ಬ್ರೇಕಿಂಗ್ ನ್ಯೂಸ್
27-03-25 01:00 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 27: "ಕೆಲ ರಾಜಕೀಯ ಪಟ್ಟಭದ್ರರು, ಹೊಂದಾಣಿಕೆ ರಾಜಕಾರಣದ ಹರಿಕಾರರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲಬುರಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ" ಎಂದು ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ X ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, "ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ. ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನಂತವರ ಉಚ್ಚಾಟನೆ ಮಾಡುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ" ಎಂದು ಅಸಮಾಧಾನ ಹೊರಹಾಕಿದ್ದಾರೆ.
"ಕಲ್ಯಾಣ ಕರ್ನಾಟಕದಲ್ಲಿ ಸದೃಢವಾಗಿದ್ದ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು ಯಾರ 'ಅಡ್ಜಸ್ಟ್ಮೆಂಟ್ ರಾಜಕಾರಣದಿಂದ' ಎಂದು ಪಕ್ಷದ ಪ್ರಮುಖರು ವಿಶ್ಲೇಷಿಸಲಿ" ಎಂದು ಟಾಂಗ್ ಕೊಟ್ಟಿದ್ದಾರೆ.
"ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ. ವಿ.ಎಸ್. ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು. ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾದರು".
"ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದು ಪಕ್ಷ ಮರೆಯಲಾಗದ ಮಾಣಿಕ್ಯ ಡಾ.ವಿ.ಎಸ್.ಆಚಾರ್ಯರು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ" ಎಂದು ಹೇಳಿದ್ದಾರೆ.
"ಹಿಂದುತ್ವವಾದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು, ಸ್ವಯಂಘೋಷಿತ 'ಪೂಜ್ಯ' ರಿಂದಲ್ಲ" ಎಂದು ಯತ್ನಾಳ್ ಹರಿಹಾಯ್ದಿದ್ದಾರೆ.
"ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ. ವಾಲ್ಮೀಕಿ ಹಗರಣ, ದಲಿತರಿಗೆ SCP/TSP ಅನುದಾನದ ದುರ್ಬಳಕೆಯನ್ನು ಖಂಡಿಸಿದ್ದು, ಹೋರಾಟ ರೂಪಿಸಿದ್ದು, ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆ.ಪಿ.ಸಿ ಅಧ್ಯಕ್ಷರಾದ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು".
"ಪ್ರತಿ ಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದು ನಾವೇ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದು ನಾವೇ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ".
"ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳನ್ನು ಸೂಚಿಸಿದ್ದಕ್ಕೆ ನಮ್ಮ ನಿಲುವು ಕೆಲವರಿಗೆ 'ಅಪಥ್ಯ' ವಾಗಿದೆ ಎಂದು ಹೇಳಿದ್ದಾರೆ.
ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ" ಎಂದು ಕಿಡಿಕಾರಿದ್ದಾರೆ.
"Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ" ಎಂದಿದ್ದಾರೆ ಶಾಸಕ ಯತ್ನಾಳ್.
ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ.
— Basanagouda R Patil (Yatnal) (@BasanagoudaBJP) March 27, 2025
ಕಾರ್ಯಕರ್ತರ ಪಕ್ಷ ಎಂದು…
A day after being expelled from the BJP for six years, rebel Karnataka MLA Basanagouda Patil Yatnal strongly criticised the party leadership, claiming he was punished for speaking out against "dynasty politics" and corruption.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm