ಬ್ರೇಕಿಂಗ್ ನ್ಯೂಸ್
05-04-25 02:47 pm HK News Satff ಕರ್ನಾಟಕ
ಬೆಂಗಳೂರು, ಎ.5: ಬಿಜೆಪಿಯಲ್ಲಿ ರೆಬಲ್ ಆಗಿ ಪಕ್ಷದಿಂದಲೇ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ಬಹುತೇಕ ಒಂಟಿಯಾಗಿದ್ದಾರೆ. ವಿಜಯದಶಮಿ ವೇಳೆಗೆ ಹೊಸ ಪಕ್ಷ ಕಟ್ಟುತ್ತೇನೆ ಎಂದು ಹೇಳಿದ್ದರೂ, ಅವರ ಜೊತೆಗಿದ್ದವರೇ ಹೊಸ ಪಕ್ಷ ಸೇರಿಕೊಳ್ಳುವ ಸಾಧ್ಯತೆ ಇಲ್ಲ. ಜೊತೆಗಿದ್ದವರೇ ಕೈಕೊಡುವ ಸೂಚನೆ ಲಭಿಸಿದೆ.
ಯತ್ನಾಳ್ ಜೊತೆಗಿದ್ದ ಶಾಸಕರು, ಆಪ್ತರು ಈಗ ನಿಧಾನವಾಗಿ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾತನಾಡಿರುವ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ, ಯತ್ನಾಳ್ ಉಚ್ಚಾಟನೆ ಬಗ್ಗೆಯೂ ಮಾತನಾಡಿದ್ದು, ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ, ವರಿಷ್ಠರ ನಿರ್ಣಯಕ್ಕೆ ತಾವು ಬದ್ಧರಾಗಿರುತ್ತೇವೆ. ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ಅವರೊಟ್ಟಿಗೆ ಹೋಗುವ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಕ್ಫ್ ಹೋರಾಟದಲ್ಲಿ ಯತ್ನಾಳ್ ಪ್ರಮುಖ ಪಾತ್ರ ವಹಿಸಿದ್ದು ನಿಜ, ಆದರೆ ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ. ವರಿಷ್ಠರ ನಿರ್ಣಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಯತ್ನಾಳ್ ಜೊತೆಗಿದ್ದ ಶಾಸಕರು ಕ್ರಮೇಣ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಮಾತನಾಡಿದ್ದ ರಮೇಶ್ ಜಾರಕಿಹೊಳಿ, ಪಕ್ಷಕ್ಕೆ ಮುಜುಗರ ಉಂಟಾಗುವಂತಹ ಹೇಳಿಕೆಗಳನ್ನು ನೀಡದಂತೆ ಯತ್ನಾಳ್ ಅವರಿಗೆ ತಿಳಿಹೇಳುವುದಾಗಿ ಹೇಳಿದ್ದರು.
Basanagouda Patil Yatnal, a rebel MLA expelled from the BJP, is now largely alone. Although he had stated that he would form a new party by Vijaya Dashami, those who were once with him indicate that they are unlikely to join this new venture. Signals have emerged that his former associates are beginning to distance themselves from him.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm