಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು 2 ಕೋಟಿ ರೂ. ಅನುದಾನ ಒದಗಿಸಲಾಗುವುದು.
ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಹಾಗೂ ಮಹಾಭೋಧಿ ಅಧ್ಯಯನ ಕೇಂದ್ರದ 100 ವರ್ಷಗಳ ಹಳೆಯ ಗ್ರಂಥಾಲಯವನ್ನು 1 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣಗೊಳಿಸಿ ಉನ್ನತೀಕರಿಸಲಾಗುವುದು.
ಜೈನ, ಬೌದ್ಧ ಹಾಗೂ ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ, ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗಾಗಿ 250 ಕೋಟಿ ರೂ. ಮೀಸಲು.
ಜೈನ ಅರ್ಚಕರು, ಸಿಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್ ಗಳಿಗೆ ನೀಡುತ್ತಿರುವ ಮಾಸಿಕ ಗೌರವಧನ 6,000 ರೂ.ಗೆ ಹೆಚ್ಚಳ. ಸಿಖ್ ಸಹಾಯಕ ಗ್ರಂಥಿಗಳು ಹಾಗೂ ಮೋಝಿನ್ ಗಳಿಗೆ ನೀಡುವ ಮಾಸಿಕ ಗೌರವಧನ 5,000 ಹೆಚ್ಚಳ.
ಪ್ರಾಚೀನ ಬೌದ್ಧ ಕೇಂದ್ರವಾಗಿರುವ ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನಲ್ಲಿ ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆ.
ಅಲ್ಪಸಂಖ್ಯಾತರ ಸಮುದಾಯದವರಿಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಹೋಬಳಿ ಮತ್ತು ತಾಲೂಕು ಮಟ್ಟದಲ್ಲಿ 50 ಲಕ್ಷ ರೂ. ಹಾಗೂ ಜಿಲ್ಲಾ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಬಹುಪಯೋಗಿ ಭವನ ನಿರ್ಮಾಣ
ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಪ್ರದೇಶಗಳಲ್ಲಿರುವ ಐ.ಟಿ.ಐ ಗಳಲ್ಲಿ ಹೊಸ ಕೋರ್ಸ್‌ಗಳನ್ನು ಹಾಗೂ ಹೆಚ್ಚುವರಿ ತರಗತಿ ಪ್ರಾರಂಭದ ಬಗ್ಗೆ ಘೋಷಣೆ ಮಾಡಿದ್ದಾರೆ.
While Karnataka Chief Minister Siddaramaiah on Friday presented his 16th budget, the opposition Bharatiya Janata Party (BJP) called the boost for minorities “appeasement". Siddaramaiah said there is no doubt that this budget will be a beacon for the comprehensive development of the state for the next one year.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm