ಬ್ರೇಕಿಂಗ್ ನ್ಯೂಸ್
25-04-25 07:32 pm Bangalore Correspondent ಕರ್ನಾಟಕ
ಬೆಂಗಳೂರು, ಎ.25 : ಇಸ್ರೋ ಮಾಜಿ ಅಧ್ಯಕ್ಷ ಮತ್ತು ದೇಶದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಕೆ. ಕಸ್ತೂರಿರಂಗನ್(84) ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಅಸೌಖ್ಯದಲ್ಲಿದ್ದ ಕಸ್ತೂರಿರಂಗನ್ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದು ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಸ್ತೂರಿರಂಗನ್ ಅವರು ಈ ಹಿಂದೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 2003-09ರ ಅವಧಿಯಲ್ಲಿ ರಾಜ್ಯಸಭೆ ಸದಸ್ಯರಾಗಿ ಮತ್ತು ಭಾರತದ ಯೋಜನಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಬಾಹ್ಯಾಕಾಶ ಕ್ಷೇತ್ರದಲ್ಲಿನ ಅತ್ಯುತ್ತಮ ಕೊಡುಗೆಗಳಿಗಾಗಿ ಕಸ್ತೂರಿರಂಗನ್ ಅವರಿಗೆ ಎಂಜಿನಿಯರಿಂಗ್ನಲ್ಲಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ, ಏರೋಸ್ಪೇಸ್ನಲ್ಲಿ ಡಾ. ವಿಕ್ರಮ್ ಸಾರಾಭಾಯ್ ಪ್ರೇರಿತ್ ಪ್ರಶಸ್ತಿ, ಖಗೋಳಶಾಸ್ತ್ರದಲ್ಲಿ ಎಂಪಿ ಬಿರ್ಲಾ ಸ್ಮಾರಕ ಪ್ರಶಸ್ತಿ, ಅನ್ವಯಿಕ ವಿಜ್ಞಾನದಲ್ಲಿ ಎಂಎಂ ಚುಗನಿ ಸ್ಮಾರಕ ಪ್ರಶಸ್ತಿ, ವಿಜ್ಞಾನದಲ್ಲಿ ಎಚ್ಕೆ ಫಿರೋದಿಯಾ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ. ಅಷ್ಟೇ ಅಲ್ಲದೆ, ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳು ಕೂಡ ಬಂದಿವೆ. ಖಗೋಳಶಾಸ್ತ್ರ, ಬಾಹ್ಯಾಕಾಶ ವಿಜ್ಞಾನ, ಬಾಹ್ಯಾಕಾಶ ಅಪ್ಲಿಕೇಷನ್ಸ್ಗಳ ಕ್ಷೇತ್ರಗಳಿಗೆ ಸಂಬಂಧಿಸಿ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಕಸ್ತೂರಿರಂಗನ್ ಅವರ 200ಕ್ಕೂ ಹೆಚ್ಚು ಪ್ರಬಂಧಗಳು ಪ್ರಕಟವಾಗಿವೆ.
2013ರಲ್ಲಿ ಸಲ್ಲಿಸಲ್ಪಟ್ಟ ಪಶ್ಚಿಮ ಘಟ್ಟಗಳ ಕುರಿತಾದ ಕಸ್ತೂರಿರಂಗನ್ ವರದಿ ಅಪೂರ್ವ ಜೀವ ವೈವಿಧ್ಯಗಳ ತಾಣವಾಗಿರುವ ಪಶ್ಚಿಮ ಘಟ್ಟಗಳ ಶೇ. 37ರಷ್ಟು ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲು ಸೂಚಿಸಿದ್ದರು. ಆದರೆ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಜನರು, ಎಸ್ಟೇಟ್ ಮಾಫಿಯಾಗಳ ವಿರೋಧದಿಂದಾಗಿ ವರದಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿರಲಿಲ್ಲ. ಶಿಕ್ಷಣ ವ್ಯವಸ್ಥೆಯಲ್ಲಿ ಸಮಾನತೆ ಮತ್ತು ಗುಣಮಟ್ಟ ಹೆಚ್ಚಿಸುವ ದೃಷ್ಟಿಯಿಂದ ದೇಶಾದ್ಯಂತ ಎನ್ಇಪಿ ಶಿಕ್ಷಣ ನೀತಿ ತರಲು ಪ್ರಸ್ತಾಪಿಸಿದ್ದರು.
Former Indian Space Research Organisation (Isro) chairman K Kasturirangan passed away in his Bengaluru residence on Friday. According to a statement by Isro, Kasturirangan died at 10.43 am. His body will be kept at Raman Research Institute in Bengaluru on Sunday, April 27 between 10 am and noon, for the public to pay respect.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm