ಬ್ರೇಕಿಂಗ್ ನ್ಯೂಸ್
22-04-25 01:00 pm Bangalore Correspondent ಕರ್ನಾಟಕ
ಬೆಂಗಳೂರು, ಎ.22 : ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಭಾರೀ ಆಕ್ರೋಶಕ್ಕೆ ಗುರಿಯಾಗಿ ತೀವ್ರ ವಿವಾದಕ್ಕೆ ತಿರುಗಿದೆ. ಇದರ ಬೆನ್ನಲ್ಲೇ ಆಕ್ರೋಶದ ಕಾವನ್ನು ಕಡಿಮೆಗೊಳಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳ ಕ್ರಮಕ್ಕೆ ರಾಜ್ಯ ಸರ್ಕಾರವೇ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ವಿವಾದ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮ ಬಾಹಿರವಾದುದ್ದು. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ಅದು ಬಿಟ್ಟು ಅನವಶ್ಯಕವಾಗಿ ಇತರರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದ ನಿಯಮ ಹೇರಿಕೆ ಮಾಡಬಾರದು. ಇಂಥದ್ದನ್ನು ನಾವು ಸಹಿಸುವುದಿಲ್ಲ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ ರೋಹಿತ್ ವೆಮುಲಾ ಕಾಯ್ದೆ ಕುರಿತು ಮಾತನಾಡಿದ ಅವರು, ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ, ಈ ಬಗ್ಗೆ ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದೇನೆ. ಸಾಧ್ಯತೆಗಳನ್ನು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜನಿವಾರ ವಿವಾದಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರೂ ಖಂಡನೆ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಜನಿವಾರ ಕಳಚಿದ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ನೀಡಲು ಸರ್ಕಾರ ಬದ್ಧ ಎಂದು ಹೇಳಿದ್ದಾರೆ. ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ಕರ್ಮ ಹಲವಾದರೂ ನಿಷ್ಠೆ ಒಂದೇ, ದೇವನೊಬ್ಬ ನಾಮ ಹಲವು. ಧರ್ಮದ ಆಚರಣೆ ವಿಚಾರದಲ್ಲಿ ಸರ್ಕಾರ ಎಂದಿಗೂ ಮಧ್ಯಪ್ರವೇಶ ಮಾಡುವುದಿಲ್ಲ. ಆಯಾ ಧರ್ಮ ಉಳಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ನಮ್ಮ ಸರ್ಕಾರ ಎಲ್ಲರನ್ನೂ ಸಾಮರಸ್ಯದಿಂದ ಒಗ್ಗೂಡಿಸಿಕೊಂಡು ಹೋಗುವ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯುತ್ತದೆ. ಬುಧವಾರ ಆದಿಚುಂಚನಗಿರಿ ಪಿಯು ಕಾಲೇಜು ಪರೀಕ್ಷಾ ಕೇಂದ್ರದ ಭದ್ರತಾ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯುವಂತೆ ಹೇಳಿದ್ದಾರೆ. ಈ ವೇಳೆ ವಿದ್ಯಾರ್ಥಿಯೊಬ್ಬ ಜನಿವಾರ ತೆಗೆಯಲು ನಿರಾಕರಿಸಿದರೆ, ಮತ್ತಿಬ್ಬರು ಜನಿವಾರ ತೆಗೆದು ಪರೀಕ್ಷಾ ಕೊಠಡಿ ಪ್ರವೇಶಿಸಿದ್ದರು.
Call for Reform, New Internal Reservation Policy Advocated to Address Inequities for Children of Street Sweepers and District Collectors.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 05:14 pm
Mangalore Correspondent
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm