ಬ್ರೇಕಿಂಗ್ ನ್ಯೂಸ್
01-04-25 03:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.1 : ಜನತೆಗೆ ಬೆಲೆ ಏರಿಕೆ ಬರೆ ಹಾಕಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಏ.2ರಿಂದ ಜನಾಕ್ರೋಶ ಯಾತ್ರೆ ನಡೆಸಲಾಗುತ್ತಿದ್ದು, ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಏ.2ರಂದು ಫ್ರೀಡಂಪಾರ್ಕ್ನಲ್ಲಿ ಬೆಲೆ ಏರಿಕೆ ವಿರುದ್ಧ ಬೆಳಗ್ಗೆಯಿಂದ ರಾತ್ರಿ ವರೆಗೂ ಧರಣಿ ನಡೆಸಲಾಗುವುದು. ಅಂದು ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ರಾಜ್ಯದ ಎಲ್ಲ ಪದಾಧಿಕಾರಿಗಳು ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಎ.4ರಂದು ಎಲ್ಲ ಕಡೆಯ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ಏ.5ರಂದು ಎಲ್ಲ ಮಂಡಲಗಳಲ್ಲಿ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡಲಿದ್ದೇವೆ. ಪಕ್ಷದ ಎಲ್ಲ ಮುಖಂಡರು ಕುಳಿತು ಅನೇಕ ವಿಚಾರಗಳನ್ನು ಚರ್ಚಿಸಿದ್ದೇವೆ. ವಿಶೇಷವಾಗಿ ರಾಜ್ಯ ಸರ್ಕಾರವು ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿ ನೀಡಿದೆ. ನೀರಿನ ದರ, ಪೆಟ್ರೋಲ್ ದರ ಹೆಚ್ಚಳ ಮಾಡಲಾಗಿದೆ. ಹಾಲಿನ ದರವನ್ನು ಮೂರನೇ ಬಾರಿಗೆ ಏರಿಕೆ ಮಾಡಲಾಗಿದೆ. ವಿದ್ಯುತ್ ದರವನ್ನೂ ಹೆಚ್ಚಿಸಲಾಗಿದೆ. ಬೆಲೆ ಏರಿಕೆ ಜನರಿಗೆ ಯುಗಾದಿ ಕೊಡುಗೆಯಂತಿದೆ ಎಂದು ವ್ಯಂಗ್ಯವಾಡಿದರು.
ಬೆಲೆ ಏರಿಕೆ ಮಾಡಿದ ಸರ್ಕಾರದ ವಿರುದ್ಧ ಜನಾಂದೋಲನ ಮಾಡಲಿದ್ದೇವೆ. ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರದ ವಿರುದ್ಧ ಹೋರಾಟ ಮಾಡಲು ತೀರ್ಮಾನಿಸಲಾಗಿದೆ. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವು ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಿದ್ದು, ಇದು ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆಯಂತಿದೆ. ಹಿಂದೂಗಳಿಗೆ ಮಾಡಿದ ಈ ಅವಮಾನದ ವಿರುದ್ಧ ಜನಜಾಗೃತಿ ಮೂಡಿಸುತ್ತೇವೆ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು.
BJP State president B.Y. Vijayendra on Saturday announced an overnight sit-in protest against the Congress government’s price hikes, at Freedom Park in Bengaluru on April 2.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm