ಬ್ರೇಕಿಂಗ್ ನ್ಯೂಸ್
09-04-25 09:21 pm HK News Desk ಕರ್ನಾಟಕ
ವಿಜಯಪುರ, ಏ 09: ಜಿಲ್ಲೆಯ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬಿಎಸ್ಎಫ್ ಯೋಧ ಮತ್ತು ಅಂಬ್ಯುಲೆನ್ಸ್ ಚಾಲಕ ಸಾವನ್ನಪ್ಪಿ, ಇತರರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.
ರಸ್ತೆ ದಾಟುವ ವೇಳೆ ಬೈಕ್ ಗೆ ಡಿಕ್ಕಿ ಹೊಡೆದ ಲಾರಿ ಬೈಕ್ಅನ್ನ ಎಳೆದುಕೊಂಡು ಮುಂದಕ್ಕೆ ಹೋಗಿದೆ. ಅಲ್ಲದೆ, ಎದುರಿಗೆ ಬರುತ್ತಿದ್ದ ಅಂಬ್ಯುಲೆನ್ಸ್ ಗೂ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಆಂಬ್ಯುಲೆನ್ಸ್ ಚಾಲಕ ಮತ್ತು ಬೈಕ್ನಲ್ಲಿದ್ದ ಬಿಎಸ್ಎಫ್ ಯೋಧ ಸಾವನ್ನಪ್ಪಿದ್ದಾರೆ. ಮುದ್ದೇಬಿಹಾಳ ತಾಲೂಕಿನ ಕಾಳಗಿ ಗ್ರಾಮದ ಬಿಎಸ್ಎಫ್ ಯೋಧ ಮೌನೇಶ ರಾಠೋಡ್ (35) ಮೃತ ಯೋಧ ಎಂದು ಗುರುತಿಸಲಾಗಿದೆ.





ಲಾರಿ ರಭಸವಾಗಿ ಎದುರಿನಿಂದ ಗುದ್ದಿದ ಪರಿಣಾಮ ಅಂಬ್ಯುಲೆನ್ಸ್ ಸಹ ನಜ್ಜುಗುಜ್ಜಾಗಿದೆ. ಆಂಬ್ಯುಲೆನ್ಸ್ನಲ್ಲಿ ಸಿಲುಕಿದ್ದ ಚಾಲಕ ಸಹಾಯಕನನ್ನು ಕ್ರೇನ್ ಸಹಾಯದಿಂದ ಹೊರ ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂಬ್ಯುಲೆನ್ಸ್ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ರಿತೇಶ್ ಪ್ರಸಾದ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಹೀಗಾಗಿ ಅಪಘಾತಕ್ಕೀಡಾದ ಲಾರಿ, ಆಂಬ್ಯುಲೆನ್ಸ್ ಹಾಗೂ ಬೈಕ್ಅನ್ನು ಸ್ಥಳದಿಂದ ತೆರವು ಮಾಡಿ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಘಟನೆಯಲ್ಲಿ ಆಂಬ್ಯುಲೆನ್ಸ್ ಸಹಾಯಕ ಮತ್ತು ಲಾರಿ ಕ್ಲೀನರ್ಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು. ನಿಡಗುಂದಿ ಪೊಲೀಸರು ಅಪಘಾತದ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic series of road accidents near Nidagundi town on Wednesday morning, a Border Security Force (BSF) jawan and an ambulance driver lost their lives after a lorry rammed into multiple vehicles on National Highway 50. The deceased have been identified as Maunesh Rathod (35), a BSF jawan from Kalgi village in Muddebihal taluk, and Ritesh (35), an ambulance driver originally from Kerala.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am