ಬ್ರೇಕಿಂಗ್ ನ್ಯೂಸ್
18-12-20 01:19 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.18: ಕೊರೊನಾ ಸೋಂಕಿನ ಕಾರಣದಿಂದ ಸ್ಥಗಿತಗೊಂಡಿರುವ ಶಾಲೆಗಳನ್ನು ಹೊಸ ವರ್ಷಕ್ಕೆ ಆರಂಭಿಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಈಗಾಗ್ಲೇ ಪ್ರಾಥಮಿಕ ಶಾಲೆಗಳ ವಿದ್ಯಾಗಮ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿರುವ ಶಿಕ್ಷಣ ಇಲಾಖೆ, ಜ.1ರಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಿದೆ.
ಕೊರೊನಾ ಸೋಂಕಿನ ಪ್ರಮಾಣ ತಗ್ಗಿರುವುದು ಮತ್ತು 2ನೇ ಅಲೆಯ ತೀವ್ರತೆ ಕಡಿಮೆ ಇರುವ ಕಾರಣ ಬೋರ್ಡ್ ಪರೀಕ್ಷೆ ಇರುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಜನವರಿ ಆರಂಭದಲ್ಲಿಯೇ ಆರಂಭಿಸಲು ಶಿಕ್ಷಣ ಇಲಾಖೆಗೆ ಕೊರೊನಾ ಸಲಹಾ ಮಂಡಳಿ ಸರಕಾರಕ್ಕೆ ವರದಿ ನೀಡಿದೆ. ಅಲ್ಲದೆ, 15 ದಿನಗಳ ಬಳಿಕ 9ನೇ ತರಗತಿ ಮತ್ತು ಮೊದಲ ಪಿಯು ತರಗತಿಗಳನ್ನೂ ಆರಂಭಿಸುವಂತೆ ಸಲಹೆ ಮಾಡಿದೆ. ಇದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಒಪ್ಪಿಗೆ ನೀಡಿದ್ದು ಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.


ಕೊರೊನಾ ತಾಂತ್ರಿಕ ಮತ್ತು ಸಲಹಾ ಸಮಿತಿ ತಜ್ಞರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸುರೇಶ್ ಕುಮಾರ್ ಸಭೆ ನಡೆಸಿದ್ದು, ಅಧಿಕಾರಿಗಳ ಅಭಿಪ್ರಾಯ ಪಡೆದಿದ್ದಾರೆ. ಕೊರೊನಾ ಸೋಂಕಿನ ಪ್ರಮಾಣ, ಮರಣದ ಪ್ರಮಾಣ, ಹರಡುವಿಕೆ ಇತ್ಯಾದಿ ವಿಷಯಗಳ ಬಗ್ಗೆ ಸಚಿವರು ವರದಿ ತರಿಸಿಕೊಂಡಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ದೃಷ್ಟಿಯಿಂದ ಶೀಘ್ರದಲ್ಲೇ ಶಾಲೆ ಆರಂಭಿಸುವುದು ಸೂಕ್ತ ಎಂದು ಅಧಿಕಾರಿಗಳು ಅಭಿಪ್ರಾಯ ನೀಡಿದ್ದಾರೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ 1ರಿಂದ 5ನೇ ತರಗತಿ ವರೆಗಿನ ಮಕ್ಕಳಿಗೆ ವಿದ್ಯಾಗಮ ನಡೆಸುವುದು ಬೇಡ ಎಂದು ತಜ್ಞರು ವರದಿ ನೀಡಿದ್ದಾರೆ. 6ರಿಂದ 8ನೇ ತರಗತಿ ವರೆಗಿನ ಮಕ್ಕಳಿಗೆ ಸುರಕ್ಷತಾ ಕ್ರಮಗಳೊಂದಿಗೆ ವಿದ್ಯಾಗಮ ನಡೆಸುವುದು ಉತ್ತಮ ಎಂದು ಸಲಹೆ ಮಾಡಿದ್ದಾರೆ.
The Karnataka Education Department is making its preparations to commence SSLC and PUC in 2021 which was halted after coronavirus lockdown.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm