ಬ್ರೇಕಿಂಗ್ ನ್ಯೂಸ್
09-04-25 06:21 pm Bangalore Correspondent ಕರ್ನಾಟಕ
ಬೆಂಗಳೂರು, ಎ.9 : ಈಗಾಗಲೇ ಮುಡಾ ಹಗರಣದಲ್ಲಿ ಸಿಲುಕಿ ಇಡಿ ತನಿಖೆ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್ಬ್ಯಾಕ್ ಪಡೆದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪ್ರಾಸಿಕ್ಯೂಷನ್ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
2015ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಸಿದ್ದರಾಮಯ್ಯ ಅವರು 8 ಗಣಿ ಗುತ್ತಿಗೆಯನ್ನು ಹರಾಜು ಹಾಕುವ ಬದಲಿಗೆ ನವೀಕರಣ ಮಾಡಿದ್ದರು. ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪೆನಿಗಳ ಲೈಸೆನ್ಸ್ ನವೀಕರಣ ಮಾಡಲಾಗಿತ್ತು. ಸಾಕಷ್ಟು ವರ್ಷಗಳಿಂದ ಬಾಕಿ ಇದ್ದ ಲೈಸೆನ್ಸ್ ನವೀಕರಣ ಮಾಡಿದ್ದು ಇದಕ್ಕಾಗಿ ಕಿಕ್ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸುಮಾರು 500 ಕೋಟಿ ರೂ. ಕಿಕ್ಬ್ಯಾಕ್ ಪಡೆದಿದ್ದಾರೆ ಎಂದು ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನಿರ್ಧಾರದಿಂದ ಸರ್ಕಾರಕ್ಕೆ 5000 ಕೋಟಿ ನಷ್ಟ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಸಿದ್ದರಾಮಯ್ಯ ಅವರನ್ನು ಪ್ರಾಸಿಕ್ಯೂಷನ್ ಒಳಪಡಿಸಲು ಅನುಮತಿ ನೀಡಿ ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಸೆಕ್ಷನ್ 7, 9, 11, 12 ಮತ್ತು 15 ಅಡಿ ಪ್ರಾಸಿಕ್ಯೂಚನ್ಗೆ ಅನುಮತಿ ಕೊಡಿ ಎಂದು ಮನವಿ ಮಾಡಲಾಗಿದೆ.
ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 59, 61, 42, 201, 227, 228, 229, 239, 314, 316 (5) 318 (1), 319, 322, 324 (2), 324 (3), 335, 336, 338, 340 ರಡಿ ಕೇಸು ದಾಖಲಿಸಿ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ರಾಮಮೂರ್ತಿ ಗೌಡ ಮನವಿ ಮಾಡಿದ್ದಾರೆ.
ದೂರುದಾರರ ಜೊತೆ ರಾಜ್ಯಪಾಲರು ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಆ ನಂತರ ದೂರಿನ ಮೇಲೆ ಸಹಿ ಮಾಡಿ ಕಾನೂನು ವಿಭಾಗದ ಅಭಿಪ್ರಾಯಕ್ಕೆ ಕಳುಹಿಸಿದ್ದಾರೆ. ಅಲ್ಲದೆ, ಸಾಲಿಸಿಟರ್ ಜನರಲ್ ಬಳಿ ಚರ್ಚೆ ನಡೆಸಿ ತೀರ್ಮಾನ ಮಾಡುವುದಾಗಿ ರಾಜ್ಯಪಾಲರು ದೂರುದಾರರಿಗೆ ಭರವಸೆ ನೀಡಿದ್ದಾರೆ. ದಾಖಲೆ ಪರಿಶೀಲಿಸಿ ವರದಿ ನೀಡುವಂತೆ ಸಾಲಿಸಿಟರ್ ಜನರಲ್ಗೆ ತಿಳಿಸಿದ್ದಾರೆ.
Karnataka Chief Minister Siddaramaiah is facing fresh controversy after social activist H Ramamurthy Gowda submitted a formal request to Governor Thaawarchand Gehlot, seeking sanction to prosecute the Chief Minister under the Prevention of Corruption Act, 1988.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm