ಬ್ರೇಕಿಂಗ್ ನ್ಯೂಸ್
15-04-25 08:44 pm Bangalore Correspondent ಕರ್ನಾಟಕ
ಬೆಂಗಳೂರು, ಏ 15: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಪತ್ನಿಗೆ ಅಕ್ರಮವಾಗಿ ನಿವೇಶನ ಪಡೆದ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ವರದಿ (ಆರೋಪ ಮುಕ್ತ)ಯನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವೂ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೋರ್ಟ್ ತಿಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಪ್ರಕರಣದ ವಿಚಾರಣೆ ಪೂರ್ಣಗೊಂಡಿಲ್ಲ. ಆದ್ದರಿಂದ ಲೋಕಾಯುಕ್ತರು ವಿಚಾರಣೆ ಮುಂದುವರೆಸಬಹುದಾಗಿದೆ ಎಂದು ತಿಳಿಸಿ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿದರು.
ಪ್ರಕರಣದಲ್ಲಿ ನೊಂದ ವ್ಯಕ್ತಿಯಂತೆ ಅರ್ಜಿ ಸಲ್ಲಿಸುವುದಕ್ಕೆ ಜಾರಿ ನಿರ್ದೇಶನಾಲಯಕ್ಕೆ ಅವಕಾಶ ನೀಡಿದ ನ್ಯಾಯಾಲಯವು, ತನಿಖೆ ಮುಂದುವರೆಸಲು ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.
ಬಿ-ವರದಿ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಲು ಲೋಕಾಯುಕ್ತ ಪೊಲೀಸರು ನ್ಯಾಯಾಲಯದ ಅನುಮತಿ ಕೋರಿದ್ದರು. ಅದರಂತೆ ನ್ಯಾಯಾಲಯ ಅನುಮತಿ ನೀಡಿ ವಿಚಾರಣೆಯನ್ನು ಮುಂದುವರೆಸಲು ಅವಕಾಶ ನೀಡಿದ್ದು, ತನಿಖಾ ವರದಿಯನ್ನು ಆಧರಿಸಿ ಮುಂದಿನ ಆದೇಶದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.
ಈ ಹಿಂದೆ ನಡೆಸಿದ್ದ ವಿಚಾರಣೆ ವೇಳೆ, ಜಾರಿ ನಿರ್ದೇಶನಾಲಯದ ಪರ ವಾದ ಮಂಡಿಸಿದ ವಕೀಲರು, ತನಿಖೆಯಲ್ಲಿ ಕೆಲವು ಅಂಶಗಳು ಪತ್ತೆಯಾಗಿದ್ದು, ಅದನ್ನು ಲೋಕಾಯುಕ್ತ ಪೊಲೀಸರ ಜತೆ ಹಂಚಿಕೊಳ್ಳಲಾಗಿತ್ತು. ಆದರೆ, ಆ ಅಂಶಗಳನ್ನು ಪರಿಗಣಿಸದೇ ಲೋಕಾಯುಕ್ತ ಪೊಲೀಸರು ಬಿ-ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ ಎಂದು ವಿವರಿಸಿದ್ದರು.
ಇದಕ್ಕೆ ನ್ಯಾಯಾಧೀಶರು, ನ್ಯಾಯಾಲಯವು ಬಿ ರಿಪೋರ್ಟ್ ಅನ್ನು ಒಪ್ಪಿಕೊಂಡರೆ ನಿಮ್ಮ ನಿಲುವು ಏನು ಎಂದು ಪ್ರಶ್ನಿಸಿದರು. ಈ ವೇಳೆ ಇಡಿ ಪರ ವಕೀಲರು, ಬಿ ರಿಪೋರ್ಟ್ ಅಂಗೀಕರಿಸಿದ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು. ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಇಡಿಗೆ ಬಿ-ರಿಪೋರ್ಟ್ ಪ್ರಶ್ನಿಸಲು ಅಧಿಕಾರ ಇದೆ ಎಂದು ಪೀಠಕ್ಕೆ ತಿಳಿಸಿದರು.
ಇ.ಡಿ ಅಧಿಕಾರಿಗಳಿಗೆ ತಕರಾರು ಅರ್ಜಿ ಸಲ್ಲಿಸಲು ಅಧಿಕಾರ ಇದೆಯೇ ಎಂಬುದರ ಕುರಿತು ಲೋಕಾಯುಕ್ತ ಪೊಲೀಸರ ಪರ ವಕೀಲರನ್ನು ನ್ಯಾಯಾಧೀಶರು ಪ್ರಶ್ನಿಸಿದರು. ಅಲ್ಲದೇ, ಬಿ ರಿಪೋರ್ಟ್ ಅನ್ನು ಇಡಿ ಅಧಿಕಾರಿಗಳು ಪ್ರಶ್ನೆ ಮಾಡುವುದಕ್ಕೆ ಅಧಿಕಾರ ಇದೆಯೇ ಎಂಬುದಕ್ಕೆ ಸ್ಪಷ್ಟನೆ ನೀಡುವಂತೆ ಲೋಕಾಯುಕ್ತ ಪರ ವಕೀಲರಿಗೆ ಸೂಚನೆ ನೀಡಿತ್ತು.
ಈ ಹಿಂದೆ ಪ್ರಕರಣ ಸಂಬಂಧ ಸ್ನೇಹಮಯಿ ಕೃಷ್ಣ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಸಾಕಷ್ಟು ಅಕ್ರಮಗಳಾಗಿವೆ. ಅಲ್ಲದೆ, ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ತನಿಖಾಧಿಕಾರಿಗಳಿಗೆ ನೀಡಲಾಗಿತ್ತು. ಆದರೂ, ಕ್ಲೀನ್ ಚಿಟ್ ನೀಡಿದ್ದಾರೆ. ಆದ್ದರಿಂದ ಬಿ.ವರದಿ ತಿರಸ್ಕರಿಸಬೇಕು ಎಂದು ಕೋರಿದ್ದರು.
The Special Court for MLAs and MPs on Tuesday, April 15 ruled that a decision on the closure report in the Mysuru Urban Development Authority (MUDA) case—where chief minister Siddaramaiah and his family members have been named—will be made only after the Lokayukta completes its ongoing investigation.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm