ಬ್ರೇಕಿಂಗ್ ನ್ಯೂಸ್
18-12-20 11:56 am Headline Karnataka News Network ಕರ್ನಾಟಕ
ಬೆಂಗಳೂರು, ಡಿ.17: ಕೋವಿಡ್-19 ಹಿನ್ನೆಲೆಯಲ್ಲಿ ಕ್ರಿಸ್‍ಮಸ್ ಹಬ್ಬ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪಾರ್ಟಿ ಮಾಡುವುದನ್ನು ನಿಷೇಧಿಸಲಾಗಿದೆ. ಚರ್ಚ್ ಹಾಗೂ ಹೊಟೇಲ್, ಮಾಲ್ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಮಾಡುವಂತಿಲ್ಲ ಎಂದಿರುವ ರಾಜ್ಯ ಸರಕಾರ ಸರಕಾರ ಅದಕ್ಕಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಚರ್ಚ್ ಗಳಲ್ಲಿ ಪ್ರಾರ್ಥನೆ ವೇಳೆ ಒಂದೇ ಬಾರಿಗೆ ಹೆಚ್ಚು ಜನ ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಹಬ್ಬದ ಸಂದರ್ಭದಲ್ಲಿ ಹಸ್ತಲಾಘವ ಮತ್ತು ಆಲಿಂಗನ ಮಾಡುವಂತಿಲ್ಲ. ಡಿ.30 ರಿಂದ ಜ.2 ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಮಾಡಲು ಅವಕಾಶ ಇಲ್ಲ. ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ, ಯಾವುದೇ ವಿಶೇಷ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ.


ಅಲ್ಲದೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳ, ಮುಖ್ಯ ರಸ್ತೆಗಳಲ್ಲಿ ದೈಹಿಕ ಅಂತವಿಲ್ಲದೇ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಲಾಗಿದೆ. ಸರಕಾರದ ಮಾರ್ಗಸೂಚಿಯಂತೆ ಹಿರಿಯರು, ಮಕ್ಕಳು ಮನೆಯಲ್ಲಿಯೇ ಇರಬೇಕು. ಹಾಗೂ ಕ್ಲಬ್, ಮಾಲ್, ರೆಸ್ಟೋರೆಂಟ್ ಹಾಗೂ ಹೊಟೇಲ್‍ಗಳಲ್ಲಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಕಡ್ಡಾಯವಾಗಿ ಮಾಡಬೇಕು ಹಾಗೂ ಜನರು ಹೆಚ್ಚು ಸೇರದಂತೆ ಜಾಗೃತಿ ವಹಿಸಬೇಕು. ಪ್ರಾಂಗಣ, ಕಟ್ಟಡ ಸಮುಚ್ಛಯದಲ್ಲಿ ಕಡ್ಡಾಯವಾಗಿ ದೈಹಿಕ ಅಂತರವನ್ನು ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆಯ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Christmas New Year 2020 government issues guidelines prohibit shaking of hands and hug. State chief secretary T M Vjay Bhaskar, has issued a circular containing the new guidelines. The guidelines say that the organisers should take steps to ensure that on Christmas, not too big crowd comes together in churches.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm