ಬ್ರೇಕಿಂಗ್ ನ್ಯೂಸ್
23-04-25 08:04 pm Bangalore Correspondent ಕರ್ನಾಟಕ
ಬೆಂಗಳೂರು, ಏ.23: ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿ ಭಯೋತ್ಪಾದಕರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ರಾಜ್ಯದ ಮೂವರು ಮೃತಪಟ್ಟಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಿವಮೊಗ್ಗದ ಮಂಜುನಾಥ್ ರಾವ್, ಬೆಂಗಳೂರಿನ ಭರತ್ ಭೂಷಣ್ ಹಾಗೂ ಮಧುಸೂದನ್ ರಾವ್ (ತೆಲಂಗಾಣ ಮೂಲ) ಉಗ್ರರ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ.
ಈ ಘಟನೆಯಲ್ಲಿ 26 ಜನ ಮೃತಪಟ್ಟು, 17 ಜನ ಗಾಯಗೊಂಡಿದ್ದಾರೆ. ಕೃತ್ಯ ಎಸಗಿದವರ ಸದೆಬಡಿಯಲು ಸೇನೆ ಕಾರ್ಯಾಚರಣೆ ಆರಂಭಿಸಿದೆ.
ಇನ್ನು ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕನ್ನಡಿಗರನ್ನು ಕರೆತರಲು ಕಾರ್ಮಿಕ ಸಚಿವರಿಗೆ ಸೂಚನೆ
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು.
ಕಾಶ್ಮೀರದ ಪಹಲ್ಲಾಮ್ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.
ದೇಶದ ಜನರಿಗೆ ಕೇಂದ್ರ ಭದ್ರತೆ ಒದಗಿಸಬೇಕು
ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ, ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪೆಹಲ್ಲಾಮಿನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.
Chief Minister Siddaramaiah on Wednesday announced a compensation of Rs 10 lakh each to the families of victims of the terrorist attack in Pahalgam in Kashmir. Three tourists from Karnataka were among the 26 persons died in the terror strike. All three men had gone to the valley along with their wives and children. Manjunath Rao was a real estate businessman in Shivamogga, while Madhusudan was a software engineer living in Ramamurthynagar in Bengaluru. Bharath Bhushan had recently quit his software job to run a family business in Mathikere in Bengaluru.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 06:36 pm
Mangalore Correspondent
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm