ಬ್ರೇಕಿಂಗ್ ನ್ಯೂಸ್
23-03-25 06:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಪ್ರಕರಣ ಇದೀಗ ಕಾಂಗ್ರೆಸ್ ಹೈಕಮಾಂಡ್ ತಲುಪಿದೆ. ಹೀಗಾಗಿ ಇದೇ ವಿಚಾರ ಮುಂದಿಟ್ಟು ಕೆಲವರನ್ನು ತುಳಿಯುವ ಪ್ರಯತ್ನ ನಡೆದಿದ್ಯಾ ಎನ್ನುವ ವಿಚಾರ ಚರ್ಚೆಗೀಡಾಗಿದೆ.
ನಿನ್ನೆಯಷ್ಟೇ ರಾಜಣ್ಣ ಅವರ ಪುತ್ರ ಹಾಗೂ ಎಂಎಲ್‌ಸಿ ರಾಜೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ತಮ್ಮ ತಂದೆ ಮೇಲೆ ನಡೆದಿರುವ ಹನಿಟ್ರ್ಯಾಪ್ ಯತ್ನ ವಿಚಾರವನ್ನು ಪ್ರಸ್ತಾಪಿಸಿ, ಸಾಕ್ಷ್ಯವಾಗಿ ಕೆಲ ಡಿಜಿಟಲ್ ದಾಖಲೆಗಳನ್ನೂ ನೀಡಿದ್ದಾರೆ. ಅಲ್ಲದೆ, ಹನಿಟ್ರ್ಯಾಪ್ ಪ್ರಕರಣದ ಹಿಂದೆ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂದೂ ಆರೋಪಿಸಿದ್ದಾರೆ ಎನ್ನಲಾಗುತ್ತಿದೆ.
ಈ ನಡುವೆ ಸಾರ್ವಜನಿಕ ಸಭೆಯಲ್ಲಿ ರಾಜೇಂದ್ರ ಈ ವಿಚಾರ ಪ್ರಸ್ತಾಪಿಸಿ ಅವರಿಗೆ ಹೆಂಡತಿ, ಮಕ್ಕಳಿಲ್ಲವೇ? ನಮಗೇಕೆ ಹನಿಟ್ರ್ಯಾಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಗೃಹ ಸಚಿವರಿಗೆ ದೂರು ನೀಡುತ್ತೇವೆ, ಮುಖ್ಯಮಂತ್ರಿ ಏನು ಹೇಳುತ್ತಾರೋ ಅದನ್ನು ಪಾಲಿಸುತ್ತೇವೆ ಎಂದು ತಿಳಿಸಿದರು.
ಪ್ರಕರಣ ಸಂಬಂಧ ರಾಜಣ್ಣ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸದ್ಯದಲ್ಲೇ ನವದೆಹಲಿಗೆ ತೆರಳಲಿದ್ದು, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ. ರಾಜಕೀಯವಾಗಿ ತಮ್ಮನ್ನು ತುಳಿಯಲು ಪಕ್ಷದ ನಾಯಕರು ಹನಿಟ್ರ್ಯಾಪ್ ಮಾಡಲು ಪಿತೂರಿ ನಡೆಸಿದ್ದಾರೆಂದು ದೂರು ಹೇಳಲಿದ್ದಾರೆಂದು ತಿಳಿದುಬಂದಿದೆ. ಹನಿಟ್ರ್ಯಾಪ್ ವಿಚಾರ ಭಾರೀ ಬಿರುಗಾಳಿ ಎಬ್ಬಿಸಿರುವುದರಿಂದ ಹೈಕಮಾಂಡ್ ನಾಯಕರು ತಮ್ಮದೇ ಮೂಲಗಳಿಂದ ಮಾಹಿತಿ ಸಂಗ್ರಹಿಸಿದ್ದು ಪ್ರಕರಣ ನಿಭಾಯಿಸಲು ತಲೆ ಕೆಡಿಸಿಕೊಂಡಿದ್ದಾರೆ.
Honey trap, consideration to lodge complaints against party members to high command leaders. The Congress high command is said to be disappointed with the manner in which the Siddaramaiah-led government in Karnataka handled the political storm that erupted in the Legislative Assembly, following Cooperation Minister K.N. Rajanna’s allegation that vested interests had honey-trapped 48 people, including legislators, central leaders, and judges.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm