ಬ್ರೇಕಿಂಗ್ ನ್ಯೂಸ್
02-05-25 01:40 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 02 : ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳು ಯಾರೇ ಆಗಿದ್ದರೂ ಬಿಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ ಹೇಳಿದ್ದಾರೆ. ಮಂಗಳೂರು ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಯಾರು ಕೃತ್ಯ ಎಸಗಿದ್ದಾರೆ, ಅವರನ್ನು ಯಾವುದೇ ಕಾರಣಕ್ಕು ಬಿಡುವುದಿಲ್ಲ ಎಂದರು.
ಮಂಗಳೂರು ಶಾಂತಿಗೆ ಬರುತ್ತಿತ್ತು. ಕಳೆದ ನಾಲ್ಕೈದು ದಿನದಿಂದ ಆದ ಘಟನೆ ಮತ್ತು ನಿನ್ನೆ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ನಾವು ಇದನ್ನು ಹೀಗೆ ಮುಂದುವರಿಯಲು ಯಾವುದೇ ಕಾರಣಕ್ಕು ಬಿಡುವುದಿಲ್ಲ. ಆರೋಪಿಗಳ ಪತ್ತೆಗಾಗಿ ಈಗಾಗಲೇ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದ್ದು, ಶೋಧ ನಡೆಸಿದ್ದಾರೆ. ಇನ್ನು ಮುಂದೆಯೂ ಇಂತಹ ಘಟನೆ ಆಗಲು ಬಿಡುವುದಿಲ್ಲ ಎಂದು ಹೇಳಿದರು.
ಶಾಂತಿಯನ್ನು ಕಾಪಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಮನವಿ ಮಾಡುತ್ತೇನೆ. ಸರ್ಕಾರ ಮತ್ತು ಪೊಲೀಸ್ ಇಲಾಖೆ ನಿಮ್ಮ ಜೊತೆಯಲ್ಲಿದೆ. ಶಾಂತಿ ಕಾಪಾಡಲು ಎಲ್ಲ ರೀತಿಯ ಪ್ರಯತ್ನವನ್ನು ನಾವು ಮಾಡುತ್ತೇವೆ. ಈಗಾಗಲೇ ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ಜರುಗಬಾರದು ಎಂಬ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ.
ನಿನ್ನೆಯ ಕೊಲೆಯ ಘಟನೆಯ ಕುರಿತು ಸಂಪೂರ್ಣ ವರದಿ ಕೇಳಿದ್ದೇನೆ. ತನಿಖೆ ಆರಂಭಿಸಲಾಗಿದ್ದು ಆರೋಪಿಗಳನ್ನು ಬಿಡುವುದಿಲ್ಲ. ಇದನ್ನು ಹತ್ತಿಕ್ಕಲು ಎಲ್ಲ ರೀತಿಯ ಪ್ರಯತ್ನ, ಕ್ರಮ ಕೈಗೊಂಡಿದ್ದು, ಬೆಳೆಯಲು ಬಿಡುವುದಿಲ್ಲ. ಯಾವುದೇ ಪಕ್ಷ, ಸಂಘಟನೆಯವರು ಅಥವಾ ಬೇರೆ ಯಾರೇ ಆಗಿದ್ದರೂ ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಬಿಜೆಪಿ ಮುಖಂಡರ ಆರೋಪಗಳ ಕುರಿತು ಪ್ರತಿಕ್ರಿಯಿಸಿ, ಯಾರು ಕೂಡ ಕೊಲೆ ಆಗಬೇಕು ಎಂದು ಬಯಸುವುದಿಲ್ಲ. ಜವಾಬ್ಧಾರಿಯುತ ಸರ್ಕಾರವಾಗಿ ಶಾಂತಿ ಸುವ್ಯವಸ್ಥೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಜವಾಬ್ಧಾರಿ. ಈ ಜವಾಬ್ಧಾರಿಯಿಂದ ನಾವು ನುಣುಚಿಕೊಳ್ಳುವುದಿಲ್ಲ. ಈಗಾಗಲೇ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಘಟನೆಗಳಾದಾಗ ಕಾನೂನು ಪ್ರಕಾರ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಅದೆಲ್ಲವನ್ನು ಮಾಡಿದ್ದೇವೆ. ಇದನ್ನು ಬಿಡುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಹಿಂದು ಕಾರ್ಯಕರ್ತರಿಗೆ ಜೀವಭಯವಿದೆ, ಉಳಿಗಾಲವಿಲ್ಲ ಎಂದಿರುವ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಲ್ಲಿ ಬೇರೆಯವರಿದ್ದಾರ? ಹಿಂದುಗಳಿಲ್ಲವೇ? ನಾವೆಲ್ಲ ಹಿಂದುಗಳಲ್ಲವ? ನಾವು ಬೇರೆಯವರ? ಆ ರೀತಿ ವಿಶ್ಲೇಷಣೆ ಮಾಡುವುದು ಸರಿಯಲ್ಲ. ಕೊಲೆಯಾಗಿದೆ ಆರೋಪಿಗಳನ್ನು ಹಿಡಿದು ಹಾಕುತ್ತೇವೆ. ಘಟನೆಗೆ ಬೇರೆಬೇರೆ ಬಣ್ಣಕಟ್ಟುವುದು ಬೇಡ. ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.
In a significant development in the Suhas Shetty murder case, Karnataka Home Minister Dr. G. Parameshwara on Thursday announced the formation of four special teams to apprehend the accused. The move comes amid growing public pressure and calls for swift justice in the high-profile case.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am