ಬ್ರೇಕಿಂಗ್ ನ್ಯೂಸ್
05-04-25 09:43 pm Bangalore Correspondent ಕರ್ನಾಟಕ
ಬೆಂಗಳೂರು, ಏ 05: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ, ಆಕ್ರಮಣಕಾರರಾದ ಮಹಮ್ಮದ್ ಘೋರಿ, ಮಹಮ್ಮದ್ ಘಜ್ನಿ ಮತ್ತು ಮಾಲಿಕ್ ಕಫೂರ್ ರಾಜ್ಯವನ್ನು ಆಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, "ನಮ್ಮ ರಾಜ್ಯವು ವಿನಾಶದ ಅಂಚಿನಲ್ಲಿದೆ. ಈ ಸರ್ಕಾರದ ಅಕ್ರಮಗಳು, ಲೂಟಿ ಮತ್ತು ದರೋಡೆ ರಾಜ್ಯವನ್ನು ಈ ಹಂತಕ್ಕೆ ತಂದಿದೆ. ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಮತ್ತು ಮಾಲಿಕ್ ಕಫೂರ್ ರಾಜ್ಯವನ್ನು ಆಳುತ್ತಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯಲ್ಲಿ ಕುಳಿತಿದ್ದಾರೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಹೆಸರನ್ನ
ನೇರವಾಗಿ ಪ್ರಸ್ತಾಪಿಸದೆ ವಾಗ್ದಾಳಿ ನಡೆಸಿದರು.
ನಾನು ಈ ಸರ್ಕಾರಕ್ಕೆ ಸವಾಲು ಹಾಕುತ್ತೇನೆ. ನಲವತ್ತು ವರ್ಷಗಳ ಹಿಂದೆ, ನಾನು 46 ಎಕರೆ ಭೂಮಿಯನ್ನು ಖರೀದಿಸಿದೆ. ನಾನು ರೈತನಂತೆ ಅದನ್ನು ಪ್ರಾಮಾಣಿಕವಾಗಿ ಬೆಳೆಸಿದ್ದೇನೆ. ನಾಲ್ಕು ದಶಕಗಳಲ್ಲಿ, ಇಂತಹ ದ್ವೇಷಪೂರಿತ ರಾಜಕೀಯ ಮತ್ತು ಅಧಿಕಾರಿ ದುರುಪಯೋಗ ಎಂದಿಗೂ ನೋಡಿಲ್ಲ ಎಂದರು.
ಸರ್ಕಾರ ಚಾರಿತ್ರ್ಯ ಹರಣಕ್ಕೆ ಇಳಿಯಬಾರದು. ಅತಿಕ್ರಮಣ ನಡೆದರೆ ಕ್ರಮ ಕೈಗೊಳ್ಳಿ. ಆದರೆ ನನ್ನ ಹೆಸರಿಗೆ ಕಳಂಕ ತರಬೇಡಿ. ನಾನು ತಲೆ ಬಾಗುವುದಿಲ್ಲ ಎಂದು ಹೇಳಿದರು.
ರೈತರಿಂದ ಮಾರಾಟ ಪತ್ರಗಳನ್ನು ಸಂಗ್ರಹಿಸಲು ಪೊಲೀಸರನ್ನು ಕೇತಗಾನಹಳ್ಳಿಗೆ ಕಳುಹಿಸಲಾಗುತ್ತಿದೆ ಎಂದು ಆರೋಪಿಸಿದ ಮಾಜಿ ಸಿಎಂ, "ರಾಜ್ಯದ ಇತಿಹಾಸದಲ್ಲಿ ಎಂದಾದರೂ ಇಂತಹ ಘಟನೆ ನಡೆದಿದೆಯೇ?" ಎಂದು ಪ್ರಶ್ನಿಸಿದರು.
ನಾನು ಕನಕಪುರದಲ್ಲಿ ಮಾತ್ರ ಬಂಡೆ ಒಡೆದಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಳ್ಳಾರಿಗೂ ನನಗೂ ಏನು ಸಂಬಂಧ ಎನ್ನುತ್ತಿದ್ದಾರೆ. ನನ್ನನ್ನು ಕೆಣಕಬೇಡಿ. ನನ್ನ ಬಳಿ ಟನ್ ಗಟ್ಟಲೆ ದಾಖಲೆಗಳು ಇವೆ. ಗಾಳಿಯಲ್ಲಿ ಗುಂಡು ಹೊಡೆಯುತ್ತಿಲ್ಲ ನಾನು, ಇರುವ ಸತ್ಯ ಹೇಳುತ್ತಿದ್ದೇನೆ ಎಂದು ಡಿಕೆಗೆ ಎಚ್ಚರಿಕೆ ನೀಡಿದರು.
ಈ ಸರಕಾರಕ್ಕೆ ನಾನು ನೇರವಾಗಿ ಹೇಳುತ್ತಿದ್ದೇನೆ. ನನ್ನ ಮೇಲಷ್ಟೇ ರಾಜಕೀಯ ಹಗೆತನ ಸಾಧಿಸುತ್ತಿರುವುದು ಅಷ್ಟೇ ಅಲ್ಲ, ರಾಜ್ಯದ ಜನರನ್ನು ಕಿತ್ತು ತಿನ್ನುತ್ತಿರುವ ಈ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡುತ್ತಿದ್ದೇನೆ. ಸವಾಲು ಹಾಕಲು ಇಲ್ಲಿಗೆ ಬಂದಿದ್ದೇನೆ. ಇಂದಿನಿಂದ ಈ ಜನ ವಿರೋಧಿ ಸರ್ಕಾರದ ವಿರುದ್ಧ ನೇರ ಯುದ್ದ ಆರಂಭ ಮಾಡುತ್ತಿದ್ದೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಅವರು ಗುಡುಗಿದರು.
2003- 2004ರಲ್ಲಿ ಅವರು ಎಸ್.ಎಂ. ಕೃಷ್ಣ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದರು. ಅದಿರಿನ ಮಣ್ಣಿನ ನೆಪದಲ್ಲಿ ಸಾವಿರಾರು ಟನ್ ಕಬ್ಬಿಣದ ಅದಿರನ್ನು ಬಳ್ಳಾರಿಯಲ್ಲಿ ಕದ್ದು ಸಾಗಿಸಿದರು. ಆ ಅದಿರು ಎಲ್ಲಿಗೆ ಹೋಯಿತು? ಏನು ಮಾಡಿದರು. ಅವರು ಯಾರಿಗೆಲ್ಲ ಪತ್ರ ಬರೆದು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ನನ್ನ ಬಳಿ ದಾಖಲೆಗಳು ಇವೆ ಎಂದು ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
Union Minister for Heavy Industries and Steel, HD Kumaraswamy, on Saturday, April 5, slammed the Karnataka government, alleging that people like invaders Muhammad Ghori, Muhammad Ghazni, and Malik Kafur are effectively ruling over the state.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm