BJP Yatnal Out, Vijayapura, BY Vijayendra: ಬಿಜೆಪಿಯಿಂದ ರೆಬೆಲ್ ನಾಯಕ ಯತ್ನಾಳ್ ಔಟ್ ; ಸ್ವಕ್ಷೇತ್ರ ವಿಜಯಪುರದಲ್ಲಿ ಸಂಭ್ರಮಾಚರಣೆ, ನಾನು ಸಂಭ್ರಮಿಸಲ್ಲ, ದುರದೃಷ್ಟಕರ ಬೆಳವಣಿಗೆ ಎಂದ ವಿಜಯೇಂದ್ರ ! 

26-03-25 09:42 pm       Bangalore Correspondent   ಕರ್ನಾಟಕ

ಶಾಸಕ ಬಸನಗೌಡ ಪಾಟೀಲ ಯತ್ನಾಳ  ಉಚ್ಛಾಟನೆಯನ್ನು ಸ್ವಾಗತಿಸಿ, ಅವರ ಸ್ವಕ್ಷೇತ್ರ ವಿಜಯಪುರ ನಗರದಲ್ಲಿಯೇ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಸಿದ್ದೇಶ್ವರ ಗುಡಿ ಸೇರಿದಂತೆ ವಿವಿಧೆಡೆ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಘೋಷಣೆ ಕೂಗಿದರು.

ಬೆಂಗಳೂರು, ಮಾ.26 : ಶಾಸಕ ಬಸನಗೌಡ ಪಾಟೀಲ ಯತ್ನಾಳ  ಉಚ್ಛಾಟನೆಯನ್ನು ಸ್ವಾಗತಿಸಿ, ಅವರ ಸ್ವಕ್ಷೇತ್ರ ವಿಜಯಪುರ ನಗರದಲ್ಲಿಯೇ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಸಿದ್ದೇಶ್ವರ ಗುಡಿ ಸೇರಿದಂತೆ ವಿವಿಧೆಡೆ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಘೋಷಣೆ ಕೂಗಿದರು. 

ಈ ಕೆಲಸ ಮೊದಲೇ ಆಗಬೇಕಿತ್ತು. ಕಳೆದ 10 ವರ್ಷಗಳಿಂದ ಪಕ್ಷ ಮತ್ತು ನಾಯಕರನ್ನು ಮುಜುಗರಕ್ಕೀಡು ಮಾಡಿದ್ದರು. ಅವರ ಉಚ್ಛಾಟನೆಯಿಂದ ಪಕ್ಷಕ್ಕೆ ಯಾವುದೇ ಹಾನಿಯಾಗದು ಎಂದು ಸಂಭ್ರಮದ ನಡುವೆ ಮಾಜಿ ಸಚಿವ ಅಪ್ಪು ಪಟ್ಟಣ ಶೆಟ್ಟಿ ಹೇಳಿಕೆ ನೀಡಿದ್ದಾರೆ. 

ಸಂಭ್ರಮಿಸಲ್ಲ, ದುರದೃಷ್ಟಕರ ಬೆಳವಣಿಗೆ 

ಇತ್ತ ಯತ್ನಾಳ ಉಚ್ಛಾಟನೆ ಘೋಷಣೆಯಾಗುತ್ತಿದ್ದಂತೆಯೇ ಎಕ್ಸ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಒಂದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಂಚಿಕೊಂಡಿದ್ದಾರೆ. 'ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮಕ್ಕೆ ಸಂಭ್ರಮಿಸುವುದಿಲ್ಲ‌. ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ' ಎಂದು ವಿಜಯೇಂದ್ರ ಹೇಳಿಕೊಂಡಿದ್ದಾರೆ.

'ಭಾರತೀಯ ಜನತಾ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ ಯತ್ನಾಳ್ ಅವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ' ಎಂದಿದ್ದಾರೆ. 

ಪಕ್ಷದ ಬೆಳವಣಿಗೆಯಲ್ಲಿ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ ಎಂದಿದ್ದಾರೆ.

ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ. ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ. ಸಮರ್ಪಣೆ- ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡೆದಿದ್ದೇನೆ' ಎಂದು ಹೇಳಿಕೊಂಡಿದ್ದಾರೆ.

In a significant turn of events within the Bharatiya Janata Party (BJP), Rebel Leader Yatnal has officially exited the party, prompting celebrations among BJP members in Vijayapura. The announcement has sparked mixed reactions, particularly from senior party leader BY Vijayendra, who expressed his concerns about the situation