ಬ್ರೇಕಿಂಗ್ ನ್ಯೂಸ್
09-04-25 04:05 pm HK News Desk ಕರ್ನಾಟಕ
ಬೆಂಗಳೂರು, ಎ.9 : ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ ಎಪ್ರಿಲ್ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಘೋಷಣೆ ಮಾಡಿದರು.
ತುಮಕೂರಿನಲ್ಲಿ ರೈಲ್ವೇ ಗೇಟ್ ಮೇಲ್ಸೇತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ರೈಲ್ವೇ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಇದೇ 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತಹ ಕೆಲಸ ಆಗಲಿದೆ ಎಂದು ಅವರು ಹೇಳಿದರು.
ಬಟವಾಡಿ ಗೇಟ್ನಲ್ಲಿ ಇವತ್ತು 27 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭಿಸಲಾಗಿದೆ. ಬಡ್ಡಿಹಳ್ಳಿ ಬಳಿ 43 ಕೋಟಿ ರೂ. ವೆಚ್ಚದಲ್ಲಿ, ಮೈದಾಳದ ಬಳಿ 51 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ಮಾಡಲಾಗುತ್ತಿದೆ. 650 ಕೋಟಿ ರೂ. ವೆಚ್ಚದ 22 ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿ ಪ್ರಾರಂಭ ಮಾಡಲಾಗುತ್ತಿದೆ. 23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೇ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಸೋಮಣ್ಣ ಹೇಳಿದರು.
ಕರ್ನಾಟಕದಲ್ಲಿ ಇದ್ದಂತಹ 33 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳನ್ನ ನಾವು (ಕೇಂದ್ರ ಸರ್ಕಾರ) ಕೈಗೆತ್ತಿಕೊಂಡಿದ್ದೇವೆ. ಇದೇ 11 ರಂದು ಹಾವೇರಿಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲಿಗೆ ಚಾಲನೆ ಕೊಡುತ್ತಿದ್ದೇವೆ. ಮುಂದಿನ 15 ದಿನಗಳಲ್ಲಿ ಗದಗ, ವಾಡಿ, ಕುಷ್ಠಗಿ, ಯಲಬುರ್ಗಾ ರೈಲು ಸಂಚಾರ ಲೋಕಾರ್ಪಣೆ ಮಾಡುತ್ತೇವೆ. ಅನೇಕ ರೈಲ್ವೆ ಯೋಜನೆಗಳನ್ನು ಲೋಕಾರ್ಪಣೆ ಮಾಡುವಂತಹ ಕೆಲಸ ಈಗಾಗಲೇ ಆಗಿದೆ ಎಂದು ಸೋಮಣ್ಣ ಹೇಳಿದರು.
New Train Service Launched, Bangalore to Kukke Subrahmanya, Vande Bharat Train from Haveri Announced by Minister Somanna.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm