ಬ್ರೇಕಿಂಗ್ ನ್ಯೂಸ್
14-04-25 02:06 pm Bangalore Correspondent ಕರ್ನಾಟಕ
ಬೆಂಗಳೂರು, ಎ.14 : ವಕೀಲೆ ಎಸ್. ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ವಿಶೇಷ ತನಿಖಾ ದಳದ (ಎಸ್‌ಐಟಿ) ಅಧಿಕಾರಿಗಳು ಹೈಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದು, ಸಿಐಡಿ ಡಿವೈಎಸ್‌ಪಿ ಕನಕಲಕ್ಷ್ಮಿ ವಿಚಾರಣೆ ನೆಪದಲ್ಲಿ ಮಹಿಳಾ ವಕೀಲೆಗೆ ಚಿತ್ರಹಿಂಸೆ ನೀಡಿದ್ದೇ ಆಕೆಯ ಸಾವಿಗೆ ಕಾರಣ ಎಂದು ವರದಿ ನೀಡಿದ್ದಾರೆ.
ಜೀವಾ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಬರೆದಿಟ್ಟಿದ್ದ ಪತ್ರದಲ್ಲಿ ಡಿವೈಎಸ್‌ಪಿ ಕನಕಲಕ್ಷ್ಮಿ ವಿರುದ್ಧ ಮಾಡಿದ್ದ ಆರೋಪಗಳು ಶೇ. 90ರಷ್ಟು ಸತ್ಯವಾಗಿರುವುದಾಗಿ ಎಸ್‌ಐಟಿ ಅಧಿಕಾರಿಗಳು ತನಿಖಾ ವರದಿಯಲ್ಲಿ ಬೊಟ್ಟು ಮಾಡಿದ್ದಾರೆ. ಕೋರ್ಟಿಗೆ ಸಲ್ಲಿಸಿರುವ 2,300 ಪುಟಗಳ ಆರೋಪ ಪಟ್ಟಿಯಲ್ಲಿ ಈ ಮಾಹಿತಿ ಉಲ್ಲೇಖಿಸಿದ್ದಾರೆ.
ವಿಚಾರಣೆ ನೆಪದಲ್ಲಿ ವಕೀಲೆ ಜೀವಾ ಅವರಿಗೆ ಕಿರುಕುಳ ನೀಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಪ್ರಕರಣ ಸಂಬಂಧಿಸಿ ಜೀವಾ ಅವರ ಸಹೋದರಿ ಸಂಗೀತಾ, ಡಿವೈಎಸ್ಪಿ ಕನಕಲಕ್ಷ್ಮಿ ಜೊತೆಗೆ ತಂಡದಲ್ಲಿದ್ದ ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ 80ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆ ಪಡೆಯಲಾಗಿದೆ. ಕನಕಲಕ್ಷ್ಮೀ ಅವರು ಪ್ರಕರಣದಲ್ಲಿ ದೊಡ್ಡ ಮೊತ್ತದ ಹಣಕ್ಕಾಗಿ ಬೇಡಿಕೆ ಮುಂದಿಟ್ಟು ಜೀವಾ ಮೇಲೆ ಹಲ್ಲೆ ನಡೆಸಿ, ಚಿತ್ರಹಿಂಸೆ ಕೊಟ್ಟಿದ್ದರು ಎಂದು ದೂರಲಾಗಿತ್ತು. 25 ಲಕ್ಷ ರೂ. ಲಂಚ ಕೊಡುವಂತೆ ಬೆದರಿಸಿದ್ದರು ಎಂಬುದಾಗಿ ಎಸ್‌ಐಟಿ ಅಧಿಕಾರಿಗಳು ವರದಿಯಲ್ಲಿ ತಿಳಿಸಿದ್ದಾರೆ.
ಜೀವಾ ಮೇಲೆ ಹಲ್ಲೆ ನಡೆಸಿರುವುದು ಹಾಗೂ ಚಿತ್ರಹಿಂಸೆ ನೀಡಿರುವುದಕ್ಕೆ ಸಂಬಂಧಪಟ್ಟ ವಿಡಿಯೋ ಸಾಕ್ಷ್ಯಗಳು, ನಕಲಿ ದಾಖಲೆಗಳನ್ನು ಅಧಿಕಾರಿಗಳು ಆರೋಪಪಟ್ಟಿ ಜತೆ ಕೋರ್ಟ್‌ಗೆ ಸಲ್ಲಿಸಿದ್ದಾರೆ.
ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮದಿಂದ ನೀಡಲಾಗಿದ್ದ ಸಾಲದ ಯೋಜನೆಯಲ್ಲಿ 2021 ಮತ್ತು 2022ರಲ್ಲಿ ಅವ್ಯವಹಾರ ನಡೆದಿತ್ತು. ನಿಗಮದ ಅಧಿಕಾರಿಗಳು ಸಾಲದ ನೆಪದಲ್ಲಿ ಜೀವಾ ಅವರ ಮಾಲೀಕತ್ವದ ಅನ್ನಿಕಾ ಎಂಟರ್‌ಪ್ರೈಸಸ್‌ಗೆ ಅಕ್ರಮವಾಗಿ 7.16 ಕೋಟಿ ರೂ. ಮತ್ತು ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್ ಸಂಸ್ಥೆಗೆ 3.79 ಕೋಟಿ ರೂ. ವರ್ಗಾಯಿಸಿದ್ದರು ಎನ್ನುವ ವಿಚಾರದ ಬಗ್ಗೆ ತನಿಖೆ ನಡೆಸಲಾಗಿತ್ತು. ಕಾಂಗ್ರೆಸ್ ಸರ್ಕಾರ ತನಿಖೆಗೆ ನೇಮಿಸಿದ್ದ ಸಿಐಡಿ ಅಧಿಕಾರಿಗಳು ಜೀವಾ ಸೇರಿದಂತೆ ಬೋವಿ ಅಭಿವೃದ್ಧಿ ನಿಗಮದ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿ ತನಿಖೆ ನಡೆಸಿದ್ದರು. ಇದೇ ವೇಳೆ, ವಕೀಲೆ ಜೀವಾ ಅವರನ್ನು ವಿವಸ್ತ್ರಗೊಳಿಸಿ ಹಲ್ಲೆ ಮತ್ತು ಕಿರುಕುಳ ನೀಡಲಾಗಿತ್ತು.
ಚಿತ್ರಹಿಂಸೆಯಿಂದ ಬೇಸತ್ತ ಜೀವಾ ಅವರು ಬನಶಂಕರಿಯ ರಾಘವೇಂದ್ರ ಲೇಔಟ್‌ನ ಮನೆಯಲ್ಲಿ 2024ರ ನ.22ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಡಿವೈಎಸ್‌ಪಿ ಕನಕಲಕ್ಷ್ಮಿ ಅವರ ಕಿರುಕುಳ ಮತ್ತು ಚಿತ್ರಹಿಂಸೆಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ಸುದೀರ್ಘ ಪತ್ರ ಬರೆದಿಟ್ಟಿದ್ದರು. ಜೀವಾ ಅವರ ಸಹೋದರಿ ಸಂಗೀತಾ ಅವರು ಕನಕಲಕ್ಷ್ಮಿ ವಿರುದ್ಧ ಬನಶಂಕರಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಹೈಕೋರ್ಟ್ ಪ್ರಕರಣದ ತನಿಖೆಗೆ ಸಿಬಿಐ ಎಸ್‌ಪಿ ವಿನಾಯಕ್ ವರ್ಮಾ, ಸಿಸಿಬಿ ಡಿಸಿಪಿ ಅಕ್ಷಯ್ ಮಚಿಂದ್ರ, ನಿಶಾ ಜೇಮ್ಸ್ ಅವರನ್ನು ಒಳಗೊಂಡ ಎಸ್‌ಐಟಿ ರಚಿಸಿತ್ತು.
A Special Investigation Team (SIT) of Karnataka Police has submitted its final report in connection with the suicide of a 33-year-old Bengaluru-based lawyer, who had accused CID deputy superintendent of police (DySP) BM Kanakalakshmi of harassment and torture during questioning in an inquiry she attended in November 2024.
15-04-25 08:44 pm
Bangalore Correspondent
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
15-04-25 09:57 pm
Mangalore Correspondent
Drowning, Surathkal Beach, Mangalore, News: ಮ...
15-04-25 09:21 pm
ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ...
14-04-25 09:20 pm
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm