ಬ್ರೇಕಿಂಗ್ ನ್ಯೂಸ್
17-03-25 11:54 am Bangalore Correspondent ಕರ್ನಾಟಕ
ಬೆಂಗಳೂರು, ಮಾ.17 : ಬಿಜೆಪಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಸದ್ಯದಲ್ಲೇ ನಮ್ಮ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ಪಕ್ಷದ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. ಬಿಜೆಪಿ ಶಾಸಕರಷ್ಟೇ ಅಲ್ಲದೆ ಜೆಡಿಎಸ್ ಪಕ್ಷದ ಬಹಳಷ್ಟು ಮುಖಂಡರು ಕೂಡ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂದವರು ಹೇಳಿದ್ದಾರೆ.
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಯಾವುದೇ ಪಕ್ಷದವರು ಭಾಗಿಯಾಗಿರಲಿ, ನಮ್ಮ ಸರಕಾರ ಯಾರನ್ನೂ ರಕ್ಷಿಸುವುದಿಲ್ಲ. ನಮ್ಮ ಪಕ್ಷದ ಯಾವ ಸಚಿವರೂ ಅದಕ್ಕೆ ಬೆಂಬಲ ನೀಡಿಲ್ಲ. ಹಾಗೇನಾದರೂ ದಾಖಲೆಗಳಿದ್ದರೆ, ಬಿಜೆಪಿ ಬಿಡುಗಡೆ ಮಾಡಲಿ. ತಪ್ಪಿತಸ್ಥರು ಯಾರೇ ಆಗಿದ್ದರೂ ಶಿಕ್ಷೆಯಾಗಲೇಬೇಕು ಎಂದು ಆ ಕುರಿತ ಪ್ರಶ್ನೆಗೆ ಉತ್ತರಿಸಿದ್ದಾರೆ.
ರಾಜ್ಯದ ಸಚಿವ ಸಂಪುಟ ವಿಸ್ತರಣೆ ಮೇ ತಿಂಗಳಲ್ಲಿ ಆಗುವ ಸಾಧ್ಯತೆಯಿದೆ. ಹಿಂದಿನ ಸಚಿವ ಸಂಪುಟದಲ್ಲಿಯೇ ನನಗೆ ಸಚಿವ ಸ್ಥಾನ ಸಿಗಬೇಕಿತ್ತು. ಈ ಬಾರಿ ಸ್ಥಾನ ಸಿಗುವ ಪೂರ್ಣ ವಿಶ್ವಾಸವಿದೆ ಎಂದು ಸಲೀಂ ಅಹ್ಮದ್ ತಿಳಿಸಿದ್ದಾರೆ.
ಇತ್ತೀಚೆಗೆ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಶಾಸಕರಾದ ಎಸ್ಟಿ ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ಅವರನ್ನು ಈ ತಿಂಗಳಾಂತ್ಯಕ್ಕೆ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು. ಈ ಬಗ್ಗೆ ಕೇಂದ್ರ ಶಿಸ್ತು ಸಮಿತಿಗೆ ವರದಿ ನೀಡಿದ್ದೇವೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸಲೀಂ ಅಹ್ಮದ್, ಅವರಿಬ್ಬರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಸುಳಿವು ನೀಡಿದ್ದಾರೆ. ಆದರೆ ಉಚ್ಚಾಟನೆ ಆದರೂ ಶಾಸಕನಾಗಿ ಪಕ್ಷಾಂತರ ಮಾಡುವುದು ಕಾನೂನು ಉಲ್ಲಂಘನೆಯಾಗಿದ್ದು ಅವರು ಶಾಸಕ ಸ್ಥಾನ ತ್ಯಜಿಸಿಯೇ ಕಾಂಗ್ರೆಸ್ ಸೇರಬೇಕಾಗುತ್ತದೆ. ಮತ್ತೆ ಅವರು ಚುನಾವಣೆ ನಿಂತು ಆಯ್ಕೆ ಆಗುವ ಸವಾಲಿದೆ.
S.T. Somashekar and Shivaram Hebbar are set to join Congress says Saleem Ahmad following rumors of BJP expulsion.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am