ಬ್ರೇಕಿಂಗ್ ನ್ಯೂಸ್
26-03-25 06:07 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.26 : ಬಿಜೆಪಿಯಲ್ಲಿ ರೆಬೆಲ್ ಶಾಸಕನೆಂದೇ ಗುರುತಿಸಲ್ಪಟ್ಟು ರಾಜ್ಯ ಬಿಜೆಪಿಗೆ ಬಿಸಿ ತುಪ್ಪವಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಇದೇ ವೇಳೆ, ಯತ್ನಾಳ್ ಜೊತೆಗೆ ಗುರುತಿಸಿಕೊಂಡಿದ್ದ ಶಾಸಕ ಬಿಪಿ ಹರೀಶ್ ಮತ್ತು ಕೆಲವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಅವಧಿಗೆ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಕೇಂದ್ರ ಶಿಸ್ತು ಸಮಿತಿ ಎರಡು ಬಾರಿ ಶೋಕಾಸ್ ನೋಟಿಸ್ ನೀಡಿದ್ದರೂ ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆಬ್ರವರಿ 10 ರಂದು ಶೋಕಾಸ್ ನೋಟಿಸ್‌ಗೆ ಯತ್ನಾಳ್ ಉತ್ತರ ನೀಡಿದ್ದರು.
ಆನಂತರ, ಆರೆಸ್ಸೆಸ್ ಹಿರಿಯ ನಾಯಕರು ಯತ್ನಾಳ್ ಮತ್ತು ಅವರ ಬಳಗದ ಜೊತೆಗೆ ಕುಳಿತು ಮಾತನಾಡಿ ಹೊಂದಾಣಿಕೆಯಲ್ಲಿ ಹೋಗುವಂತೆ ಮನವೊಲಿಕೆ ಮಾಡಿದ್ದರು.ಆದರೂ ವಿಜಯೇಂದ್ರ ಮತ್ತು ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಿರಲಿಲ್ಲ. ಹೀಗಾಗಿ ಪಕ್ಷದ ಕೇಂದ್ರ ಶಿಸ್ತು ಸಮಿತಿ ದಿಢೀರ್ ನಿರ್ಧಾರ ಕೈಗೊಂಡಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟಕ್ಕೆ ಬ್ರೇಕ್ ಹಾಕುವ ಯತ್ನ ಮಾಡಿದೆ. ಅಲ್ಲದೇ ಇತರೆ ರೆಬೆಲ್ ನಾಯಕರಿಗೂ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದೆ.
ಯತ್ನಾಳ್ ಕಳೆದ ಒಂದು ವರ್ಷದಲ್ಲಿ ರಾಜ್ಯ ಬಿಜೆಪಿಗೆ ಎದುರಾಗಿ ತಮ್ಮದೇ ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್ ಸೈಲೆಂಟ್ ಆಗಿರಲಿಲ್ಲ. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಇದೀಗ ವಿಜಯೇಂದ್ರ ಮತ್ತು ಯಡಿಯೂರಪ್ಪ ದೆಹಲಿಯಲ್ಲಿ ಇರುವಾಗಲೇ ಉಚ್ಚಾಟನೆ ಆದೇಶ ಹೊರಡಿಸಲಾಗಿದೆ.
ನೀವು ಪಕ್ಷದ ಶಿಸ್ತನ್ನು ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಹಾಗೇ ನೀವು ಇಲ್ಲಿಯವರೆಗೆ ಹೊಂದಿದ್ದ ಪಕ್ಷದ ಜವಾಬ್ದಾರಿಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ.
Basangouda Patil Yatnal, BJP MLA from Bijapur City, Karnataka, has been expelled from the party for six years for his statements against the party and senior leader BS Yediyurappa.
29-03-25 09:19 pm
HK News Desk
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
29-03-25 11:04 pm
Mangalore Correspondent
MLC Ivan D'Souza, Mangalore: 7ನೇ ವೇತನ ಆಯೋಗ ;...
29-03-25 10:07 pm
Udupi Love Jihad, Kidnap, Crime: ಇಂಜಿನಿಯರಿಂಗ್...
29-03-25 05:20 pm
Kundapura accident: ಬಳ್ಕೂರಿನಲ್ಲಿ ಸ್ಕೂಟರಿಗೆ ಕಾ...
28-03-25 11:16 pm
Mangalore University, Rajendra Kumar, Rohan M...
28-03-25 07:38 pm
29-03-25 10:33 pm
HK News Desk
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm
Bangalore Murder, Techie: ಮುದ್ದಾದ ಪತ್ನಿಯನ್ನು...
28-03-25 06:12 pm