ಬ್ರೇಕಿಂಗ್ ನ್ಯೂಸ್
24-03-25 07:23 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿ ನೀಡುವುದಕ್ಕಾಗಿ ಸಂವಿಧಾನದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದಾರೆನ್ನಲಾದ ಹೇಳಿಕೆ ತೀವ್ರ ವಿವಾದ ಹುಟ್ಟುಹಾಕಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಪ್ರಸ್ತಾಪಗೊಂಡು ಕೋಲಾಹಲ ಸೃಷ್ಟಿಸಿದೆ.
ಈ ವಿಚಾರ ರಾಜಕೀಯ ಬಿರುಗಾಳಿ ಎಬ್ಬಿಸುತ್ತಿದ್ದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಡಿಸಿಎಂ ಡಿಕೆ ಶಿವಕುಮಾರ್ ಗೆ ಕರೆ ಮಾಡಿ ವಿವರಣೆ ಕೇಳಿದ್ದಾರೆ ಎನ್ನಲಾಗಿದೆ. ಡಿಕೆಶಿ ಹೇಳಿಕೆಯಿಂದ ಕಾಂಗ್ರೆಸ್ ಹೈಕಮಾಂಡ್ ಮುಜುಗರಕ್ಕೆ ಒಳಗಾಗಿದ್ದು ಈ ಬಗ್ಗೆ ಸಂಸತ್ತಿನಲ್ಲಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಸಂವಿಧಾನ ಬದಲಿಸುವ ಬಗ್ಗೆ ನಾನು ಮಾತನಾಡಲಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
'ನಾನು ಹಾಗೆ ಹೇಳಿಯೇ ಇಲ್ಲ, ನನ್ನ ಹೇಳಿಕೆಯನ್ನು ಬಿಜೆಪಿ ತಿರುಚಿದೆ. ಕಳೆದ 36 ವರ್ಷಗಳಿಂದ ಶಾಸಕನಾಗಿ ಇದ್ದೇನೆ. ಇಂತಹ ವಿಚಾರದಲ್ಲಿ ಜೆ.ಪಿ ನಡ್ಡಾ ಅವರಿಗಿಂತ ನಾನು ಹೆಚ್ಚು ಸೂಕ್ಷ್ಮತೆ ಹೊಂದಿದ್ದೇನೆ. ಆದರೆ ಬಿಜೆಪಿ ಜನಸಾಮಾನ್ಯರ ದಾರಿ ತಪ್ಪಿಸುತ್ತಿದೆ. ಸುಳ್ಳು ಹೇಳಿಕೆ ಸೃಷ್ಟಿಸಿ, ನನ್ನ ಹೆಸರನ್ನು ಎಳೆದು ತರಲಾಗುತ್ತಿದೆ. ನ್ಯಾಯಾಲಯಗಳ ತೀರ್ಪಿನ ಅನುಸಾರ ತಿದ್ದುಪಡಿ ತಂದಿರುವ ನಿದರ್ಶನವಿದೆ ಎಂದು ಹೇಳಿದ್ದೇನೆಯೇ ಹೊರತು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಹೇಳಿಲ್ಲ.
ನನ್ನ ಹೇಳಿಕೆಯನ್ನು ತಿರುಚಿರುವ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ. ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಏನೂ ಇಲ್ಲದೇ ಇರುವ ಕಾರಣಕ್ಕೆ ಬಿಜೆಪಿ ಈ ರೀತಿ ಇಲ್ಲಸಲ್ಲದ ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪ ಮಾಡುತ್ತಿದೆ. ಇದೊಂದು ನನ್ನ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಮುಂದುವರೆದ ರಾಜಕೀಯ ಪಿತೂರಿ ಎಂದು ಹೇಳಿದ್ದಾರೆ.
ಸಂಸತ್ತಿನಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ಒದಗಿಸಲು ಅನುಕೂಲವಾಗುವಂತೆ ಸಂವಿಧಾನವನ್ನು ಬದಲಾಯಿಸುವುದಾಗಿ ಸಾಂವಿಧಾನಿಕ ಹುದ್ದೆಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ನೀಡಿರುವ ಹೇಳಿಕೆ ಒಪ್ಪಲಾಗದು ಎಂದು ಹೇಳಿದ್ದಾರೆ.
ಆ ವ್ಯಕ್ತಿಯನ್ನು ವಜಾಗೊಳಿಸುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷರು ಸ್ಪಷ್ಪಪಡಿಸಬೇಕು ಎಂದು ರಿಜಿಜು ಒತ್ತಾಯಿಸಿದ್ದು ಮುಸ್ಲಿಮರಿಗೆ ಮೀಸಲಾತಿ ನೀಡುವುದಾಗಿ ಹೇಳುವ ನೀವು, ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಮತ್ತು ಸಂವಿಧಾನದ ಪ್ರತಿಯನ್ನು ಜೀಬಿನಲ್ಲಿಟ್ಟುಕೊಂಡು ನಾಟಕವಾಡುತ್ತೀರಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ, ಕಾಂಗ್ರೆಸ್ ಸದಸ್ಯರು ಸಚಿವ ರಿಜಿಜು ವಿರುದ್ಧ ಮುಗಿಬಿದ್ದಾಗ ಸದನದಲ್ಲಿ ಗದ್ದಲ ಉಂಟಾಗಿದೆ.
The Parliament witnessed uproar on March 24 over the alleged remarks of Karnataka Deputy Chief Minister D.K. Shivakumar about “changing the Constitution” to provide reservation to Muslims.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 05:21 pm
Mangalore Correspondent
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm