ಬ್ರೇಕಿಂಗ್ ನ್ಯೂಸ್
18-03-25 02:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ. ಸುದ್ದಗುಂಟೆಪಾಳ್ಯ ನಿವಾಸಿಗಳಾದ ಸುಮತಿ (35) ಹಾಗೂ ಸೋನಿ ಕುಮಾರಿ (35) ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
ಸುದ್ದಗುಂಟೆಪಾಳ್ಯ ಮುಖ್ಯರಸ್ತೆಯ ದುರಸ್ತಿ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ವಾಹನ ಹಿಮ್ಮುಖವಾಗಿ ಚಲಿಸುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರಿಂದ ವಿದ್ಯುತ್ ಕಂಬ ಮುರಿದು ನಡೆದು ಬರುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಓರ್ವ ಮಹಿಳೆ ನಾಲ್ಕು ತಿಂಗಳ ಗರ್ಭಿಣಿ:
ಬಿಹಾರದ ಸೋನಿ ಕುಮಾರಿ ಕಳೆದ ಎಂಟು ವರ್ಷಗಳಿಂದ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಸದ್ಯ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದು ಬಂದಿದೆ. ತಮಿಳುನಾಡಿನ ಸುಮತಿ, ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸುದ್ದಗುಂಟೆಪಾಳ್ಯದಲ್ಲಿ ನೆಲೆಸಿದ್ದರು. ಇಬ್ಬರೂ ಮಹಿಳೆಯರು ಸೋಮವಾರ ಸಂಜೆ ತಮ್ಮ ಮಕ್ಕಳನ್ನು ಟ್ಯೂಷನ್ನಿಂದ ಕರೆದುಕೊಂಡು ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ರಸ್ತೆ ಕಾಮಗಾರಿಯ ವೇಳೆ ಜೆಸಿಬಿ ಡ್ರೈವರ್ ಕಿವಿಗೆ ಹೆಡ್ಫೋನ್ ಹಾಕಿಕೊಂಡು ಕೆಲಸ ಮಾಡುತ್ತಿದ್ದ. ಈ ವೇಳೆ ಲೈಟ್ ಕಂಬದಿಂದ ಮನೆಗೆ ಬೇರೆ ಕಡೆಗೆ ಕನೆಕ್ಟ್ ಮಾಡಿದ್ದ ವೈಯರ್ಗೆ ಜೆಸಿಬಿಯ ಮುಂಭಾಗ ಟಚ್ ಆಗಿದೆ. ಜನ ಜೋರಾಗಿ ಕೂಗಿಕೊಂಡರೂ ಡ್ರೈವರ್ ಕೇಳಿಸಿಕೊಳ್ಳದೇ ವೈಯರ್ ಎಳೆದಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಜೆಸಿಬಿ ಯಂತ್ರವನ್ನು ಜಪ್ತಿ ಮಾಡಿದ್ದಾರೆ. ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಬೈಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
JCB Driver Rams Into Electric Pole, Two killed Including Pregnant Woman in Bangalore at Sadduguntepalya.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm