ಬ್ರೇಕಿಂಗ್ ನ್ಯೂಸ್
31-03-25 12:24 pm HK News Desk ಕರ್ನಾಟಕ
ಬೆಳಗಾವಿ, ಮಾ.31 : ಯತ್ನಾಳ್ ನಾಲಗೆ ಮತ್ತು ತಲೆಗೆ ಕನೆಕ್ಷನ್ ತಪ್ಪಿಹೋಗಿದೆ. ನಾಲಗೆ ಹರಿಯಬಿಟ್ಟಿದಕ್ಕೆ ಬಿಜೆಪಿಯಲ್ಲಿ ಯತ್ನಾಳರನ್ನ ಉಚ್ಛಾಟನೆ ಮಾಡಿದ್ದಾರೆ. ನಮ್ಮ ಸಮಾಜದವರು ಎಂದು ನಾವು ನಮ್ಮ ಚೌಕಟ್ಟಿನಲ್ಲಿ ಅವರಿಗೆ ಗೌರವ ಕೊಡುತ್ತೇವೆ. ಆದರೆ, ಅವರು ಮಾತನಾಡೋ ರೀತಿ ನೋಡಿದರೆ ನಾಲಿಗೆ, ತಲೆಗೆ ಕನೆಕ್ಷನ್ ತಪ್ಪಿದೆ ಅನಿಸುತ್ತೆ ಎಂದು ಬಸವನಗೌಡ ಯತ್ನಾಳ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರು ನಮ್ಮ (ಪಂಚಮಸಾಲಿ) ಸಮಾಜದ ಹಿರಿಯರು ಎಂದು ಚೌಕಟ್ಟಿನಲ್ಲಿ ಗೌರವ ನೀಡುತ್ತಿದ್ದೆವು. ಅವರು ನಾಲಗೆ ಹರಿಯ ಬಿಡುವುದರಿಂದ ಬಿಜೆಪಿ ಉಚ್ಚಾಟಿಸಿದೆ. ಅವರ ಮಾತಿನ ರೀತಿ ಗಮನಿಸಿದರೆ ನಾಲಗೆ ಮತ್ತು ತಲೆಗೆ ಕನೆಕ್ಷನ್ ತಪ್ಪಿದೆ. ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಶೇ.80ರಷ್ಟು ಪಂಚಮಸಾಲಿಗರು ಬಿಜೆಪಿಯಲ್ಲಿದ್ದಾರೆ ಎಂದಿದ್ದು ನನ್ನ ಮನಸ್ಸಿಗೆ ಬಹಳಷ್ಟು ನೋವು ತಂದಿದೆ. ಪಂಚಮಸಾಲಿ ಹೋರಾಟ ಪಕ್ಷಾತೀತ, ನಾವೆಲ್ಲರೂ ಪಾಲ್ಗೊಂಡಿದ್ದೆವು. ಮೀಸಲು ಕ್ಷೇತ್ರಗಳು ಸೇರಿ ಇನ್ನುಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲು ಲಿಂಗಾಯತ ಪಂಚಮಸಾಲಿಗರು ಕಾರಣ ಎಂದು ಕಿಡಿಕಾರಿದರು.
ನೀವು ಕೂಡಲಸಂಗಮ ಶ್ರೀಗಳ ಪ್ರತಿಭಟನೆಗೆ ಬೆಂಬಲಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಕಾಂಗ್ರೆಸ್ ಪಕ್ಷ, ಅವರು ಬಿಜೆಪಿಯವರು. ಸಮಾಜ ಮತ್ತು ಪಕ್ಷ ಬೇರೆ ಬೇರೆ. ಹಾಗಾಗಿ, ಅವರ ಪ್ರತಿಭಟನೆಗೆ ನಾವು ಬೆಂಬಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.
ಸರ್ಕಾರಕ್ಕೆ ಸ್ವಾಮೀಜಿ ಮತ್ತು ಮಠಮಾನ್ಯರು ಮಾರ್ಗದರ್ಶನ ಕೊಡಬೇಕು. ಎಲ್ಲಾದರೂ, ಏನಾದರೂ ತಪ್ಪಿದ್ದರೆ ಸಲಹೆ ನೀಡಬೇಕು. ಅದು ಇತಿಮಿತಿಯಲ್ಲಿ ಇರಬೇಕು. ಅದು ಅತೀ ಆಗಬಾರದು ಎಂದು ಅಸಮಾಧಾನ ಹೊರಹಾಕಿದರು.
ಗೃಹಲಕ್ಷ್ಮಿ ಯೋಜನೆ ಕುರಿತು ಮಾತನಾಡಿ, ಜನವರಿ ತಿಂಗಳ ಕಂತಿನ ಹಣವನ್ನು ಖಜಾನೆಗೆ ಕಳಿಸಿದ್ದೇವೆ. ಇದು ಯುಗಾದಿ ಮತ್ತು ಈದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಖುಷಿಯ ವಿಚಾರ. ಇನ್ನು ಫೆಬ್ರವರಿ ತಿಂಗಳ ಹಣವನ್ನು ಶೀಘ್ರವೇ ಕೊಡುತ್ತೇವೆ ಎಂದು ಭರವಸೆ ನೀಡಿದರು.
Yatnal Disconnect from BJP, Tensions Rise in Panchamasaligarh as Lakshmi Hebbalkar Ignites Controversy. In a dramatic turn of events, political tensions have escalated in Panchamasaligarh following remarks made by Lakshmi Hebbalkar regarding the controversial statements of local leader Yatnal. During a recent public address, Hebbalkar claimed that Yatnal has "lost the connection of his head," implying a disconnect between his thoughts and actions.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am