ಬ್ರೇಕಿಂಗ್ ನ್ಯೂಸ್
23-04-25 06:54 pm Bangalore Correspondent ಕರ್ನಾಟಕ
ಬೆಂಗಳೂರು, ಎ.23 : ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕಾಗಿದೆ. ಇದಕ್ಕಾಗಿ ನಾವು ಕೇಂದ್ರ ಸರ್ಕಾರದ ಜೊತೆ ನಿಲ್ಲುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ನೇತೃತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ ಎಂದು ತಿಳಿಸಿದರು.
ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಇವುಗಳನ್ನು ಬುಡ ಸಮೇತ ಕಿತ್ತೊಗೆಯಬೇಕು. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಹೇಳಿದರು.
ಈ ಘಟನೆ ಪ್ರವಾಸಿಗರು ಹಾಗೂ ದೇಶದ ಜನರ ಮೇಲೆ ಪ್ರಭಾವ ಬೀರುವುದರಿಂದ ಕೇಂದ್ರ ಸರ್ಕಾರ ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ನಾನು ಈಗಷ್ಟೇ ದಾಳಿಯಲ್ಲಿ ಮೃತರ ಕುಟುಂಬದವರ ಜತೆ ಚರ್ಚೆ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿದ್ದು, ಮೃತರ ಕುಟುಂಬದವರನ್ನು ಭೇಟಿ ಮಾಡುವಂತೆ ತಿಳಿಸಿದ್ದೇನೆ ಎಂದರು.
Karnataka Deputy Chief Minister DK Shivakumar on Wednesday urged the Centre to convene an all-party meeting in the wake of the Pahalgam terror attack in Jammu and Kashmir, which claimed the lives of three individuals from Karnataka.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm