ಬ್ರೇಕಿಂಗ್ ನ್ಯೂಸ್
10-04-25 04:40 pm Bangalore Correspondent ಕರ್ನಾಟಕ
ಬೆಂಗಳೂರು, ಎ.10 : ಕಾಂಗ್ರೆಸ್- ಬಿಜೆಪಿ ಹೊಂದಾಣಿಕೆ ರಾಜಕಾರಣದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರಿಗೆ ಕಾಂಗ್ರೆಸ್ ಸರಕಾರ ಬೆಂಗಳೂರಿನಲ್ಲಿ ಜಿ ಕೆಟಗರಿ ನಿವೇಶನ ಕೊಡಲು ಮುಂದಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎನ್ನುವ ವಿಚಾರ ಚರ್ಚೆಗೀಡಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್ ಅನುಮೋದನೆಯ ಮೇರೆಗೆ ಈ ಟಿಪ್ಪಣಿಯನ್ನು ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ನಗರಾಭಿವೃದ್ಧಿ ಇಲಾಖೆ ಸಿದ್ಧತೆ ನಡೆಸಿದೆ. ಬೆಂಗಳೂರಿನ ಎಚ್ಎಸ್ ಆರ್ ಲೇಔಟ್ ನಲ್ಲಿ ಚದರ ಅಡಿಗೆ 23 ಸಾವಿರದಿಂದ 30 ಸಾವಿರ ಬೆಲೆ ಇದೆ. ಒಟ್ಟು 12 ಕೋಟಿ ಮೌಲ್ಯದ ನಿವೇಶನವನ್ನು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೆಸರಿಗೆ ಮಾಡಿಕೊಡಲು ಕಾಂಗ್ರೆಸ್ ಸರಕಾರ ಮುಂದಾಗಿದೆ. ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದ ಬಡಾವಣೆಗಳನ್ನು ರಾಜಕಾರಣಿಗಳಿಗೆ ಕಾನೂನು ಬಾಹಿರವಾಗಿ ನೀಡಲಾಗುತ್ತಿದ್ದು, ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿತ್ತು. ರಾಜಕಾರಣಿಗಳಿಗೆ ನೀಡಿರುವ ಬದಲಿ ನಿವೇಶನಗಳನ್ನು ವಾಪಸ್ ಪಡೆಯುವಂತೆ 2021ರ ಅಕ್ಟೋಬರ್ 11ರಂದು ನಿರ್ದೇಶನ ನೀಡಿತ್ತು.
ಈ ಕುರಿತು ತನಿಖೆ ನಡೆಸಿದ್ದ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ನೇತೃತ್ವದ ಸಮಿತಿ ನೀಡಿದ ವರದಿ ಆಧರಿಸಿ ಸುಪ್ರೀಂ ಕೋರ್ಟ್ ಬದಲಿ ನಿವೇಶನ ರದ್ದು ಮಾಡುವಂತೆ ಆದೇಶ ಮಾಡಿತ್ತು. ಸುಪ್ರೀಂ ಕೋರ್ಟ್ ಆದೇಶ ನಡುವೆಯೂ ಬಿಡಿಎ ಪ್ರಾಧಿಕಾರವು ರಾಜಕಾರಣಿಗಳಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದೆ. ಈ ರೀತಿ ಮಾಡುವುದು 1984ರ ನಿವೇಶನ ಹಂಚಿಕೆ ನಿಯಮದ ಸೆಕ್ಷನ್ 11 ಎ ಪ್ರಕಾರ ಕಾನೂನು ಉಲ್ಲಂಘನೆಯೆಂದು ಸಮಿತಿ ತನ್ನ ವರದಿಯಲ್ಲಿ ಹೇಳಿತ್ತು.
ವರದಿ ಹಿನ್ನೆಲೆಯಲ್ಲಿ ಮರು ಸ್ವಾಧೀನ ಪಡೆದಿರುವ ಅಥವಾ ಪೂರ್ಣ ಅಭಿವೃದ್ಧಿ ಹೊಂದಿದ ಬಡಾವಣೆಗಳನ್ನು ಸಾರ್ವಜನಿಕ ಹರಾಜಿನ ಮೂಲಕ ನಿವೇಶನಗಳನ್ನು ಹಂಚಿಕೆ ಮಾಡಬೇಕೆಂದು ಸುಪ್ರೀಂ ಕೋರ್ಟ್ 2021ರಲ್ಲಿ ನೀಡಿದ್ದ ಆದೇಶದಲ್ಲಿ ತಿಳಿಸಿತ್ತು. ನಳಿನ್ ಕುಮಾರ್ ಕಟೀಲ್ ಅವರಿಗೆ ನಿವೇಶನ ನೀಡಲು ಮುಂದಾಗಿರುವುದು ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆ ಎಂದು ಆಕ್ಷೇಪ ವ್ಯಕ್ತವಾಗಿದೆ.
ನಳಿನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ 2009ರಲ್ಲೇ ಬನಶಂಕರಿ ಆರನೇ ಹಂತದ ಬಡಾವಣೆಯಲ್ಲಿ 15-24 ಮೀಟರ್ ಅಳತೆಯ ನಿವೇಶನ ನೀಡಲಾಗಿತ್ತು. ಆದರೆ 2011ರಲ್ಲಿ ಕಟೀಲ್ ಮನವಿಯ ಮೇರೆಗೆ ಸದ್ರಿ ನಿವೇಶನ ಬದಲು ಮಾಡಿ ಎಚ್ ಎಸ್ ಆರ್ ಬಡಾವಣೆಯಲ್ಲಿ ನೀಡುವ ಬಗ್ಗೆ ಹಂಚಿಕೆ ಪತ್ರ ಮಾಡಲಾಗಿತ್ತು. ಇದಕ್ಕಾಗಿ ಹೆಚ್ಚುವರಿ ವಿಸ್ತೀರ್ಣದ ಮೌಲ್ಯ ಹಾಗೂ ಬಡ್ಡಿಯನ್ನೂ ನಳಿನ್ ಪಾವತಿ ಮಾಡಿದ್ದರು. ಆದರೆ ಜಿ ಕೆಟಗರಿ ನಿವೇಶನ ಹಂಚಿಕೆ ಸಂಬಂಧಿಸಿ ಹೈಕೋರ್ಟಿನಲ್ಲಿ ಪ್ರಕರಣ ದಾಖಲಾಗಿದ್ದರಿಂದ ಪ್ರಾಧಿಕಾರವು ನೋಂದಣಿ ಮಾಡಿಕೊಟ್ಟಿರಲಿಲ್ಲ. ಈ ಮಧ್ಯೆ 2020ರಲ್ಲಿ ಪ್ರಾಧಿಕಾರವು ಗುತ್ತಿಗೆ ಹಾಗೂ ಮಾರಾಟ ಪತ್ರವನ್ನು ನೋಂದಾಯಿಸಿ ಸ್ವಾಧೀನ ಪತ್ರ ನೀಡಿತ್ತು. ಕ್ರಯಪತ್ರ ಸಿಕ್ಕಿರದ ಕಾರಣ ಮತ್ತೆ ಕಾಂಗ್ರೆಸ್ ಸರಕಾರಕ್ಕೆ ಮನವಿ ಮಾಡಿದ್ದ ನಳಿನ್ ಕುಮಾರ್, ವಿಶೇಷ ಪ್ರಕರಣವೆಂದು ಪರಿಗಣಿಸಿ ನಿವೇಶನದ ಗುತ್ತಿಗೆ ಅವಧಿ ಸಡಿಲಿಸಿ ಶುದ್ಧ ಕ್ರಯಪತ್ರ ನೀಡುವಂತೆ ಕೇಳಿಕೊಂಡಿದ್ದರು.
ಈ ಪ್ರಸ್ತಾವನೆ ತಿರಸ್ಕರಿಸಬಹುದು ಅಥವಾ ಶುದ್ಧ ಕ್ರಯಪತ್ರ ಮಾಡಿಕೊಡಬಹುದು ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದರೂ, ಡಿಸಿಎಂ ಡಿಕೆ ಶಿವಕುಮಾರ್ ಇದಕ್ಕೆ ಅನುಮೋದನೆ ನೀಡಿ ಸಚಿವ ಸಂಪುಟಕ್ಕೆ ಕಳಿಸಿದ್ದಾರೆ. ಈ ಬಗ್ಗೆ ಕಾನೂನು ಇಲಾಖೆ ಆಕ್ಷೇಪಿಸಿದ್ದು ಪ್ರಾಧಿಕಾರದ ನಿವೇಶನ ಹಂಚಿಕೆ ನಿಯಮ ಪ್ರಕಾರ ಗುತ್ತಿಗೆ ಅವಧಿಯಲ್ಲಿ ಶುದ್ಧ ಕ್ರಯಪತ್ರ ನೋಂದಾಯಿಸಲು ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದೆ.
In a controversial move, the Karnataka government has allocated a substantial G-category land parcel valued at ₹12 crores to BJP leader Nalin Kumar Kateel in Bangalore. This decision has raised eyebrows, particularly as it reportedly contravenes a standing Supreme Court order.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm