ಬ್ರೇಕಿಂಗ್ ನ್ಯೂಸ್
27-04-25 07:13 pm HK News Desk ಕರ್ನಾಟಕ
ಕಲಬುರಗಿ, ಏ 27: ಕಲಬುರಗಿ ನಗರದಲ್ಲಿ ಒಟ್ಟು 9 ಜನ ಪಾಕಿಸ್ತಾನದ ಪ್ರಜೆಗಳು ಅಧಿಕೃತವಾಗಿ ವಾಸವಿದ್ದು, ಅವರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಹಿಂತಿರುಗಲು ಸೂಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ತಿಳಿಸಿದ್ದಾರೆ.
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, "ಈ 9 ಜನರಲ್ಲಿ ಇಬ್ಬರು ದೀರ್ಘಾವಧಿ ವೀಸಾ ಹೊಂದಿದ್ದು, ಉಳಿದ 7 ಜನರು ಸಂದರ್ಶಕರ ವೀಸಾ ಹೊಂದಿದ್ದಾರೆ. ಇವರು ಕಳೆದ 20 ವರ್ಷಗಳಿಂದ ಕಲಬುರಗಿಯಲ್ಲಿ ವಾಸವಾಗಿದ್ದಾರೆ. ಎಲ್ಲರಿಗೂ ನಿಯಮಾನುಸಾರ ಹಿಂತಿರುಗುವಂತೆ ಸೂಚನೆ ನೀಡಲಾಗಿದೆ" ಎಂದು ಹೇಳಿದರು.
"ವಿಸಿಟರ್ಸ್ ವೀಸಾ ಹೊಂದಿದ ಏಳು ಜನರಲ್ಲಿ ಒಬ್ಬರು ಮಹಿಳೆ ಅನುಮತಿ ಪಡೆದು ಅಮೆರಿಕಾಕ್ಕೆ ತೆರಳಿದ್ದಾರೆ. ಉಳಿದ ಆರು ಜನರಲ್ಲಿ ಮೂವರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ" ಎಂದು ಮಾಹಿತಿ ನೀಡಿದರು.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದಿದ್ದರು. ಇದರಿಂದ ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆ ರದ್ದುಗೊಳಿಸಿ ಪಾಕ್ಗೆ ಕಠಿಣ ಸಂದೇಶ ರವಾನಿಸಿದೆ. ಹೀಗಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ವಾಪಸ್ ತೆರಳಲು ಗಡುವು ನೀಡಲಾಗಿದೆ. ಕರ್ನಾಟಕದ ಮೈಸೂರು, ಉತ್ತರ ಕನ್ನಡ, ತುಮಕೂರು ಮತ್ತು ದಾವಣಗೆರೆ ಮುಂತಾದ ಕಡೆಗಳಲ್ಲಿ ಒಟ್ಟು 92 ಜನ ಪಾಕ್ ಪ್ರಜೆಗಳು ವಾಸವಿದ್ದಾರೆ ಎಂದು ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಕಾರ್ಯಾಚರಣೆಯಲ್ಲಿ ತಿಳಿದು ಬಂದಿದೆ.
ಪ್ರಾದೇಶಿಕ ನೋಂದಣಿ ಕೇಂದ್ರ (FRRO) ದಲ್ಲಿ ನೋಂದಾಯಿಸಲ್ಪಟ್ಟಿರುವ ಪಾಕ್ ಪ್ರಜೆಗಳ ಕುರಿತು ಈಗಾಗಲೇ ಆಯಾ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ. ಅದರನ್ವಯ ಆಯಾ ಜಿಲ್ಲೆಗಳಲ್ಲಿರುವ ಪಾಕ್ ಪ್ರಜೆಗಳು ಭಾರತ ತೊರೆಯಬೇಕಿದೆ. ನೋಂದಾಯಿಸಲ್ಪಡದ ಹಾಗೂ ಅನಧಿಕೃತವಾಗಿ ನೆಲೆಸಿರುವವರನ್ನ ಸ್ಥಳಿಯ ಪೊಲೀಸರು ಪತ್ತೆಹಚ್ಚಿ ಬಂಧಿಸಿ ಬಂಧನ ಕೇಂದ್ರದಲ್ಲಿರಿಸುತ್ತಾರೆ. ನಂತರ ರಾಜ್ಯ ಗೃಹ ಇಲಾಖೆಯಿಂದ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಲಾಗುತ್ತದೆ.
ಕೇಂದ್ರ ಗೃಹ ಸಚಿವಾಲಯದ ಮೂಲಕ ಭಾರತದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗುತ್ತದೆ. ಬಳಿಕ ರಾಯಭಾರ ಕಚೇರಿಯ ಅಧಿಕಾರಿಗಳು ವೆರಿಫಿಕೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ ತಮ್ಮ ಪ್ರಜೆಗಳನ್ನ ವಾಪಾಸ್ ಕಳಿಸಬೇಕಾಗುತ್ತದೆ.
9 Pakistani Nationals Residing in Kalaburagi for 20 Years, Police Commissioner Sharanappa Issues Deportation Notice.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 02:30 pm
Mangalore Correspondent
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm