ಬ್ರೇಕಿಂಗ್ ನ್ಯೂಸ್
14-03-25 02:20 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.14 : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯ ಕಲ್ಪಿಸಿದ ಆರೋಪಕ್ಕೆ ಪುಷ್ಟಿ ಸಿಕ್ಕ ಬೆನ್ನಲ್ಲೇ ರಾಜ್ಯ ಪೊಲೀಸ್ ಗೃಹ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಡಿಜಿಪಿ ರಾಮಚಂದ್ರರಾವ್ ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿದೆ. ಡಿಜಿಪಿ ಅವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮೂಲಕ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎನ್ನಲಾಗುತ್ತಿದೆ.
ಇದೇ ವೇಳೆ, ಕಾನೂನು ಬಾಹಿರವಾಗಿ ಶಿಷ್ಟಾಚಾರ ಸೌಲಭ್ಯ ನೀಡಿದ ಪ್ರಕರಣ ಸಂಬಂಧಿಸಿ ರಾಜ್ಯ ಸರ್ಕಾರ ನೇಮಿಸಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದ ತನಿಖಾ ತಂಡಕ್ಕೆ ಸಿಐಡಿ ವಿಭಾಗದ ಡಿಐಜಿ ಕೃಷ್ಣವಂಶಿ ಅವರನ್ನು ಸರ್ಕಾರ ನೇಮಿಸಿದೆ. ಎಸಿಎಸ್ ಗೌರವ ಗುಪ್ತಾ ಅವರಿಗೆ ಡಿಐಜಿ ಸಹಾಯಕ ತನಿಖಾಧಿಕಾರಿ ಆಗಿರಲಿದ್ದಾರೆ.
ರನ್ಯಾಗೆ ಪ್ರೋಟೋಕಾಲ್ ನೀಡುಲು ಸೂಚಿಸಿದ್ದ ಡಿಜಿಪಿ!
‘ನನಗೆ ದುಬೈನಿಂದಲೇ ರನ್ಯಾ ರಾವ್ ಕರೆ ಮಾಡಿ ಶಿಷ್ಟಾಚಾರ (ಪ್ರೋಟೋಕಾಲ್) ಪ್ರಕಾರ ಕರೆದುಕೊಂಡು ಹೋಗುವಂತೆ ಹೇಳಿದ್ದರು. ಅಲ್ಲದೆ, ವಿಮಾನ ನಿಲ್ದಾಣದಲ್ಲಿ ಕುಟುಂಬದವರು ಯಾರೇ ಬಂದರೂ ಶಿಷ್ಟಾಚಾರ ನೀಡುವಂತೆ ಡಿಜಿಪಿ ರಾಮಚಂದ್ರರಾವ್ ಅವರ ಸೂಚನೆ ಇತ್ತು ಎಂದು ಡಿಆರ್‌ಐ ವಿಚಾರಣೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆ ಶಿಷ್ಟಾಚಾರ ವಿಭಾಗದ ಹೆಡ್ ಕಾನ್‌ಸ್ಟೇಬಲ್ ಬಸವರಾಜು ಹೇಳಿಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ತಮ್ಮ ಮಲ ಮಗಳು ರನ್ಯಾ ಅವರಿಗೆ ಕಾನೂನುಬಾಹಿರವಾಗಿ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯವನ್ನು ಡಿಜಿಪಿ ರಾಮಚಂದ್ರರಾವ್ ಕಲ್ಪಿಸಿದ್ದರು ಎಂಬ ಆರೋಪಕ್ಕೆ ಸಾಕ್ಷಿ ಸಿಕ್ಕಂತಾಗಿದೆ. ಇದು ಡಿಜಿಪಿಗೆ ಮತ್ತಷ್ಟು ಸಂಕಷ್ಟ ತಂದಿದ್ದು ಡಿಆರ್ ಐ ಅಧಿಕಾರಿಗಳು ಅವರನ್ನು ತನಿಖೆಗೆ ಒಳಪಡಿಸುವ ಸಾಧ್ಯತೆಯಿದೆ. ಹೀಗಾಗಿ ಅವರನ್ನು ರಜೆಯಲ್ಲಿ ಕಳುಹಿಸುವ ನಿರ್ಧಾರಕ್ಕೆ ಬರಲಾಗಿದೆ. ಮಾ.3ರಂದು ರಾತ್ರಿ ದುಬೈನಿಂದ ಕೆಐಎನಲ್ಲಿ ಬಂದಿಳಿದಿದ್ದ ರನ್ಯಾರನ್ನು ಡಿಆರ್ ಐ ವಶಕ್ಕೆ ಪಡೆದ ಸಂದರ್ಭದಲ್ಲಿ ಬಸವರಾಜು ಜೊತೆಗಿದ್ದರು.
ರಾಮಚಂದ್ರರಾವ್ ಸೂಚನೆಯಂತೆ ಪ್ರತಿಬಾರಿ ರನ್ಯಾರಾವ್‌ಗೆ ಪ್ರೋಟೋಕಾಲ್ ವ್ಯವಸ್ಥೆ ಮಾಡಲಾಗುತ್ತಿತ್ತು. ಮಾರ್ಚ್ 03ರಂದು ರನ್ಯಾರಾವ್ ನನಗೆ ಕರೆ ಮಾಡಿ ದುಬೈನಿಂದ ಸಂಜೆ 6:30ಕ್ಕೆ ಬೆಂಗಳೂರಿಗೆ ಬರುತ್ತಿದ್ದೇನೆ ಎಂದು ತಿಳಿಸಿದ್ದರು. ಆಕೆ ಬೆಂಗಳೂರಿಗೆ ಬಂದಾಗ ನಾನು ಗ್ರೀನ್ ಚಾನೆಲ್ ವ್ಯವಸ್ಥೆ ಮಾಡಿದ್ದೆ. ರನ್ಯಾರಾವ್ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವಿಚಾರ ನನಗೆ ಗೊತ್ತಿರಲಿಲ್ಲ ಎಂದು ಬಸವರಾಜು ಹೇಳಿಕೆ ನೀಡಿದ್ದಾರೆ.
In a fresh development in the intensifying row over the gold smuggling case involving Kannada actress Ranya Rao, Basavaraj, the protocol officer who assisted her in getting clearance at Bengaluru's Kempegowda International Airport, alleged that he only followed Ranya's stepfather and Karnataka DGP Ramachandra Rao's direct instruction.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am