ಬ್ರೇಕಿಂಗ್ ನ್ಯೂಸ್
21-03-25 10:41 pm HK News Desk ಕರ್ನಾಟಕ
ಕೊಪ್ಪಳ, ಮಾ 21: ಹೊತ್ತು - ಹೆತ್ತವ್ವನ ಪ್ರೀತಿ, ಮಮತೆಗೆ ಬೆಲೆ ಕಟ್ಟಲಾಗದು. ಮಕ್ಕಳ ವಿಚಾರಕ್ಕೆ ಬಂದರೆ ಎಂಥಹ ತ್ಯಾಗಕ್ಕಾದರೂ ತಾಯಿ ಸಿದ್ಧಳಿರುತ್ತಾಳೆ. ಅಂತಹ ತಾಯಿಯ ಅಗಲಿಕೆಯ ನೋವಿನ ಮಧ್ಯೆಯೂ ವಿದ್ಯಾರ್ಥಿಯೊಬ್ಬ ಪರೀಕ್ಷೆ ಬರೆದ ಘಟನೆ ತಾಲೂಕಿನ ಕೇಸರಹಟ್ಟಿಯಲ್ಲಿ ನಡೆದಿದೆ.
ಗ್ರಾಮದ ಸ್ವಾಮಿ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅಡಿವೆಯ್ಯ ಸ್ವಾಮಿ ಎಂಬ ಹತ್ತನೇ ತರಗತಿಯ ವಿದ್ಯಾರ್ಥಿಯ ತಾಯಿ ವಿಜಯಲಕ್ಷ್ಮಿ ಸಿದ್ದಯ್ಯಸ್ವಾಮಿ (38) ಶುಕ್ರವಾರ ಬೆಳಗಿನ ಸಮಯದಲ್ಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಾಯಿಯ ಅಗಲಿಕೆಯ ಸುದ್ದಿಯ ಮಧ್ಯೆಯೂ ಧೃತಿಗೆಡದ ವಿದ್ಯಾರ್ಥಿ ತನ್ನ ಕುಟುಂಬದವರ ಮನವೊಲಿಸಿ ಪರೀಕ್ಷೆ ಬರೆಯುವುದಾಗಿ ತಿಳಿಸಿದ್ದ.
ವಿದ್ಯಾರ್ಥಿ ಮನೆಗೆ ಬಂದ ಶಿಕ್ಷಕರು:
ನೋವಿನಲ್ಲಿದ್ದ ವಿದ್ಯಾರ್ಥಿ ಅಡಿವೆಯ್ಯ ಸ್ವಾಮಿ ಮನೆಗೆ ಬಂದ ಶಿಕ್ಷಕರು ಸಾಂತ್ವಾನ ಹೇಳಿದರು. ಬಳಿಕ ಪರೀಕ್ಷಾ ಕೇಂದ್ರದವರೆಗೆ ಕರೆದೊಯ್ಯಲು ನೆರವಾದರು. ಪರೀಕ್ಷೆಯ ಬಳಿಕ ವಿದ್ಯಾರ್ಥಿ ತನ್ನ ತಾಯಿಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ.
ವಿದ್ಯಾರ್ಥಿ ತಾಯಿ ವಿಜಯಲಕ್ಷ್ಮಿ ಕಳೆದ ಕೆಲ ದಿನಗಳ ಹಿಂದೆ ಸ್ನಾನದ ಕೋಣೆಯಲ್ಲಿ ಬಿದ್ದು ತಲೆಗೆ ಗಾಯ ಮಾಡಿಕೊಂಡಿದ್ದರು. ಪರಿಣಾಮ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಹೀಗಾಗಿ, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ರಾತ್ರಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ, ಶುಕ್ರವಾರ ಬೆಳಗ್ಗೆ ವಿಜಯಲಕ್ಷ್ಮಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
In a poignant display of resilience and determination, Adiveya Swami, a student from Koppal, wrote his SSLC exam on the same day he lost his mother. Despite the heart-wrenching tragedy, Adiveya chose to honor his commitment to his education, demonstrating extraordinary bravery in the face of grief.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm