ಬ್ರೇಕಿಂಗ್ ನ್ಯೂಸ್
26-03-25 11:47 am Bangalore Correspondent ಕರ್ನಾಟಕ
ಬೆಂಗಳೂರು, ಮಾ.26 : ಧರ್ಮಸ್ಥಳ ವಿರುದ್ಧ ಅವಹೇಳನ ಮತ್ತು ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಜಾನ್ ಡೋ (ಅಶೋಕ ಕುಮಾರ್) ಆದೇಶವನ್ನು ಮಾಡಿದೆ. ಜತೆಗೆ ಈವರೆಗೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋಗಳನ್ನು ಡಿಲೀಟ್ ಮಾಡುವಂತೆಯೂ ಸೂಚನೆ ನೀಡಿದೆ.
ಇತ್ತೀಚೆಗೆ ಸೌಜನ್ಯ ಕೊಲೆ ಪ್ರಕರಣದ ವಿಚಾರವಾಗಿ ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಕುಟುಂಬದ ಕುರಿತು ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇದರ ಬೆನ್ನಲ್ಲೇ ಎ.ಎಸ್.ಸುಕೇಶ್ ಮತ್ತು ಶೀನಪ್ಪ ಸೇರಿದಂತೆ ನಾಲ್ವರು ದಾವೆ ಹಾಕಿದ್ದರು.
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಎನ್.ಎಸ್.ನಟರಾಜ್ ವಿಚಾರಣೆ ನಡೆಸಿ ಈ ಆದೇಶ ನೀಡಿದ್ದಾರೆ. ಹಿರಿಯ ನ್ಯಾಯವಾದಿ ಎಸ್. ರಾಜಶೇಖರ ಹಿಳಿಯಾರು ಧರ್ಮಸ್ಥಳ ಪರ ವಾದ ಮಂಡಿಸಿದ್ದರು.
ಏನಿದು ಜಾನ್ ಡೋ ಆದೇಶ ?
ಜಾನ್ ಡೋ (ಅಶೋಕ ಕುಮಾರ್) ಆದೇಶ ಎಂದರೆ, ಅಜ್ಞಾತ ಅಥವಾ ಪತ್ತೆಯಾಗದ ವ್ಯಕ್ತಿಗಳ ವಿರುದ್ಧವೂ ಜಾರಿಯಾಗುವ ಕಾನೂನು ಕ್ರಮ. ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಮತ್ತು ಇತರ ಆನ್ಲೈನ್ ತಾಣಗಳಲ್ಲಿ ಅವಹೇಳನಕಾರಿ ಮತ್ತು ಅಪಪ್ರಚಾರ ಹೆಚ್ಚಿರುವ ಕಾರಣ, ಇದನ್ನು ತಡೆಯಲು ಈ ಆದೇಶ ನೀಡಲಾಗಿದೆ.
ಆದೇಶದ ಪ್ರಕಾರ, ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಯಾವುದೇ ಅವಹೇಳನಕಾರಿ ಅಪಪ್ರಚಾರವನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಅಥವಾ ಹರಡುವುದು ನಿಷೇಧಿಸಲಾಗಿದೆ. ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದರೆ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮ ಸಂಸ್ಥೆಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಯಾವುದೇ ಅವಹೇಳನಕಾರಿ ವಿಚಾರ ಹಂಚಿಕೊಂಡಿದ್ದಲ್ಲಿ ತಕ್ಷಣ ಅಳಿಸಿ ಹಾಕುವುದು ಮತ್ತು ಮುಂದುವರಿಸಿದ್ದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಆಗುವ ಸಾಧ್ಯತೆ ಇರುತ್ತದೆ.
ವಾದ ಮಂಡಿಸಿದ್ದೇನು?
ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಯೂಟ್ಯೂಬ್, ಫೇಸ್ ಬುಕ್, ಇನ್ಸ್ಟಾಗ್ರಾಂ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಮತ್ತು ಅಜಾಗೂರಕ ಆರೋಪಗಳನ್ನು ಹೊತ್ತ ಸುದ್ದಿಗಳನ್ನು ಮತ್ತು ವಿಡಿಯೋಗಳನ್ನು ರಚಿಸಿ ಬಿತ್ತರಿಸಲಾಗುತ್ತಿದೆ. ಈ ತರದ ವಿಡಿಯೋ ಮಾಡುವುದು, ಅಪ್ಲೋಡ್ ಮಾಡುವುದು, ಮತ್ತೊಬ್ಬರಿಗೆ ಕಳಿಸುವುದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುದಕ್ಕೆ ಶಾಶ್ವತವಾಗಿ ನಿರ್ಬಂಧಿಸಬೇಕು' ಎಂದು ಹಿರಿಯ ವಕೀಲ ರಾಜಶೇಖರ ಎಸ್.ಹಿಲಿಯಾರು ವಾದ ಮಂಡಿಸಿದ್ದರು.
The Bengaluru City Civil Court has issued an order restraining the dissemination of false, baseless, defamatory, and misleading information against Dr. D. Veerendra Heggade, the Dharmadhikari of Sri Kshetra Dharmasthala, his family members, and institutions associated with Sri Kshetra Dharmasthala.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
09-10-26 11:04 pm
HK staffer
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
09-10-26 08:41 pm
HK News Staffer
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm
Albert Rego, Body Exhume, Mangalore: ಆಸ್ತಿಗಾಗ...
09-10-26 10:01 am