ಬ್ರೇಕಿಂಗ್ ನ್ಯೂಸ್
05-04-25 08:12 pm HK News Desk ಕರ್ನಾಟಕ
ಕುಶಾಲನಗರ, ಎ.5 : ಕಾಂಗ್ರೆಸಿನ ಇಬ್ಬರು ಶಾಸಕರ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಡಿವೈಎಸ್ಪಿ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇಬ್ಬರು ಶಾಸಕರ ಮೇಲೆ ಎಫ್ಐಆರ್ ದಾಖಲಿಸಬೇಕೆಂದು ಆಗ್ರಹಿಸಿ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕುಶಾಲನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಗಿದ್ದು ಈ ಕೂಡಲೇ ಕಾಂಗ್ರೆಸ್ ಶಾಸಕರ ಮೇಲೆ ಎಫ್ಐಆರ್ ದಾಖಲಿಸಬೇಕೆಂದು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅರ್ಧ ಗಂಟೆ ಕಾಲ ರಸ್ತೆ ಬಂದ್ ಮಾಡಿದ ಬಳಿಕ ಪ್ರತಿಭಟನೆಗೆ ನೇತೃತ್ವ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಂಸದ ಪ್ರತಾಪಸಿಂಹ, ಮೈಸೂರು ಸಂಸದ ಯದುವೀರ್ ಸೇರಿದಂತೆ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ, ಕಾರ್ಯಕರ್ತರು ಪೊಲೀಸರ ಕ್ರಮಕ್ಕೆ ಅಡ್ಡಿಪಡಿಸಿದ್ದು ತೀವ್ರ ಜಟಾಪಟಿ ನಡೆದಿದೆ. 500 ಕ್ಕೂ ಹೆಚ್ಚು ಪೊಲೀಸರು ಸೇರಿದ್ದು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಇದಕ್ಕು ಮುನ್ನ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸಿನ ಇಬ್ಬರು ಶಾಸಕರು ಕಿರುಕುಳ ನೀಡಿದ್ದು ಇದರಿಂದ ನೊಂದಿದ್ದ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣ ಯಾರೆಂದು ಅವರು ಸ್ಪಷ್ಟವಾಗಿ ಬರೆದಿದ್ದಾರೆ. ಆದರೆ ನಿನ್ನೆ ಬೆಂಗಳೂರಿನ ಪೊಲೀಸರು ಎಫ್ಐಆರ್ ನಲ್ಲಿ ಶಾಸಕರ ಹೆಸರು ಸೇರಿಸಿಲ್ಲ. ಇದು ಅಕ್ಷಮ್ಯ ಅಪರಾಧ. ಪೊಲೀಸರ ಮೇಲೆ ಎಷ್ಟು ಒತ್ತಡ ಇದೆ ಎಂದು ಇದರಿಂದ ಗೊತ್ತಾಗುತ್ತದೆ ಎಂದರು.
ಕುಶಾಲನಗರದಲ್ಲಿ ವಿನಯ್ ಕುಟುಂಬ ಸದಸ್ಯರನ್ನ ವಿಜಯೇಂದ್ರ ಭೇಟಿಯಾಗಿ ಸಾಂತ್ವನ ಹೇಳಿದರು. ಪ್ರತಿಭಟನೆಗೂ ಮುನ್ನ ಮಾಜಿ ಸಂಸದ ಪ್ರತಾಪಸಿಂಹ ತನ್ನ ಫೇಸ್ಬುಕ್ ಖಾತೆಯಲ್ಲಿ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಸೋದರ ಜೀವನ್ ಪೊಲೀಸರಿಗೆ ನೀಡಿದ್ದ ದೂರಿನ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಕೊಡಗಿನ ಕಾಂಗ್ರೆಸ್ ಶಾಸಕರಾದ ಎ.ಎಸ್ ಪೊನ್ನಣ್ಣ ಮತ್ತು ಮಂಥರ್ ಗೌಡ ಹೆಸರು ಇರುವುದನ್ನು ರೌಂಡ್ ಮಾಡಿ ತೋರಿಸಿದ್ದಲ್ಲದೆ, ಹೆಸರು ಉಲ್ಲೇಖ ಆಗಿದ್ದರೂ ಪೊಲೀಸರು ಯಾಕೆ ಎಫ್ಐಆರ್ ನಲ್ಲಿ ಸೇರಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
The BJP demanded the naming of two Congress MLAs in the FIR in connection with the alleged suicide, even as CM Siddaramaiah accused them of doing politics over death
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm