ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟಹಾಕಿ ; ಗುಪ್ತಚರ ಇಲಾಖೆ, ಯೋಧರ ಬಗ್ಗೆ ಅನುಮಾನ ಪಟ್ಟ ಕಾಂಗ್ರೆಸ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ

25-04-25 06:30 pm       Bangalore Correspondent   ಕರ್ನಾಟಕ

ಬೆಂಗಳೂರು: ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ. ಅವರಿಗೆ ನೆರವು ಕೊಡುವುದು, ಬೇಲ್‌ ಕೊಡಿಸುವುದು, ಕಾನೂನು ಸಹಾಯ ಮಾಡುವುದು ನಡೆಯುತ್ತಿದೆ. ಇಂತಹವರನ್ನು ಕೂಡ ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು.

ಬೆಂಗಳೂರು, ಏ 25: ಬೆಂಗಳೂರು: ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ. ಅವರಿಗೆ ನೆರವು ಕೊಡುವುದು, ಬೇಲ್‌ ಕೊಡಿಸುವುದು, ಕಾನೂನು ಸಹಾಯ ಮಾಡುವುದು ನಡೆಯುತ್ತಿದೆ. ಇಂತಹವರನ್ನು ಕೂಡ ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ದೇಶದ ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿದರೆ, ಮತ್ತೆ ಇವರಿಗೆ ಯಾರ ಮೇಲೆ ನಂಬಿಕೆ ಇದೆ? ಇಡೀ ದೇಶ ಒಂದಾಗಿ ಭಯೋತ್ಪಾದಕ ದಾಳಿಯನ್ನು ಖಂಡಿಸಬೇಕು. ಉಗ್ರರು ಹಿಂದೂ ಎಂದು ಹೇಳಿಯೇ ಹುಡುಕಿ ಕೊಂದಿದ್ದಾರೆ. ಬೇಹುಗಾರಿಕೆ ಸರಿಯಲ್ಲ, ಯೋಧರು ಸರಿಯಲ್ಲ ಎಂದು ಟೀಕೆ ಮಾಡುವುದು ಸರಿಯಿಲ್ಲ ಎಂದರು

ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟವಾದಾಗ ಯಾರು ವಿಫಲರಾಗಿದ್ದರು? ಕುಕ್ಕರ್‌ ಬಾಂಬ್‌ ಸ್ಪೋಟಗೊಂಡಾಗ ಯಾರು ವಿಫಲರಾಗಿದ್ದರು? ಸಚಿವರ ವಿರುದ್ಧ ಹನಿಟ್ರ್ಯಾಪ್‌ ನಡೆಯುತ್ತಿರುವಾಗ ಯಾರು ವಿಫಲರಾಗಿದ್ದಾರೆ? ಇಂತಹ ಕಾಂಗ್ರೆಸ್‌ ಪಕ್ಷ ದೇಶದ ಯೋಧರ ಬಗ್ಗೆ ಮಾತಾಡುವುದು ಬೇಡ ಎಂದು ಒತ್ತಾಯಿಸಿದರು.

ಜಮ್ಮು ಕಾಶ್ಮೀರದ ದಾಳಿಯಲ್ಲಿ ಭಯೋತ್ಪಾದಕರು ಕೊಲ್ಲುವ ಮೊದಲು ಒಕ್ಕಲಿಗ, ಬ್ರಾಹ್ಮಣ, ಆಂಧ್ರದವರು ಅಥವಾ ಕನ್ನಡಿಗರೆಂದು ಕೇಳದೆ, "ನೀನು ಹಿಂದೂನಾ?" ಎಂದು ಪ್ರಶ್ನಿಸಿ ಗುಂಡಿಕ್ಕಿದ್ದಾರೆ. ಈ ದಾಳಿಗಳು ಹಿಂದೂಗಳನ್ನು ಗುರಿಯಾಗಿಟ್ಟುಕೊಂಡೇ ಮಾಡಲಾಗಿದೆ ಎಂದು ಹೇಳಿದ್ದಾರೆ. ಇನ್ನು "ತಿನ್ನಲು ಅನ್ನವಿಲ್ಲ, ಕುಡಿಯಲು ನೀರಿಲ್ಲದಿದ್ದರೂ, ಕೆಲವರ ಡಿಎನ್‌ಎನಲ್ಲೇ ಭಯೋತ್ಪಾದನೆಯೇ ತುಂಬಿದೆ" ಎಂದು ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ

Speaking to the media at the BJP office in Malleshwaram, he said that assistance, bail and legal assistance are being provided to them. Prime Minister Narendra Modi has clearly said that even such people will not be spared.