ಬ್ರೇಕಿಂಗ್ ನ್ಯೂಸ್
29-04-25 04:28 pm HK News Desk ಕರ್ನಾಟಕ
ಬೆಂಗಳೂರು, ಎ.29 : ಮಂಗಳೂರಿನಲ್ಲಿ ಗಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ವ್ಯಕ್ತಿಯೊಬ್ಬ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಕ್ಕೆ ಅಪರಿಚಿತ ವ್ಯಕ್ತಿಯ ಮೇಲೆ ಗುಂಪಿನಿಂದ ಹಲ್ಲೆ ಆಗಿರುವ ಮಾಹಿತಿ ಲಭಿಸಿದೆ. ಹಲ್ಲೆ ನಂತರ, ಆ ವ್ಯಕ್ತಿ ಸಾವಿಗೀಡಾಗಿದ್ದಾನೆ. ವ್ಯಕ್ತಿಯ ಹೆಸರು ಗೊತ್ತಾಗಿಲ್ಲ. ಹೊರ ರಾಜ್ಯದ ವ್ಯಕ್ತಿ ಇರಬೇಕೆಂದು ಮಾಹಿತಿ ಇದೆ. ಘಟನೆ ಸಂಬಂಧಿಸಿ ಪೊಲೀಸರು 10-12 ಮಂದಿಯನ್ನು ಬಂಧಿಸಿದ್ದಾರೆ ಎಂದು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ರಾಷ್ಟ್ರೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಲೋಕಲ್ ಕ್ರಿಕೆಟ್ ಆಡುತ್ತಿದ್ದಾಗ ವ್ಯಕ್ತಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಇದರಿಂದ ಸಿಟ್ಟುಗೊಂಡ ಉದ್ರಿಕ್ತರು ಗುಂಪು ಸೇರಿ ಹಲ್ಲೆ ಕೃತ್ಯ ನಡೆಸಿದ್ದಾರೆ. ಇದರಿಂದ ಆತನಿಗೆ ಗಾಯವಾಗಿತ್ತು. ಗಾಯಗೊಂಡಿದ್ದ ವ್ಯಕ್ತಿ ಬಳಿಕ ಸಾವಿಗೀಡಾಗಿದ್ದಾನೆ. ಇನ್ನೂ ಆ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಆತನ ಹಿನ್ನೆಲೆ ಪತ್ತೆಗಾಗಿ ಪೊಲೀಸರು ತಂಡ ರಚಿಸಿದ್ದಾರೆ.
ಕರ್ನಾಟಕದಂತಹ ಶಾಂತಿಯುತ ರಾಜ್ಯದಲ್ಲಿ ಇಂತಹ ಸ್ಥಿತಿಯಾಗಬಾರದು. ಯಾವುದೇ ಕಾರಣಕ್ಕು ಕಾನೂನು ಕೈಗೆತ್ತಿಕೊಳ್ಳುವ ಸ್ಥಿತಿ ಬರಬಾರದು. ಘಟನೆ ಹಿಂದೆ ಯಾರಿದ್ದಾರೆ, ನಿರ್ದಿಷ್ಟವಾಗಿ ಯಾರಿದ್ದಾರೆ ಅಂತ ಗೊತ್ತಾಗಿಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಮಂಗಳೂರಿನಂತಹ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಸಾರ್ವಜನಿಕರು ಶಾಂತಿ, ಸಾಮರಸ್ಯ ಕಾಪಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರು ಪೊಲೀಸರು ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ 15 ಜನರನ್ನು ಬಂಧಿಸಿದ್ದಾರೆ. ಆದರೆ ಯಾವ ಕಾರಣಕ್ಕೆ ಗಲಾಟೆ ಆಗಿತ್ತು. ಹಲ್ಲೆ ಯಾವ ಕಾರಣಕ್ಕೆ ನಡೆಸಿದ್ದರು ಎನ್ನುವುದರ ಬಗ್ಗೆ ಮಾಹಿತಿ ನೀಡಿಲ್ಲ. ಆರೋಪಿಗಳನ್ನು ತನಿಖೆ ನಡೆಸಿದ ಬಳಿಕವಷ್ಟೇ ಇದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ, ದೇಶ ವಿರೋಧಿ ಘೋಷಣೆ ಕೂಗಿದ್ದಕ್ಕಾಗಿ ಗುಂಪು ಹಲ್ಲೆ ನಡೆಸಿರುವುದಾಗಿ ವದಂತಿ ಸೃಷ್ಟಿಯಾಗಿದೆ.
Mangalore Kudupu Mob Attack and Murder Incident, Man Allegedly Raised Anti National Slogans While Playing Cricket, Minister Parameshwar Responds.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm