ಬ್ರೇಕಿಂಗ್ ನ್ಯೂಸ್
23-03-25 11:01 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23 : ಚಿನ್ನದ ರಿಕವರಿ ಹೆಸರಲ್ಲಿ ಚಿನ್ನದ ಗಟ್ಟಿ ಪಡೆದು ದುರ್ಬಳಕೆ ಮಾಡಿದ ಆರೋಪದಲ್ಲಿ ಪಿಎಸ್‌ಐ ಓರ್ವರನ್ನು ಅಮಾನತು ಮಾಡಿರುವ ಘಟನೆ ನಡೆದಿದೆ.
ಕಾಟನ್ ಪೇಟೆ ಠಾಣೆಯ ಪಿಎಸ್‌ಐ ಸಂತೋಷ್ ಅಮಾನತಾಗಿದ್ದು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಸಂತೋಷ್ ಅವರು 2022ರಲ್ಲಿ ಹೊಸೂರು ಗೇಟ್ ಠಾಣೆ ಪಿಎಸ್‌ಐ ಆಗಿದ್ದಾಗ ಪ್ರಕರಣ ಒಂದರಲ್ಲಿ ರಿಕವರಿ ಮಾಡಿದ್ದ ಚಿನ್ನವನ್ನು ದುರ್ಬಳಕೆ ಮಾಡಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ.
ಚಿನ್ನದ ಅಂಗಡಿ ಮಾಲೀಕರೊಬ್ಬರ ಬಳಿ ರಿಕವರಿ ಚಿನ್ನ ತೋರಿಸಬೇಕಿದೆ ಎಂದು ಹೇಳಿ 950 ಗ್ರಾಂ ಚಿನ್ನದ ಗಟ್ಟಿ ಕೊಡು, ಫೋಟೋ ತೆಗೆಸಿ ಹಿಂದಿರುಗಿಸುತ್ತೇನೆ ಎಂದು ಹೇಳಿ ಚಿನ್ನದ ಗಟ್ಟಿ ಪಡೆದು ಎಸ್ಕೇಪ್ ಆಗಿದ್ದರು. ಬಳಿಕ ಅಂಗಡಿ ಮಾಲೀಕ ಚಿನ್ನ ಕೇಳಿದಾಗ ಹಣ ಕೊಡುತ್ತೇನೆಂದು ಚೆಕ್ ಕೊಟ್ಟಿದ್ದರು. ಆದರೆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಚಿನ್ನದ ಅಂಗಡಿ ಮಾಲೀಕ ಕೇಳಿದಾಗ ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್ ಐ ಮೇಲೆ ದೂರು ದಾಖಲಾಗಿತ್ತು. ಎಫ್‌ಐಆರ್ ದಾಖಲಾದ ಹಿನ್ನೆಲೆಯಲ್ಲಿ ಪಿಎಸ್ ಐ ಸಂತೋಷ್ ಅವರನ್ನು ಅಮಾನತು ಮಾಡಲಾಗಿದೆ.
ಚಿನ್ನದ ಅಂಗಡಿ ಮಾಲೀಕನಿಗೆ ಬೆದರಿಕೆ
ಈ ನಡುವೆ ಜಮೀನಿನ ಕರಾರು ಪತ್ರವನ್ನು ಚಿನ್ನದ ಅಂಗಡಿ ಮಾಲೀಕನಿಗೆ ಸಂತೋಷ್ ನೀಡಿದ್ದರು. ಆದರೆ ಆ ಜಾಗವನ್ನು ಬೇರೆಯವರಿಗೆ ಮಾರಾಟ ಮಾಡಿದ್ದರು. ಇದನ್ನು ಚಿನ್ನದ ಅಂಗಡಿ ಮಾಲೀಕ ಪ್ರಶ್ನಿಸಿದ ವೇಳೆ ಆತನಿಗೆ ಇನ್ಸ್ಪೆಕ್ಟರ್ ಸಂತೋಷ್ ಖಾಲಿ ಚೆಕ್ ನೀಡಿದ್ದರು. ನಂತರ, ಚೆಕ್ ಕೂಡ ಬೌನ್ಸ್ ಆಗಿತ್ತು. ಮತ್ತೆ ಹಣ ಅಥವಾ ಚಿನ್ನ ಕೇಳಿದಾಗ ಸಂತೋಷ್ ಅವರು ಚಿನ್ನದ ಅಂಗಡಿ ಮಾಲೀಕನಿಗೆ ಬೆದರಿಕೆ ಹಾಕಿದ್ದರು. ಹೀಗಾಗಿ, ಹಲಸೂರು ಗೇಟ್ ಠಾಣೆಯಲ್ಲಿ ಪಿಎಸ್‌ಐ ಸಂತೋಷ್ ವಿರುದ್ಧ ಅಧಿಕಾರ ದುರುಪಯೋಗ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು.
Bangalore 950 Grams of Gold Seized in Recovery Scam, Cottonpet Police station PSI Santosh Suspended Following FIR.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm