ಬ್ರೇಕಿಂಗ್ ನ್ಯೂಸ್
16-04-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಎ.16 : ರಾಜ್ಯದಲ್ಲಿ ಲಿಂಗಾಯತರನ್ನು ಹಾಗೂ ಒಕ್ಕಲಿಗರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ? ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಅವರದ್ದೇ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಸವಾಲು ಹಾಕಿದ್ದಾರೆ. ಜಾತಿ ಗಣತಿ ವರದಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಮನೂರು ಶಿವಶಂಕರಪ್ಪ, ಸುಮ್ಮನೆ ಜಾತಿ ಗಣತಿ ವರದಿ ಬಿಡುಗಡೆ ಮಾಡ್ತೀವಿ ಅಂತ ಹೇಳ್ತಿದಾರೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಫಸ್ಟ್ ಲಿಂಗಾಯತರು, ಸೆಕೆಂಡ್ ಒಕ್ಕಲಿಗರು ಇದ್ದಾರೆ. ಅವರು ನಮ್ಮನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ ಅಂತ ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ಪ್ರಶ್ನಿಸಿದ್ದಾರೆ. ವೀರಶೈವ ಲಿಂಗಾಯತ ಮಹಾಸಭಾ ಈಗಾಗಲೇ ಸಭೆ ನಡೆಸಿದ್ದೇವೆ. ಅಗತ್ಯ ಬಿದ್ದರೆ ಲಿಂಗಾಯತರು ಹಾಗೂ ಒಕ್ಕಲಿಗರು ಸೇರಿ ಹೋರಾಟ ಮಾಡುತ್ತೇವೆ ಎಂದು ಶಾಮನೂರು ಎಚ್ಚರಿಸಿದ್ದಾರೆ.
ರಾಜ್ಯದಲ್ಲಿ ರಕ್ತಕ್ರಾಂತಿ ; ಬಿಸಿ ಪಾಟೀಲ್, ಶ್ರೀರಾಮುಲು
ಒತ್ತಾಯಪೂರ್ವಕವಾಗಿ ಜಾತಿ ಜನಗಣತಿ ಜಾರಿಗೆ ತರಲು ಹೋದರೆ ರಾಜ್ಯದಲ್ಲಿ ರಕ್ತಕ್ರಾಂತಿ ಆಗುತ್ತದೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಬಿ.ಸಿ.ಪಾಟೀಲ್ ಎಚ್ಚರಿಸಿದ್ದಾರೆ. ಜಾತಿಗಣತಿಯಿಂದ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಆಗುತ್ತಿದೆ, ಜಾತಿ ಗಣತಿ ವರದಿಯೇ ಅವೈಜ್ಞಾನಿಕ. ರಾಜ್ಯ ಸರ್ಕಾರ ಮನಸ್ಸಿಗೆ ಬಂದಂತೆ ಜನಗಣತಿ ಮಾಡಿದೆ ಎಂದು ಆರೋಪಿಸಿದ್ದಾರೆ.
ಜನಗಣತಿಯನ್ನು ಮನೆ ಮನೆಗೆ ಹೋಗಿ ಮಾಡಿಲ್ಲ. 65 ಕೋಟಿ ಹಣ ಸದ್ವಿನಿಯೋಗ ಆಗಿಲ್ಲ. ಜಾತಿ ಗಣತಿಯಲ್ಲಿ ಲಿಂಗಾಯತರ ಸಂಖ್ಯೆಯನ್ನ ಕಡಿಮೆ ತೋರಿಸಲಾಗಿದೆ. ಇದು ಸಮಾಜವನ್ನ ಇಬ್ಬಾಗ ಮಾಡುವ ಹುನ್ನಾರ. ಲಿಂಗಾಯತರನ್ನ ಎರಡು ಭಾಗ ಮಾಡುವುದು ಮಹಾ ಅಪರಾಧ ಎಂದು ಹೇಳಿದ್ದಾರೆ.
ಇಂತಹ ವಿಷಯದಲ್ಲಿ ಸಮಾಜದಿಂದ ಮಠಾಧೀಶರು ನೇತೃತ್ವ ವಹಿಸಿ ಹೋರಾಟಕ್ಕೆ ಇಳಿಯಬೇಕು. ಶಾಮನೂರು ಶಿವಶಂಕರಪ್ಪ ಅವರು ಸಭೆ ಕರೆದರೆ ಸಭೆಗೆ ಹೋಗ್ತೀವಿ ಎಂದು ಬಿಸಿ ಪಾಟೀಲ್ ಹೇಳಿದ್ದಾರೆ. ಇದೇ ವೇಳೆ, ವಾಲ್ಮೀಕಿ ಸಮುದಾಯದ ಮುಖಂಡ ಮಾಜಿ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿ, ಎಸ್ಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯ ಮಾಡಿದರೆ ರಾಜ್ಯದಲ್ಲಿ ರಕ್ತಪಾತ ಆಗುತ್ತದೆ. ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡುವ ಜಾತಿಗಣತಿ ವರದಿಯನ್ನು ನಾವು ಯಾವುದೇ ಕಾರಣಕ್ಕು ಒಪ್ಪಲ್ಲ ಎಂದು ಹೇಳಿದ್ದಾರೆ.
In a scathing criticism of Karnataka Chief Minister Siddaramaiah, veteran politician Shamanur Shivashankarappa has questioned the current leadership's ability to address the needs and aspirations of the state's influential Lingayat and Vokkaliga communities. Speaking at a recent public gathering, Shamanur emphasized the critical role these communities play in Karnataka's political landscape and hinted at a growing discontent among their members regarding the government's performance.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm